AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗ್ರಾಮಾಂತರ ಭಾಗದ ಪ್ರಯಾಣಿಕರಿಗೂ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರ!

ಬಿಎಂಟಿಸಿ ಬಸ್ ಎಂಬುದು ಬೆಂಗಳೂರಿಗರ ಅಚ್ಚುಮೆಚ್ಚಿನ ಸಂಚಾರ ಜೀವನಾಡಿ. ನಗರದ 40 ಕಿಮೀ ವ್ಯಾಪ್ತಿಯಲ್ಲಿ ಸಂಚಾರ ಮಾಡುತ್ತದೆ. ಆದರೆ ಇನ್ಮುಂದೆ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರ ಮಾಡಲು ಸಜ್ಜಾಗಿದ್ದು, ಇದರಿಂದ ಗ್ರಾಮಾಂತರ ಭಾಗದ ಪ್ರಯಾಣಿಕರಿಗೆ ತುಂಬಾ ಸಹಾಯ ಆಗಲಿದೆ. ಬಿಎಂಟಿಸಿಯ ಈ ನಿರ್ಧಾರದಿಂದ ಪ್ರಯಾಣಿಕರು ಕೂಡ ಸಂತಸಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಭಾಗದ ಪ್ರಯಾಣಿಕರಿಗೂ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರ!
ಸಾಂದರ್ಭಿಕ ಚಿತ್ರImage Credit source: tv9
ಕಿರಣ್​ ಸೂರ್ಯ
| Edited By: |

Updated on:Feb 23, 2026 | 8:08 AM

Share

ಬೆಂಗಳೂರು, ಫೆಬ್ರವರಿ 23: ಬೆಂಗಳೂರು (Bangalore) ನಗರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಹೋಗಬೇಕು ಅಂದರೆ ಬಿಎಂಟಿಸಿ ಬಸ್ (BMTC Bus) ಬೇಕೇಬೇಕು. ರಾಜಧಾನಿಯ ಗಲ್ಲಿ ಗಲ್ಲಿಗೂ ಬಿಎಂಟಿಸಿ ಬಸ್ಸುಗಳು ಸಂಚಾರ ಮಾಡುತ್ತವೆ. ಆದರೆ ಇನ್ಮುಂದೆ ಬಿಎಂಟಿಸಿ ಬಸ್ಸುಗಳು ಬೆಂಗಳೂರು ಗ್ರಾಮಾಂತರ ಭಾಗಗಳಿಗೂ ಸಂಚಾರ ಮಾಡಲು ಸಜ್ಜಾಗಿವೆ. ಇಲ್ಲಿಯವರೆಗೆ ಬಿಎಂಟಿಸಿ ಬಸ್ಸುಗಳು 40 ಕಿಮೀ ವ್ಯಾಪ್ತಿಯಲ್ಲಿ ಮಾತ್ರ ಸಂಚಾರ ಮಾಡುತ್ತಿದ್ದವು. ಇನ್ಮುಂದೆ ರಾಮನಗರ, ಕನಕಪುರ, ನೆಲಮಂಗಲ-ಹೊಸಕೋಟೆ, ದೇವನಹಳ್ಳಿ- ದೊಡ್ಡಬಳ್ಳಾಪುರಕ್ಕೂ ಸಂಚಾರ ಮಾಡಲಿವೆ.

ಬಿಎಂಟಿಸಿ ಹೊಸ ನಿರ್ಧಾರ ಪ್ರಯಾಣಿಕರಿಗೂ ಖುಷಿಕೊಟ್ಟಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಂಟಿಸಿ ಪ್ರಯಾಣಿಕರು, ಗ್ರಾಮಾಂತರ ಭಾಗಗಳಿಗೂ ಬಿಎಂಟಿಸಿ ಬಸ್ಸುಗಳು ಸಂಚಾರ ಮಾಡುವುದರಿಂದ ಶಾಲೆ-ಕಾಲೇಜು, ಕೆಲಸಕ್ಕೆ ಹೋಗುವವರಿಗೆ ತುಂಬಾ ಸಹಾಯ ಆಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಬಿಎಂಟಿಸಿಯಲ್ಲಿ ಎಲೆಕ್ಟ್ರಿಕ್ ಬಸ್ಸುಗಳು ಸೇರಿದಂತೆ ಒಟ್ಟು 6750 ಬಸ್ಸುಗಳಿವೆ. ಪ್ರತಿದಿನ 45 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದು, ಒಂದು ದಿನಕ್ಕೆ ಬಿಎಂಟಿಸಿ ಬಸ್​ಗಳು 13 ಲಕ್ಷ ಕಿಮೀ ಸಂಚಾರ ಮಾಡುತ್ತವೆ.

ಯಾವೆಲ್ಲ ಪ್ರದೇಶಗಳಿಗೆ ಬಿಎಂಟಿಸಿ ಬಸ್ ಸಂಚಾರ ವಿಸ್ತರಣೆ?

ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ಸ್ಟ್ಯಾಂಡ್​ನಿಂದ ರಾಮನಗರಕ್ಕೆ, ಬನಶಂಕರಿ ಬಸ್ ಸ್ಟ್ಯಾಂಡ್ ನಿಂದ ಕನಕಪುರಕ್ಕೆ, ಮೆಜಸ್ಟಿಕ್ ಕೆಂಪೇಗೌಡ ಬಸ್ ಸ್ಟ್ಯಾಂಡ್​ನಿಂದ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರಕ್ಕೆ ಬಸ್ಸುಗಳು ಸಂಚಾರ ಮಾಡಲಿವೆ.

ಪ್ರಯಾಣಿಕರ ವೆಚ್ಚ ಉಳಿತಾಯ

ಬಿಎಂಟಿಸಿಯು 80 ಕಿಮೀ ವ್ಯಾಪ್ತಿಗೆ ಸೇವೆ ವಿಸ್ತರಣೆ ಮಾಡುವ ಮೂಲಕ ಗ್ರಾಮಾಂತರ ಪ್ರದೇಶಗಳು ಹಾಗೂ ನಗರ ಪ್ರದೇಶದ ಸಂಪರ್ಕ ಮತ್ತಷ್ಟು ಬಲವಾಗಲಿದೆ. ಉದ್ಯೋಗ, ಶಿಕ್ಷಣ ಹಾಗೂ ಚಿಕಿತ್ಸಾ ಅಗತ್ಯಗಳಿಗೆ ದಿನನಿತ್ಯ ನಗರಕ್ಕೆ ಬರುವ ಪ್ರಯಾಣಿಕರಿಗೆ ಇದು ಸಮಯ ಮತ್ತು ವೆಚ್ಚ ಉಳಿತಾಯಕ್ಕೆ ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: ಆತ್ಮಹತ್ಯೆ ತಡೆಗೆ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್​ಡಿ ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮೊರೆ ಹೋದ ಬಿಎಂಆರ್​ಸಿಎಲ್

ಒಟ್ಟಿನಲ್ಲಿ, ಇಷ್ಟು ದಿನಗಳ ಕಾಲ ನಗರದೊಳಗೆ ಮಾತ್ರ ಸಂಚಾರ ಮಾಡುತ್ತಿದ್ದ ಬಿಎಂಟಿಸಿ ಬಸ್ಸುಗಳು ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಗಳಿಗೂ ಸಂಚಾರ ಮಾಡುವುದರಿಂದ ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ದೊಡ್ಡಮಟ್ಟದಲ್ಲಿ ಸಹಾಯವಾಗುವುದರಲ್ಲಿ ಅನುಮಾನವಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 am, Mon, 23 February 26

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ