ಬಿಎಂಟಿಸಿಯಲ್ಲಿ ಗೋಲ್ಮಾಲ್ ಪ್ರಕರಣ: ಮುಖ್ಯ ಲೆಕ್ಕಾಧಿಕಾರಿ ಬಂಧನ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ 11.81 ಕೋಟಿ ಹಗರಣ ಸಂಬಂಧ FIR ವಿಳಂಬದ ಬಗ್ಗೆ ಟಿವಿ9 ಸುದ್ದಿ ಪ್ರಸಾರ ಮಾಡಿತ್ತು. ಬಳಿಕ BMTC ಮುಖ್ಯ ಲೆಕ್ಕಾಧಿಕಾರಿ ಅಬ್ದುಲ್ ಖುದ್ದುಸ್ ಹಾಗೂ ಇತರ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ FIR ದಾಖಲಾಗಿತ್ತು. ಸದ್ಯ, ಅಬ್ದುಲ್ ಖುದ್ದುಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು, ಫೆ.4: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ 11.81 ಕೋಟಿ ಹಗರಣ ಸಂಬಂಧ BMTC ಲೆಕ್ಕಪತ್ರ ವಿಭಾಗದ ಮುಖ್ಯ ಲೆಕ್ಕಾಧಿಕಾರಿ ಅಬ್ದುಲ್ ಖುದ್ದುಸ್ ಅವರನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ 11.81 ಕೋಟಿ ಹಗರಣ ಸಂಬಂಧ FIR ವಿಳಂಬದ ಬಗ್ಗೆ ಟಿವಿ9 ಸುದ್ದಿ ಪ್ರಸಾರ ಮಾಡಿತ್ತು. ಬಳಿಕ BMTC ಮುಖ್ಯ ಲೆಕ್ಕಾಧಿಕಾರಿ ಅಬ್ದುಲ್ ಖುದ್ದುಸ್ ಹಾಗೂ ಇತರ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ FIR ದಾಖಲಾಗಿತ್ತು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ 11.81 ಕೋಟಿ ಹಗರಣ ನಡೆದಿತ್ತು. ಅಸಿಸ್ಟೆಂಟ್ ಸೆಕ್ಯುರಿಟಿ ಮತ್ತು ವಿಜಿಲೆನ್ಸ್ ಅಧಿಕಾರಿ ರಮ್ಯಾ ದೂರಿನ ಅನ್ವಯ FIR ದಾಖಲಾಗಿತ್ತು. ಅಲ್ಲದೆ, ಮುಖ್ಯ ಲೆಕ್ಕಾಧಿಕಾರಿ ಆಗಿದ್ದ ಅಬ್ದುಲ್ ಖುದ್ದುಸ್ ಅವರನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಟಿವಿ9 ಇಂಪ್ಯಾಕ್ಟ್: ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ; ಶಿಕ್ಷಕ ಅಮಾನತ್ತು
ವಂಚನೆಯಲ್ಲಿ ಶಾಮೀಲಾದ ಇತರರ ಬಗ್ಗೆಯೂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜನವರಿ 19 ರಂದು ಅಬ್ದುಲ್ ಖುದ್ದುಸ್ ಅವರನ್ನು ಅಮಾನತು ಮಾಡಿ ಕೆಎಸ್ಆರ್ಡಿಸಿ ಎಂಡಿ ಆದೇಶಿಸಿದ್ದರು. ಆದರೂ ಪೊಲೀಸರು ಎಫ್ಐಆರ್ ದಾಖಲಿಸಿರಲಿಲ್ಲ. ಈ ಬಗ್ಗೆ ಟಿವಿ9 ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಚುನಾವಣಾ ಶಿರಸ್ತೇದಾರ್ ಪೂರ್ಣಿಮಾ ಅಮಾನತ್ತು
ರಾಮನಗರ: ಜಿಲ್ಲೆಯ ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆ ಕೊಠಡಿಯಲ್ಲಿ ಡಿ ಗ್ರೂಪ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಶಿಸ್ತು ಪ್ರಾಧಿಕಾರ ಅಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ಅವರು ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಿರಸ್ತೇದಾರ್ ಆಗಿದ್ದ ಪೂರ್ಣಿಮಾ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.
ಚುನಾವಣಾ ಶಾಖಾ ಸಿಬ್ಬಂದಿ ಸುರೇಶ್ (49) ಆತ್ಮಹತ್ಯೆ ಎಂಬವರು ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆ ಕೊಠಡಿಯಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆತ್ಮಹತ್ಯೆಗೂ ಮುನ್ನ ಸುರೇಶ್ ಅವರು ಬರೆದಿಟ್ಟಿದ್ದ ಡೆತ್ನೋಟ್ನಲ್ಲಿ ಶಿರಸ್ತೇದಾರ್ ಪೂರ್ಣಿಮಾ ಕಿರುಕುಳ ನೀಡಿದ್ದಾಗಿ ಉಲ್ಲೇಖಿಸಿದ್ದರು.
ಪ್ರಕರಣ ಸಂಬಂಧ ಪೂರ್ಣಿಮಾ ಅವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರು ಪೂರ್ಣಿಮಾ ಅವರನ್ನು ವಶಕ್ಕೆ ಪಡೆದ ಬೆನ್ನೆಲೆ ಶಿಸ್ತು ಇಲಾಖೆಯು ಪೂರ್ಣಿಮಾ ಅವರನ್ನು ಅಮಾನತು ಮಾಡಿ ಆದೇಶಿಸಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ