Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಸ್ ರಸ್ತೆ ಮೂಲಕ ಮಾದವಾರ – ಎಲೆಕ್ಟ್ರಾನಿಕ್‌ ಸಿಟಿ ನಡುವೆ ಬಿಎಂಟಿಸಿ ಬಸ್‌ ಸೇವೆ ಆರಂಭ

ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರ ರೂಟ್​ಗೆ ಹೊಸ ಮಾರ್ಗವಾಗಿ ಬಿಎಂಟಿಸಿ ಬಸ್​ಗಳ ಸೇವೆ ಆರಂಭವಾಗಿದೆ. ಈ ಎರಡು ಸ್ಥಳಗಳಿಗೆ ನೈಸ್ ರೋಡ್ ಮೂಲಕವಾಗಿ ಬಿಎಂಟಿಸಿ ಬಸ್ ಸಂಚಾರ ನಡೆಸಲಿದೆ.ಬೆಳಗ್ಗೆ 6:40 ರಿಂದ ರಾತ್ರಿ 8 ಗಂಟೆವರೆಗೆ ಬಿಎಂಟಿಸಿ ಬಸ್ ಗಳ ಸೇವೆ ಇರಲಿದೆ.

ನೈಸ್ ರಸ್ತೆ ಮೂಲಕ ಮಾದವಾರ - ಎಲೆಕ್ಟ್ರಾನಿಕ್‌ ಸಿಟಿ ನಡುವೆ ಬಿಎಂಟಿಸಿ ಬಸ್‌ ಸೇವೆ ಆರಂಭ
ಬಿಎಂಟಿಸಿ
Follow us
Kiran Surya
| Updated By: ಆಯೇಷಾ ಬಾನು

Updated on: Nov 22, 2023 | 11:09 AM

ಬೆಂಗಳೂರು, ನ.22: ಬೆಂಗಳೂರಿನ ಸಂಚಾರ ಜೀವನಾಡಿ ಬಿಎಂಟಿಸಿ (BMTC) ಇನ್ಮುಂದೆ ನೈಸ್ ರಸ್ತೆಯಲ್ಲೂ (Nice Road) ಸಂಚರಿಸಲಿದೆ. ಪ್ರಯಾಣಿಕರ ಬೇಡಿಕೆ ಮೇರೆಗೆ ನೈಸ್ ರಸ್ತೆಯಲ್ಲೂ ಬಿಎಂಟಿಸಿ ಬಸ್​ಗಳ ಸಂಚಾರಕ್ಕೆ ಸಾರಿಗೆ ಇಲಾಖೆ ನಿರ್ಧರಿಸಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರ ರೂಟ್​ಗೆ ಹೊಸ ಮಾರ್ಗವಾಗಿ ಬಿಎಂಟಿಸಿ ಬಸ್​ಗಳ ಸೇವೆ ಆರಂಭವಾಗಿದೆ. ಈ ಎರಡು ಸ್ಥಳಗಳಿಗೆ ನೈಸ್ ರೋಡ್ ಮೂಲಕವಾಗಿ ಬಿಎಂಟಿಸಿ ಬಸ್ ಸಂಚಾರ ನಡೆಸಲಿದೆ.

ದೂರದ ಊರುಗಳಿಂದ ಬೆಂಗಳೂರಿಗೆ ಬರುತ್ತಿದ್ದವರು ಮೆಜೆಸ್ಟಿಕ್‌ ತಲುಪಿ ಅಲ್ಲಿಂದ ಎಲೆಕ್ಟ್ರಾನಿಕ್‌ ಸಿಟಿ ಬಸ್‌ ಹಿಡಿದು ಸಂಚಾರ ನಡೆಸಬೇಕಿತ್ತು. ಇದಕ್ಕೆ ಕನಿಷ್ಠ 2 ಗಂಟೆ ವ್ಯರ್ಥವಾಗುತ್ತಿತ್ತು. ಸದ್ಯ ಪ್ರಯಾಣಿಕರ ಬೇಡಿಕೆ ಮೇರೆಗೆ ಹೆಚ್ಚವರಿ ರೂಟ್ ಗೆ ಬಸ್​ಗಳನ್ನು ನಿಯೋಜಿಸಲಾಗಿದೆ. ಬೆಂಗಳೂರು ನಗರಕ್ಕೆ ತುಮಕೂರು, ಹಾಸನ ಭಾಗಗಳಿಂದ ಬೆಂಗಳೂರಿಗೆ ಆಗಮಿಸುವವರು ಮಾದವಾರದಿಂದಲೇ ನೇರವಾಗಿ ಎಲೆಕ್ಟ್ರಾನಿಕ್‌ ಸಿಟಿ ತಲುಪಲು ಅನುಕೂಲವಾಗಲಿದೆ.

ಇದನ್ನೂ ಓದಿ: ಬಿಎಂಟಿಸಿಯಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್, ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಿಚ್ಚಿಟ್ಟ ರಹಸ್ಯವೇನು?

ಇನ್ನು ಬಸ್ ಒದಗಿಸುವಂತೆ ಪ್ರಯಾಣಿಕರು ಹಲವಾರು ಬಾರಿ ಮನವಿ ಪತ್ರ ಬರೆದಿದ್ದರು. ಬಿಎಂಟಿಸಿ ಬಸ್​ಗಳಿಲ್ಲದೇ ಪ್ರಯಾಣಿಕರು ಟೆಂಪೋ, ಆಟೋ, ಲಾರಿಗಳಲ್ಲಿ ಸಂಚಾರ ಮಾಡ್ತಿದ್ದರು. ಸದ್ಯ ಬಿಎಂಟಿಸಿ ಬಸ್ ಗಳಿಲ್ಲದೇ ತೊಂದರೆ ಅನುಭವಿಸುತ್ತಿದ್ದ ಜನರಿಗೆ ಶುಭ ಸುದ್ದಿ ಸಿಕ್ಕಿದೆ. ಎಲೆಕ್ಟ್ರಾನಿಕ್ ಸಿಟಿ to ಮಾದವಾರ ಭಾಗಕ್ಕೆ ಬಿಎಂಟಿಸಿ ಬಸ್ ಸೇವೆ ಆರಂಭವಾಗಿದೆ. ಬೆಳಗ್ಗೆ 6:40 ರಿಂದ ರಾತ್ರಿ 8 ಗಂಟೆವರೆಗೆ ಬಿಎಂಟಿಸಿ ಬಸ್ ಗಳ ಸೇವೆ ಇರಲಿದೆ. ನವೆಂಬರ್‌ 20 ರಿಂದಲೇ ಈ ಬಸ್‌ ಸೌಲಭ್ಯ ಆರಂಭವಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಾದವಾರ ಬಿಎಂಟಿಸಿ ಬಸ್‌ ನಿಲ್ದಾಣದಿಂದ ಹೊರಡುವ ಸಮಯ

ಬೆಳಿಗ್ಗೆ 6.40, 7.10, 7.40, 8.00, 8.30, 8.50, 9.20, 9.50, 10.20, 10.50, 11.40, ಮಧ್ಯಾಹ್ನ 12.10, 12.40, 1.10, 1.50, 2.30, 3.00, 3.40, ಸಂಜೆ 4.25, 4.50, 5.20, 6.00, 6.30, 7.00, 7.30, ರಾತ್ರಿ 8.00, 9.30.

ಎಲೆಕ್ಟ್ರಾನಿಕ್‌ ಸಿಟಿ ಬಿಎಂಟಿಸಿ ಬಸ್‌ ನಿಲ್ದಾಣದಿಂದ ಬಸ್‌ ಹೊರಡುವ ಸಮಯ

ಬೆಳಿಗ್ಗೆ 7.10, 7.40, 8.10, 8.40, 9.10, 9.40, 10.10, 10.40, 11.10, 11.40, 12.15, 12.55, ಮಧ್ಯಾಹ್ನ 1.35, 2.05, 2.45, ಸಂಜೆ 4.00, 4.30, 5.00, 5.30, 6.00, 6.15, 6.30, 7.00, 7.30, ರಾತ್ರಿ 8.00.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ