BMTC Electric Bus: ಗುರುವಾರ, ಸೆ. 30ರಂದು ಬಿಎಂಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ಅನಾವರಣ

| Updated By: guruganesh bhat

Updated on: Sep 30, 2021 | 6:40 PM

ಬೆಂಗಳೂರಿನಲ್ಲಿಯೂ ಎಲೆಕ್ಟ್ರಿಕ್ ಬಸ್​ಗಳು ತಿರುಗುವ ದಿನ ದೂರವಿಲ್ಲ..

BMTC Electric Bus: ಗುರುವಾರ, ಸೆ. 30ರಂದು ಬಿಎಂಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ಅನಾವರಣ
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ಬಿಎಂಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್ಸನ್ನು ನಾಳೆ ಗುರುವಾರ (ಸೆಪ್ಟೆಂಬರ್ 30) ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಅನಾವರಣಗೊಳಿಸಲಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಎಂಟಿಸಿ 37ನೇ ಘಟಕದಲ್ಲಿ ಕಾರ್ಯಕ್ರಮ ಜರುಗಲಿದೆ. ದೇಶದಲ್ಲೆಡೆ ಎಲೆಕ್ಟ್ರಿಕ್ ವಾಹನಗಳ ಭರಾಟೆ ಆರಂಭವಾಗಿದ್ದು, ಸಾರ್ವಜನಿಕ ಸಾರಿಗೆಯಲ್ಲೂ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸಲು ಬಿಎಂಟಿಸಿ ಮುಂದಾಗಿದೆ. ಈಗಾಗಲೇ ಉತ್ತರಾಖಂಡದಲ್ಲಿ ಎಲೆಕ್ಟ್ರಿಕ್ ಬಸ್​ಗಳು ಪರಿಚಯಿಸಲ್ಪಟ್ಟಿವೆ ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು.

ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರ ಮರು ನೇಮಕ; ಸಿಹಿ ಸುದ್ದಿ ಕೊಟ್ಟ ಶ್ರೀರಾಮುಲು
ವಜಾಗೊಂಡಿದ್ದ ಸಾರಿಗೆ ನೌಕರರ (Transportation Employees) ಮರು ನೇಮಕಕ್ಕೆ ಸರ್ಕಾರ (Karnataka Government) ಆದೇಶ ನೀಡಿದೆ. ಈ ಮೂಲಕ 4,200 ಸಾರಿಗೆ ನೌಕರರಿಗೆ ಸಚಿವ ಬಿ.ಶ್ರೀರಾಮುಲು (B Sriramulu) ಸಿಹಿ ಸುದ್ದಿ ನೀಡಿದ್ದಾರೆ. ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರನ್ನು ಮರು ನೇಮಕ ಮಾಡಲು ಸರ್ಕಾರ ಆದೇಶ ನೀಡಿದ್ದು, ಸಾರಿಗೆ ಸಚಿವರು ಹಾಗು ನೌಕರರ ನಡುವೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ಸಾರಿಗೆ ಯೂನಿಯನ್ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. 12 ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದರು. ನಿನ್ನೆ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಲಾಗಿದೆ. ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿ ತೊಂದರೆಯಾಗಬಾರದೆಂದು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ವೇತನ ತಾರತಮ್ಯ ಬಗ್ಗೆಯೂ ಸಾರಿಗೆ ನೌಕರರ ಬೇಡಿಕೆ ಇಟ್ಟಿದ್ದರು. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆಯೂ ಮಾತಾನಾಡುವ ಯೋಚನೆ ಇದೆ. ಅವರ ಪ್ರಮುಖವಾದ 4,200 ಸಾರಿಗೆ ನೌಕರರನ್ನ ಪುನರ್ ನೇಮಕ ಬಗ್ಗೆ ಒತ್ತಡ ಇತ್ತು. ಈ ಬಗ್ಗೆ ಮೊದಲು ಆದ್ಯತೆ ಕೊಟ್ಟು ಮರು ನೇಮಕ ಮಾಡುತ್ತೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

ಇದನ್ನೂ ಓದಿ:

3 ವರ್ಷಗಳ ಡಿಪ್ಲೋಮಾ ನೇರ ನೇಮಕಾತಿ, ಅನುಕಂಪದ ನೇಮಕಾತಿ, ಉನ್ನತ ಶಿಕ್ಷಣ ಪಡೆಯಲು ಪಿಯುಸಿಗೆ ಸಮ 

Top 10 Richest Indian 2021: ಗೌತಮ್ ಅದಾನಿಯ ಒಂದು ದಿನದ ಗಳಿಕೆಯೇ 1,002 ಕೋಟಿ ರೂಪಾಯಿ!

 

Published On - 8:05 pm, Wed, 29 September 21