AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್‌ ತಿಂಗಳಲ್ಲಿ 3,767 ಪ್ರಯಾಣಿಕರಿಗೆ 7 ಲಕ್ಷ ರೂ. ದಂಡ ವಿಧಿಸಿದ ಬಿಎಂಟಿಸಿ

ನವೆಂಬರ್ ತಿಂಗಳಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಎಂಟಿಸಿ 3 ಸಾವಿರಕ್ಕೂ ಅಧಿಕ ಪ್ರಯಾಣಿಕರಿಂದ 7 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ. ಟಿಕೆಟ್ ರಹಿತ ಪ್ರಯಾಣ, ಮಹಿಳಾ ಮೀಸಲು ಸ್ಥಾನದಲ್ಲಿ ಪರುಷರು ಪ್ರಯಾಣ ಸೇರಿದಂತೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ ವಸೂಲಿ ಮಾಡಲಾಗಿದೆ.

ನವೆಂಬರ್‌ ತಿಂಗಳಲ್ಲಿ 3,767 ಪ್ರಯಾಣಿಕರಿಗೆ 7 ಲಕ್ಷ ರೂ. ದಂಡ ವಿಧಿಸಿದ ಬಿಎಂಟಿಸಿ
ಬಿಎಂಟಿಸಿ
TV9 Web
| Edited By: |

Updated on:Dec 12, 2023 | 8:33 PM

Share

ಬೆಂಗಳೂರು, ಡಿ.12: ನವೆಂಬರ್‌ ತಿಂಗಳಲ್ಲಿ ವಿವಿಧ ನಿಯಮಗಳನ್ನು ಉಲ್ಲಂಘಿಸಿದ 3,767 ಪ್ರಯಾಣಿಕರ ವಿರುದ್ಧ ಬಿಎಂಟಿಸಿ ಕ್ರಮ ಕೈಗೊಂಡಿದೆ. ಒಟ್ಟು 7 ಲಕ್ಷ ರೂಪಾಯಿಗಳನ್ನು ದಂಡದ ಮೊತ್ತವನ್ನು ಸಂಗ್ರಹಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮಂಗಳವಾರ ತಿಳಿಸಿದೆ.

ಪ್ರಯಾಣಿಕರು ಟಿಕೆಟ್ ರಹಿತ ಪ್ರಯಾಣ ಮಾಡುವುದನ್ನು ತಡೆಗಟ್ಟಲು ಹಾಗೂ ಅಂತಹ ಪ್ರಕರಣಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲು ಬಿಎಂಟಿಸಿ ಬಸ್​ಗಳನ್ನು ಸಿಬ್ಬಂದಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ ಎಂದು ಬಿಟಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ.

ನವೆಂಬರ್‌ ತಿಂಗಳಲ್ಲಿ 16,421 ಟ್ರಿಪ್‌ಗಳನ್ನು ಸಿಬ್ಬಂದಿ ಪರಿಶೀಲಿಸಿದ್ದಾರೆ. ಈ ವೇಳೆ 3,329 ಪ್ರಯಾಣಿಕರು ಟಿಕೆಟ್‌ ರಹಿತವಾಗಿ ಪ್ರಯಾಣಿಸುತ್ತಿದ್ದದ್ದನ್ನು ಪತ್ತೆಹಚ್ಚಿ, ಒಟ್ಟು 6,68,610 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಅಲ್ಲದೆ, ಕರ್ತವ್ಯಲೋಪ ಹಿನ್ನೆಲೆ ಕಂಡಕ್ಟರ್‌ಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿಯಲ್ಲಿ ಇನ್ನೂ ಅನುಷ್ಠಾನಕ್ಕೆ ಬಾರದ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್, ಏನಿದು?

ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತುಕೊಂಡು ಪ್ರಯಾಣ ಮಾಡುತ್ತಿದ್ದ 438 ಪುರುಷ ಪ್ರಯಾಣಿಕರಿಗೆ ಬಿಎಂಟಿಸಿಯ ತಪಾಸಣಾ ಸಿಬ್ಬಂದಿ ದಂಡ ವಿಧಿಸಿದ್ದಾರೆ ಮತ್ತು ಕರ್ನಾಟಕ ಮೋಟಾರು ವಾಹನಗಳ ನಿಯಮಗಳಿಗೆ ಅನುಗುಣವಾಗಿ 43,800 ರೂಪಾಯಿ ದಂಡವನ್ನು ವಸೂಲಿ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಶಕ್ತಿ ಯೋಜನೆ: ನಿಗಮಗಳಿಗೆ 1,669.45 ಕೋಟಿ ರೂ. ಮರುಪಾವತಿ ಮಾಡಿದ ಸರ್ಕಾರ

ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ನೀಡಲಾದ ಉಚಿತ ಟಿಕೆಟ್‌ಗಳಿಗಾಗಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ 1669.45 ಕೋಟಿ ರೂಪಾಯಿಗಳನ್ನು ಮರುಪಾವತಿ ಮಾಡಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಜೂನ್ 2023 ರಲ್ಲಿ ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ BMTC, KSRTC, NWKRTC ಮತ್ತು KKRTC ಗಳು 2,671 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಉಚಿತ ಟಿಕೆಟ್‌ಗಳನ್ನು ನೀಡಿವೆ.

ಶಕ್ತಿ ಯೋಜನೆಯಡಿ ಕರ್ನಾಟಕದ ಮಹಿಳೆಯರಿಗೆ ರಾಜ್ಯದಲ್ಲಿ ಸಂಚರಿಸುವ ಎಲ್ಲಾ ಸರ್ಕಾರಿ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ. ವರದಿಗಳ ಪ್ರಕಾರ, ಡಿಸೆಂಬರ್ 10 ರವರೆಗೆ 111 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಮಾಡಿದ್ದಾರೆ.

ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ಈವರೆಗೆ ಎಷ್ಟು ಟಿಕೆಟ್‌ಗಳನ್ನು ನೀಡಲಾಗಿದೆ ಮತ್ತು ರಾಜ್ಯ ಸರ್ಕಾರ ನಿಗಮಗಳಿಗೆ ಎಷ್ಟು ಮರುಪಾವತಿ ಮಾಡಿದೆ ಎಂಬುದರ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 pm, Tue, 12 December 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್