ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!

ಲಾಡ್ಜ್​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ BMTC ಬಸ್ ಚಾಲಕ ಮೃತದೇಹ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಯುವತಿಯ ಕರಿನೆರಳು ಬಿದ್ದಿದೆ ಎನ್ನಲಾಗಿದೆ.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!
ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 30, 2023 | 9:11 PM

ಬೆಂಗಳೂರು: ಕೆಲಸಕ್ಕೆಂದು ಮನೆಯಿಂದ ಹೋಗಿದ್ದ BMTC ಬಸ್ ಚಾಲಕನ (Driver)ಮೃತ ದೇಹ ಇಂದು(ಜನವರಿ 30) ಬೆಂಗಳೂರಿನ ಲಾಡ್ಜ್​ವೊಂದರಲ್ಲಿ (Lodge)  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಮನಗರ(Ramanagara) ಜಿಲ್ಲೆಯ ಚನ್ನಪಟ್ಟಣ ಮೂಲದ ಪುಟ್ಟೇಗೌಡ(28) ಬೆಂಗಳೂರಿನ ಕೆಂಗೇರಿಯ ಲಾಡ್ಜ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 6 ತಿಂಗಳಿಂದ ಬಿಎಂಟಿಸಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಟ್ಟೇಗೌಡ ಸಾವಿನ ಬಗ್ಗೆ ಸಂಬಂಧಿಕರು ಓರ್ವ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಾವಿನ ಸುತ್ತ ಅನುಮಾನಗಳ ಹುತ್ತ ಎದ್ದಿದೆ.

ಹಣ ಬಾಕಿ ಇರುವ ಹಿನ್ನೆಲೆಯಲ್ಲಿ ಲಾಡ್ಜ್​ ಸಿಬ್ಬಂದಿ ರೂಮ್​ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪುಟ್ಟೇಗೌಡ ಓರ್ವ ಯುವತಿ ಜೊತೆ ಲಾಡ್ಜ್​ಗೆ ಹೋಗಿದ್ದು, ಬಳಿಕ ರೂಮ್​ನಲ್ಲಿ ಪುಟ್ಟೇಗೌಡರನ್ನ ಬಿಟ್ಟು ಯುವತಿ ಲಾಡ್ಜ್​ನಿಂದ ಹೊರ ಹೋಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಆಕೆ ಹೋಗುವಾಗ ರೂಮ್​ನ ಬಾಗಿಲು ಲಾಕ್ ಮಾಡಿದ್ದಾಳೆ. ಅಲ್ಲದೇ ಮೃತ ಪುಟ್ಟೇಗೌಡ ಹಣೆ ಮೇಲೆ ಗಾಯಗಳಾಗಿವೆ ಎಂದು ಪುಟ್ಟೇಗೌಡ ಸಂಬಂಧಿಕರು ಆ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.. ಆದ್ರೆ, ಈ ಬಗ್ಗೆ ಪೊಲೀಸರು ಅಥವಾ ಲಾಡ್ಜ್​ ಸಿಬ್ಬಂದಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇನ್ನು ಕಂಗೇರಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರ ತನಿಖೆ ಬಳಿಕ ಸಾವಿನ ಸತ್ಯಾಸತ್ಯತೆ ಹೊರಬರಲಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ