AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ನೌಕರರಿಗೆ ಭರ್ಜರಿ ಗುಡ್‌ನ್ಯೂಸ್: ಅಪಘಾತ ವಿಮಾ ಪರಿಹಾರ 1 ಕೋಟಿ ರೂ.ಗೆ ಹೆಚ್ಚಳ!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ತನ್ನ ನೌಕರರ ಕಲ್ಯಾಣಕ್ಕಾಗಿ ಮಹತ್ವದ ಹೆಜ್ಜೆ ಇಟ್ಟಿದ್ದು, ವೈಯಕ್ತಿಕ ಅಪಘಾತ ವಿಮಾ ಪರಿಹಾರವನ್ನು 50 ಲಕ್ಷ ರೂ.ಗಳಿಂದ 1 ಕೋಟಿ ರೂ.ಗೆ ಹೆಚ್ಚಿಸಿದೆ. ಯೂನಿಯನ್ ಬ್ಯಾಂಕ್ ಸಹಯೋಗದಲ್ಲಿ ಮಾಡಿಕೊಂಡಿರುವ ಈ ನೂತನ ಒಪ್ಪಂದದಿಂದ ಸಾವಿರಾರು ಸಾರಿಗೆ ಸಿಬ್ಬಂದಿ ಹಾಗೂ ಅವರ ಕುಟುಂಬಗಳಿಗೆ ಬಲವಾದ ಆರ್ಥಿಕ ಭದ್ರತೆ ದೊರೆತಿದೆ.

ಬಿಎಂಟಿಸಿ ನೌಕರರಿಗೆ ಭರ್ಜರಿ ಗುಡ್‌ನ್ಯೂಸ್: ಅಪಘಾತ ವಿಮಾ ಪರಿಹಾರ 1 ಕೋಟಿ ರೂ.ಗೆ ಹೆಚ್ಚಳ!
ಸಾಂದರ್ಭಿಕ ಚಿತ್ರ
ಭಾವನಾ ಹೆಗಡೆ
|

Updated on: Oct 26, 2026 | 9:57 AM

Share

ಮುಖ್ಯಾಂಶಗಳು

  • ಬಿಎಂಟಿಸಿ ನೌಕರರ ಅಪಘಾತ ವಿಮಾ ಪರಿಹಾರ 1 ಕೋಟಿ ರೂ.ಗೆ ಹೆಚ್ಚಳ.
  • ಯೂನಿಯನ್ ಬ್ಯಾಂಕ್ ಜೊತೆಗಿನ ಒಪ್ಪಂದದಿಂದ ಸಾರಿಗೆ ಸಿಬ್ಬಂದಿಗೆ ಭಾರಿ ಭದ್ರತೆ.
  • ಅಂಗವೈಕಲ್ಯ ಹಾಗೂ ವೈದ್ಯಕೀಯ ಚಿಕಿತ್ಸೆಗೂ ಲಭ್ಯವಿರಲಿದೆ ಬೃಹತ್ ವಿಮಾ ರಕ್ಷಣೆ.

ಬೆಂಗಳೂರು, ಅಕ್ಟೋಬರ್ 26: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ ನೌಕರರ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದೊಂದಿಗೆ ಮಾಡಿಕೊಂಡಿರುವ ಪರಿಷ್ಕೃತ ಒಪ್ಪಂದದ ಪ್ರಕಾರ, ಬಿಎಂಟಿಸಿ ಸಿಬ್ಬಂದಿಯ ವೈಯಕ್ತಿಕ ಅಪಘಾತ ವಿಮಾ ಪರಿಹಾರ ಮೊತ್ತವನ್ನು ಈ ಹಿಂದೆ ಇದ್ದ 50 ಲಕ್ಷ ರೂ.ಗಳಿಂದ ಬರಾಬ್ಬರಿ 1 ಕೋಟಿ ರೂ.ಗೆ ಹೆಚ್ಚಿಸಲಾಗಿದೆ.

4 ಲಕ್ಷ ರೂ.ನಿಂದ 15 ಲಕ್ಷ ರೂ.ವರೆಗೆ ಹೆಚ್ಚುವರಿ ಪರಿಹಾರ

ಯೂನಿಯನ್ ಬ್ಯಾಂಕ್‌ನಲ್ಲಿ ವೇತನ ಖಾತೆ ಹೊಂದಿರುವ ನೌಕರರು ದುರಾದೃಷ್ಟವಶಾತ್ ಅಪಘಾತದಲ್ಲಿ ಮೃತಪಟ್ಟರೆ, ಅವರ ನಾಮನಿರ್ದೇಶಿತರಿಗೆ ಒಟ್ಟು 1 ಕೋಟಿ ರೂ. ವಿಮಾ ಪರಿಹಾರ ದೊರೆಯಲಿದೆ. ಇದರೊಂದಿಗೆ ನೌಕರರಿಗೆ ಸಂಪೂರ್ಣ ಅಥವಾ ಭಾಗಶಃ ಶಾಶ್ವತ ಅಂಗವೈಕಲ್ಯ ಉಂಟಾದ ಸಂದರ್ಭದಲ್ಲೂ 1 ಕೋಟಿ ರೂ. ವರೆಗೆ ವಿಮಾ ರಕ್ಷಣೆ ಸಿಗಲಿದೆ. ಅಲ್ಲದೆ, ರೂಪೇ ಪ್ಲಾಟಿನಂ ಡೆಬಿಟ್ ಕಾರ್ಡ್ ಮೂಲಕ 4 ಲಕ್ಷ ರೂ.ನಿಂದ 15 ಲಕ್ಷ ರೂ.ವರೆಗೆ ಹೆಚ್ಚುವರಿ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುವ ನೌಕರರಿಗೆ ವಾರ್ಷಿಕ 30,000 ರೂ.ವರೆಗೆ ವೈದ್ಯಕೀಯ ನೆರವು ನೀಡಲು ನೂತನ ಒಡಂಬಡಿಕೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕುಟುಂಬಕ್ಕೆ ಆರ್ಥಿಕ ನೆರವು

ಸಹಜ ಸಾವು ಅಥವಾ ಇತರ ಕಾರಣಗಳಿಂದ ನೌಕರರು ಮೃತಪಟ್ಟರೆ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ವ್ಯವಸ್ಥೆಯೂ ಇದ್ದು, 25,000 ರೂ.ಗಿಂತ ಕಡಿಮೆ ವೇತನ ಪಡೆಯುವವರಿಗೆ 5 ಲಕ್ಷ ರೂ. ಹಾಗೂ ಹೆಚ್ಚಿನ ವೇತನ ಪಡೆಯುವವರಿಗೆ 10 ಲಕ್ಷ ರೂ. ಪರಿಹಾರ ಸಿಗಲಿದೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ ಮೂರ್ತಿ ಹಾಗೂ ಯೂನಿಯನ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಎಚ್.ಟಿ. ವಾಸಪ್ಪ ಅವರು ಈ ನೂತನ ಮೂರು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ಐತಿಹಾಸಿಕ ನಿರ್ಧಾರದಿಂದ ಸಾವಿರಾರು ಸಾರಿಗೆ ನೌಕರರ ಕುಟುಂಬಗಳಿಗೆ ತೀವ್ರ ಸಂಕಷ್ಟದ ಸಮಯದಲ್ಲಿ ದೊಡ್ಡ ಮಟ್ಟದ ಆರ್ಥಿಕ ಭದ್ರತೆ ದೊರೆತಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ
ಗಗನ್​​ಗೆ ಕೌಂಟರ್ ಕೊಟ್ಟ ಆಸಿಯಾ, ಸೋನಿಕಾ ಇಂದ ಆಸಿಯಾಗೆ ಟಾಂಗ್​​: ವಿಡಿಯೋ
ಗಗನ್​​ಗೆ ಕೌಂಟರ್ ಕೊಟ್ಟ ಆಸಿಯಾ, ಸೋನಿಕಾ ಇಂದ ಆಸಿಯಾಗೆ ಟಾಂಗ್​​: ವಿಡಿಯೋ