BMTCಯಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದ ಟಿವಿ9, ಚಾಲಕನ ಪತ್ರ ಪರಿಶೀಲಿಸುವಂತೆ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ

| Updated By: ವಿವೇಕ ಬಿರಾದಾರ

Updated on: Feb 07, 2023 | 5:59 PM

ಬೆಂಗಳೂರು ಮಹಾನಗರ ಸಾರಿಗೆ (BMTC)ಯಲ್ಲಿನ ಭ್ರಷ್ಟಾಚಾರದ ಬಗ್ಗೆ ಓರ್ವ ಬಿಎಂಟಿಸಿ ಚಾಲಕ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದರ ಬಗ್ಗೆ ಟಿವಿ9 ಸುದ್ದಿ ಪ್ರಸಾರ ಮಾಡಿದ ಬೆನ್ನೆಲ್ಲೇ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ‌.ಎಸ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಅವರಿಗೆ ಪತ್ರ ಬರೆದು, ಚಾಲಕ ನೀಡಿದ್ದ ದೂರನ್ನು ಪರಿಶೀಲಿಸುವಂತೆ ಅದೇಶಿಸಿದ್ದಾರೆ.

BMTCಯಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದ ಟಿವಿ9, ಚಾಲಕನ ಪತ್ರ ಪರಿಶೀಲಿಸುವಂತೆ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ
ಬಿಎಂಟಿಸಿ ಬಸ್​
Follow us on

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ (BMTC)ಯಲ್ಲಿನ ಭ್ರಷ್ಟಾಚಾರದ ಬಗ್ಗೆ ಓರ್ವ ಬಿಎಂಟಿಸಿ ಚಾಲಕ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದಾದ ನಂತರ ಚಾಲಕನನ್ನು ಅಮಾನತು ಮಾಡಲಾಗಿತ್ತು. ಈ ಅನ್ಯಾಯದ ವಿರುದ್ಧ ಟಿವಿ9 ಸುದ್ದಿ ಪ್ರಸಾರ ಮಾಡಿದ ಬೆನ್ನೆಲ್ಲೇ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ‌.ಎಸ್ (KSRTC Deputy Secretary Pushpa VS) , ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ (BMTC MD Satyavati) ಅವರಿಗೆ ಪತ್ರ ಬರೆದು, ಚಾಲಕ ನೀಡಿದ್ದ ದೂರನ್ನು ಪರಿಶೀಲಿಸುವಂತೆ ಅದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಬಿಎಂಟಿಸಿಯಲ್ಲಿ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಚಾಲಕ ತ್ಯಾಗರಾಜು BMTC ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿಯವರನ್ನು ಅಮಾನತು ಮಾಡುವಂತೆ ಜನವರಿ 29 ರಂದು ರಾಜ್ಯಪಾಲರು ಸೇರಿದಂತೆ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾರ್ಮಿಕ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದರು. ಚಾಲಕ ಸಂಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ದೂರು ನೀಡಿದರೆ, ದೂರು ನೀಡಿದ ಚಾಲಕನಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದರು.

ಇದನ್ನೂ ಓದಿ: ಬಿಎಂಟಿಸಿ ಎಂಡಿಯನ್ನು ಅಮಾನತು ಮಾಡುವಂತೆ ರಾಜ್ಯಪಾಲರಿಗೆ ಪತ್ರ ಬರೆದ ಬಸ್ ಚಾಲಕ

ಪತ್ರದಲ್ಲಿ ಬಿಎಂಟಿಸಿ ಸಂಸ್ಥೆ ಸಾಕಷ್ಟು ನಷ್ಟದಲ್ಲಿದೆ. ಈ ನಷ್ಟಕ್ಕೆ ಮುಖ್ಯ ಕಾರಣ ಸಂಸ್ಥೆ ಅಧಿಕಾರಿಗಳು ಮತ್ತು ಆಡಳಿತ ಸಿಬ್ಬಂದಿ, ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ಸಂಸ್ಥೆಯನ್ನ ಬಲಿಪಡಿಯುತ್ತಿದ್ದಾರೆ. ಆರ್​ಟಿಐ ಅಡಿಯಲ್ಲಿ ಮಾಹಿತಿ ಪಡೆದು ಅಧಿಕಾರಿಗಳ ವಿರುದ್ಧ ಎಂಡಿಗೆ ದೂರು ನೀಡಿದರೂ ಏನು ಪ್ರಯೋಜನವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ಎಂಡಿ ಜಿ. ಸತ್ಯವತಿಯವರು ಅಧಿಕಾರಿಗಳ ಪರವಾಗಿಯೇ ಕಾರ್ಯನಿರ್ವಹಿಸುತ್ತಿದ್ದಾರೆ, ನಾನು ದಾಖಲೆ ಸಮೇತ ದೂರು ನೀಡಿದರೂ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳದೇ ನನ್ನ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ, ಅಧಿಕಾರಿಗಳ ವಿರುದ್ಧ ಯಾಕೆ ದೂರು ಕೊಟ್ಟಿದ್ದೀರಾ ಎಂದು ಕೇಳುತ್ತಿದ್ದಾರೆ ಎಂದಿದ್ದರು.

ಇದನ್ನೂ ಓದಿ: ಬಿಎಂಟಿಸಿ ಎಂಡಿ ಸತ್ಯವತಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದು ನ್ಯಾಯ ಕೇಳಿದ್ದ BMTC ಚಾಲಕ ಅಮಾನತು

ಸೂಚನಾ ಪತ್ರವನ್ನು ನೀಡಿ ನನ್ನನ್ನು ಬೆದರಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ. ಆದ್ದರಿಂದ ಮೊದಲು ಎಂಡಿ ಸತ್ಯವತಿಯನ್ನ ವಿಚಾರಣೆ ಪೂರ್ವ ಅಮಾನತು ಮಾಡಿ, ನಂತರ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಪತ್ರದಲ್ಲಿ ಬರೆದಿದ್ದರು.

ನ್ಯಾಯ ಕೇಳಿದ್ದಕ್ಕೆ BMTC ಚಾಲಕ ಅಮಾನತು

ಬಿಎಂಟಿಸಿ ಎಂಡಿ ಜಿ. ಸತ್ಯವತಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದು ನ್ಯಾಯ ಕೇಳಿದ್ದ BMTC ಚಾಲಕ ತ್ಯಾಗರಾಜ್​ನನ್ನು ಅಮಾನತು ಮಾಡಲಾಗಿತ್ತು. ಎಂಡಿ ಸಹಿ ಪೋರ್ಜರಿ ಮಾಡಿದವರಿಗೆ ಕೇವಲ ಟ್ರಾನ್ಸ್ಫರ್ ನೀಡಲಾಗಿದೆ. ಆದರೆ ನ್ಯಾಯ ಕೇಳಿದವನಿಗೆ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ