AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC bus fire: ಮಕ್ಕಳ ಕೂಟ ಬಳಿ ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್

K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಮಕ್ಕಳಕೂಟ ಬಳಿ ಬೆಂಕಿ ಕಾಣಿಸಿಕೊಂಡಿತ್ತು.

BMTC bus fire: ಮಕ್ಕಳ ಕೂಟ ಬಳಿ ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್
K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಮಕ್ಕಳಕೂಟ ಬಳಿ ಬೆಂಕಿ ಕಾಣಿಸಿಕೊಂಡಿತ್ತು.
TV9 Web
| Edited By: |

Updated on:Jan 21, 2022 | 12:40 PM

Share

ಬೆಂಗಳೂರು: ಬಿಎಂಟಿಸಿ ಬಸ್ಸೊಂದು ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳಕೂಟ ಬಳಿ ಈ ಘಟನೆ ನಡೆದಿದೆ. ಇದರಿಂದ ದೀಪಾಂಜಲಿನಗರ ಡಿಪೋಗೆ ಸೇರಿದ ಬಸ್ ಸುಟ್ಟು ಕರಕಲಾಗಿದೆ. K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಮಕ್ಕಳಕೂಟ ಬಳಿ ಬೆಂಕಿ ಕಾಣಿಸಿಕೊಂಡಿತ್ತು. ಚಾಮರಾಜಪೇಟೆಯಲ್ಲಿ (makkala kuta, chamrajpet) ಬಿಎಂಟಿಸಿ ಬಸ್ ಹೊತ್ತಿ ಉರಿದ ಪ್ರಕರಣದಲ್ಲಿ ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ. ಇಂಜಿನಲ್ಲಿ ಹೊಗೆ ಕಾಣಿಸಿಕೊಳ್ತಿದ್ದಂತೆ ಬಸ್ ನಿಂದ ಪ್ರಯಾಣಿಕರು ಲಘುಬಗೆಯಿಂದ ಕೆಳಗಿಳಿದು ಬಚಾವಾಗಿದ್ದಾರೆ (BMTC bus fire).

ಚಲಿಸುವ ವೇಳೆ ಬಸ್ ನಲ್ಲಿ ಮೊದಲು ಹೊಗೆ ಕಾಣಿಸಿಕೊಂಡಿದೆ. ಡ್ರೈವರ್ ಕೂಡಲೇ ಹೊಗೆ, ಬೆಂಕಿ ಎಂದು ಕಿರುಚಿದ್ದಾರೆ. ಈ ವೇಳೆ ಬಸ್ ನಿಂದ ಕೆಳಗಿಳಿದ ಡ್ರೈವರ್ ಹಾಗೂ ಕಂಡಕ್ಟರ್ ಕೂಡಲೇ ಪ್ರಯಾಣಿಕರನ್ನು ಕೆಳಗೆ ಇಳಿಯಲು ನೆರವಾಗಿದ್ದಾರೆ. ನೋಡನೋಡುತ್ತಿದ್ದಂತೆ ಬಿಎಂಟಿಸಿ ಬಸ್ ಬೆಂಕಿಯಿಂದ ಹೊತ್ತಿ ಉರಿದಿದೆ.

ಸುಮಾರು 40 ಪ್ರಯಾಣಿಕರಿದ್ದ KA 57 F 1592 ನಂಬರ್ ನ ಈ ನತದೃಷ್ಟ ಬಿಎಂಟಿಸಿ ಬಸ್ ಹೊಸಕೆರೆಹಳ್ಳಿ ಇಂದ ಕೆ‌.ಆರ್. ಮಾರುಕಟ್ಟೆಗೆ ಬರುತ್ತಿತ್ತು. ಶಾರ್ಟ್​ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಚಾಲಕ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರೆ, ಪ್ರಯಾಣಿಕರನ್ನ ಕೆಳಗಿಳಿಸಿ ಬೇರೆ ಬಸ್ ವ್ಯವಸ್ಥೆ ಕಲ್ಪಿಸುವುದರಲ್ಲಿ ಕಂಡಕ್ಟರ್​ ಮಗ್ನರಾದರು. ಬಸ್ ನಲ್ಲಿದ್ದ ಫಸ್ಟ್ ಏಯ್ಡ್​ ಹಾಗೂ ಟಿಕೆಟ್ ಹಾಗೂ ದಿನದ ಪಾಸ್ ಗಳು ಬೆಂಕಿಗೆ ಆಹುತಿಯಾಗಿವೆ.

ಫ್ಲೈಓವರ್ ಮೇಲೆ ಕ್ಯಾಂಟರ್ ಹರಿದು ಯುವತಿ ಸಾವು: ಭದ್ರಪ್ಪ ಲೇಔಟ್ ಫ್ಲೈಓವರ್ ಮೇಲೆ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕ್ಯಾಂಟರ್ ಹರಿದು ಮೇಘಷ್ಠಿ(19) ಎಂಬ ಯುವತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೇಘಷ್ಠಿ ಆಯತಪ್ಪಿ ಕೆಳಕ್ಕೆ ಬಿದ್ದಾಗ ಕ್ಯಾಂಟರ್ ಅವರ ಮೈಮೇಲೆ ಹರಿದಿದೆ. ಹೆಬ್ಬಾಳ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sudhakar Weekend Carfue |ವೀಕೆಂಡ್ ಕರ್ಫ್ಯೂ ಹಿಂಪಡೆಯುವ ಸುಳಿವು ಕೊಟ್ಟ ಡಾ. ಕೆ. ಸುಧಾಕರ್

Published On - 12:06 pm, Fri, 21 January 22

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು