AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಭೈರತಿ ಸುರೇಶ್​​ ರಿಯಾಲಿಟಿ ಚೆಕ್ ವೇಳೆ ಉದ್ಧಟತನ: ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತು

ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಸಾರಿಗೆ ಸಚಿವ ಭೈರತಿ ಸುರೇಶ್​​ರನ್ನ ಬಸ್​ನಿಂದ ಕೆಳಗೆ ಇಳಿಸಿದ್ದ ಕಂಡಕ್ಟರ್​​​ನನ್ನು ಅಮಾನತುಗೊಳಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ. ಯುಪಿಐ ಪಾವತಿ ಲಭ್ಯವಿದ್ದರೂ, ಕಂಡಕ್ಟರ್ ಅದನ್ನು ಗಮನಕ್ಕೆ ತರಲು ವಿಫಲರಾಗಿದ್ದಾರೆ. ಈ ಘಟನೆಯಿಂದ ಬಿಎಂಟಿಸಿಗೆ ನಕಾರಾತ್ಮಕ ಪ್ರಚಾರ ತಂದಿದ್ದರಿಂದ, ಅಮಾನತುಗೊಳಿಸಲಾಗಿದೆ.

ಸಚಿವ ಭೈರತಿ ಸುರೇಶ್​​ ರಿಯಾಲಿಟಿ ಚೆಕ್ ವೇಳೆ ಉದ್ಧಟತನ: ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತು
ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತುImage Credit source: tv9 kannada
ಕಿರಣ್​ ಸೂರ್ಯ
| Edited By: |

Updated on: Jul 13, 2026 | 10:37 PM

Share

ಮುಖ್ಯಾಂಶಗಳು

  • ಚಿಲ್ಲರೆ ಇಲ್ಲದಿದ್ರೆ ಬಸ್​ನಿಂದ ಇಳಿಯಿರಿ ಎಂದಿದ್ದ ನಿರ್ವಾಹಕ ಅಮಾನತು
  • ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆದೇಶ
  • ಫನ್ ವರ್ಲ್ಡ್ ಬಳಿ ಬಸ್ ನಿಲುಗಡೆಗೆ ಅವಕಾಶ

ಬೆಂಗಳೂರು, ಜುಲೈ 13: ಇತ್ತೀಚೆಗೆ ಸಾರಿಗೆ ಸಚಿವ ಭೈರತಿ ಸುರೇಶ್ (Minister Byrathi Suresh)​​ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಬಸ್‌ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಸಂಚರಿಸುವ ಮೂಲಕ ರಿಯಾಲಿಟಿ ಚೆಕ್​ ಮಾಡಿದ್ದರು. ಈ ವೇಳೆ “ಚಿಲ್ಲರೆ ಕೊಡಿ, ಇಲ್ಲದಿದ್ದರೆ ಬಸ್‌ನಿಂದ ಕೆಳಗೆ ಇಳಿಯಿರಿ” ಎಂದಿದ್ದ ಚಾಲಕ ಕಂ ನಿರ್ವಾಹಕನನ್ನು ಬಿಎಂಟಿಸಿ ನಿಗಮ ಇದೀಗ ಅಮಾನತು (suspended) ಮಾಡಿದೆ. ರಾಮಕೃಷ್ಣ ಟಿ.ಜಿ ಅಮಾನತು ಆದ ಬಿಎಂಟಿಸಿ ಸಿಬ್ಬಂದಿ.

ನಡೆದಿದ್ದೇನು?

ಜುಲೈ 11ರಂದು ರಾತ್ರಿ ಸುಮಾರು 9:30ರ ವೇಳೆಗೆ ಸಾರಿಗೆ ಸಚಿವ ಭೈರತಿ ಸುರೇಶ್, ಹೆಬ್ಬಾಳದಿಂದ ಭೂಪಸಂದ್ರಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ ಏರಿದ್ದರು. ಈ ವೇಳೆ ಟಿಕೆಟ್‌ಗಾಗಿ ಸಚಿವರು ಹಣ ನೀಡಿದಾಗ ಚಾಲಕ ಕಂ ನಿರ್ವಾಹಕ ರಾಮಕೃಷ್ಣ ಟಿ.ಜಿ. 6 ಚಿಲ್ಲರೆ ನೀಡುವಂತೆ ಕೇಳಿದ್ದಾರೆ. ಸಚಿವರು ತಮ್ಮ ಬಳಿ ಚಿಲ್ಲರೆ ಇಲ್ಲ ಎಂದಿದ್ದಾರೆ. ಆಗ ನಿರ್ವಾಹಕ ಚಿಲ್ಲರೆ ನೀಡದಿದ್ದರೆ ಬಸ್‌ನಿಂದ ಇಳಿಯುವಂತೆ ಉದ್ಧಟತನದಿಂದ ವರ್ತಿಸಿದ್ದಾರೆ.

ಯುಪಿಐ ವ್ಯವಸ್ಥೆ ಇದ್ದರೂ ಮಾಹಿತಿ ನೀಡದ ಸಿಬ್ಬಂದಿ

ಬಿಎಂಟಿಸಿ ಬಸ್‌ಗಳಲ್ಲಿ 2024ರಿಂದಲೇ ಯುಪಿಐ ಮೂಲಕ ಡಿಜಿಟಲ್ ಟಿಕೆಟ್ ಪಾವತಿ ವ್ಯವಸ್ಥೆ ಜಾರಿಯಲ್ಲಿದ್ದು, ಪ್ರಸ್ತುತ ಸಂಸ್ಥೆಯ ಒಟ್ಟು ಟಿಕೆಟ್ ಆದಾಯದಲ್ಲಿ ಸುಮಾರು 53% ರಷ್ಟು ಯುಪಿಐ ಮೂಲಕವೇ ಸಂಗ್ರಹವಾಗುತ್ತಿದೆ. ಹೀಗಿರುವಾಗ ಸಾರ್ವಜನಿಕರಿಗಾಗಲಿ, ಸಚಿವರಿಗಾಗಲಿ ಯುಪಿಐ ಪಾವತಿ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡುವಲ್ಲಿ ನಿರ್ವಾಹಕ ಸಂಪೂರ್ಣ ವಿಫಲರಾಗಿದ್ದಾರೆ. ಕಂಡಕ್ಟರ್‌ನ ಈ ವರ್ತನೆಯಿಂದಾಗಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂಸ್ಥೆಯ ವಿರುದ್ಧ ನಕಾರಾತ್ಮಕ ಪ್ರಚಾರಕ್ಕೆ ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ನಿಗಮ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ನಿರ್ವಾಹಕ ರಾಮಕೃಷ್ಣರನ್ನ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಸಚಿವರ ಸೂಚನೆ ಬೆನ್ನಲ್ಲೇ ಬಸ್ ನಿಲುಗಡೆಗೆ ಅವಕಾಶ

ಇನ್ನು ಸಚಿವರ ರಿಯಾಲಿಟಿ ಚೆಕ್ ವೇಳೆ ಜಯಮಹಲ್ ರಸ್ತೆ, ಫನ್ ವರ್ಲ್ಡ್ ಸಮೀಪ ಪ್ರಯಾಣಿಕರೊಬ್ಬರು ಕೈ ಸನ್ನೆ ಮಾಡಿ ನಿಲ್ಲಿಸಲು ಸೂಚಿಸಿದರೂ ಬಸ್ ನಿಲ್ಲಿಸದೆ ಹೋಗಿರುವುದನ್ನು ಸಚಿವರು ಗಮನಿಸಿದ್ದರು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಸಚಿವ ನಿರ್ದೇಶನದ ಮೇರೆಗೆ, ಫನ್ ವರ್ಲ್ಡ್ ಸಮೀಪ ಅಧಿಕೃತ ಬಸ್ ನಿಲುಗಡೆಯನ್ನು ಇಂದಿನಿಂದಲೇ ಜಾರಿಗೆ ತರಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ