ಬೆಂಗಳೂರು ನಿವಾಸಿಗಳೇ ಗಮನಿಸಿ; ಜುಲೈ ತಿಂಗಳ ಬಿಎಂಟಿಸಿ ಮಾಸಿಕ ಪಾಸ್ ವಿತರಣೆ ಆರಂಭ

ಏಪ್ರಿಲ್​ನಲ್ಲಿ ಸಾರಿಗೆ ಮುಷ್ಕರ ಹಿನ್ನೆಲೆ ಪಾಸ್ ಬಳಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಜುಲೈ 8ರವರೆಗೆ ಪಾಸ್ ಅವಧಿಯನ್ನು ವಿಸ್ತರಿಸಲಾಗಿತ್ತು. ಹಿಗಾಗಿ ಇದೀಗ ಹೊಸ ಮಾಸಿಕ ಪಾಸ್ ವಿತರಿಸಲು ಬಿಎಂಟಿಸಿ ಮುಂದಾಗಿದೆ.

ಬೆಂಗಳೂರು ನಿವಾಸಿಗಳೇ ಗಮನಿಸಿ; ಜುಲೈ ತಿಂಗಳ ಬಿಎಂಟಿಸಿ ಮಾಸಿಕ ಪಾಸ್ ವಿತರಣೆ ಆರಂಭ
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on:Jul 06, 2021 | 6:36 PM

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್​ಗಳು ಸೇವೆ ಆರಂಭಿಸಿದ ಬೆನ್ನಲ್ಲೇ ಹೊಸ ಮಾಸಿಕ‌ ಪಾಸ್​ಗಳ ವಿತರಣೆಗೆ ಸಾರಿಗೆ ಸಂಸ್ಥೆ ಮುಂದಾಗಿದೆ. ಜುಲೈ 9 ರಿಂದ ಜುಲೈ31ರವರೆಗೆ ಮಾನ್ಯತೆ ಇರುವಂತೆ ಪಾಸ್ ವಿತರಣೆ ಮಾಡಲಾಗುತ್ತಿದ್ದು, ಸಾಮಾನ್ಯ ಸೇವೆಯ ಪಾಸ್​ಗೆ 800 ರೂಪಾಯಿ ನಿಗದಿಪಡಿಸಲಾಗಿದೆ. ಹಿರಿಯ ನಾಗರಿಕರಿಗೆ ರಿಯಾತಿಯಲ್ಲಿ ₹ 720 ಕ್ಕೆ ಮಾಸಿಕ ಪಾಸ್ ನೀಡಲಾಗುತ್ತಿದೆ. ಏಪ್ರಿಲ್​ನಲ್ಲಿ ಸಾರಿಗೆ ಮುಷ್ಕರ ಹಿನ್ನೆಲೆ ಪಾಸ್ ಬಳಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಜುಲೈ 8ರವರೆಗೆ ಪಾಸ್ ಅವಧಿಯನ್ನು ವಿಸ್ತರಿಸಲಾಗಿತ್ತು. ಹಿಗಾಗಿ ಇದೀಗ ಹೊಸ ಮಾಸಿಕ ಪಾಸ್ ವಿತರಿಸಲು ಬಿಎಂಟಿಸಿ ಮುಂದಾಗಿದೆ.

ಬಿಎಂಟಿಸಿ ನೂತನ ಎಂಡಿ ಆಗಿ ಡಾ.ಎಂ.ಟಿ.ರೇಜು ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮುನ್ನ ಬಿಎಂಟಿಸಿ ಎಂಡಿಯಾಗಿದ್ದ ಶಿಖಾ ಅವರನ್ನ ಇತ್ತೀಚಿಗೆ ವಾಣಿಜ್ಯ ತೆರಿಗೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿತ್ತು. ಬಳಿಕ ಬಿಎಂಟಿಸಿ ಎಂಡಿ ಹುದ್ದೆಯನ್ನ ಹೆಚ್ಚುವರಿಯಾಗಿ ನೀಡಲಾಗಿತ್ತು. ಈಗ ಬಿಎಂಟಿಸಿ ಎಂಡಿ ಜಾಗಕ್ಕೆ ಡಾ. ರೇಜು ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ; ಕೊವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಈ ನಿರ್ಧಾರ: ಲಕ್ಷ್ಮಣ ಸವದಿ ಸ್ಪಷ್ಟನೆ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರವನ್ನು ಏರಿಕೆ ಮಾಡಿಲ್ಲ ಎಂದು ಮೈಸೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು (ಜುಲೈ 6) ಸ್ಪಷ್ಟನೆ ನೀಡಿದ್ದಾರೆ. ಬಸ್ ಟಿಕೆಟ್ ದರ ಏರಿಕೆ ಮಾಡುವಂತೆ ನಿಗಮಗಳಿಂದ ಪ್ರಸ್ತಾವನೆ ಬಂದಿದೆ. ಆದರೆ, ಕೊವಿಡ್ ಸಂಕಷ್ಟ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ದರ ಏರಿಕೆ ಇಲ್ಲ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದ ಜನರಿಗೆ ಸಾಕಷ್ಟು ತೊಂದರೆ ಆಗಿದೆ. ಈ ಸಂದರ್ಭದಲ್ಲಿ ಟಿಕೆಟ್ ದರ ಏರಿಸಿದರೆ ಮತ್ತಷ್ಟು ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡ್ತಿಲ್ಲ ಎಂದು ಮೈಸೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ, ಸಾರಿಗೆ ನೌಕರರ ಮುಷ್ಕರ ವಿಚಾರವಾಗಿಯೂ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ. ನೌಕರರು 9 ಬೇಡಿಕೆ ಮುಂದಿಟ್ಟಿದ್ದರು. ಅವುಗಳ ಪೈಕಿ 8 ಬೇಡಿಕೆ ಈಡೇರಿಸಿದ್ದೇವೆ. ಸಾರಿಗೆ ನೌಕರರು ವೇತನ ಪರಿಷ್ಕರಣೆ ಮಾಡಬೇಕು ಅಂತ ಕೇಳುತ್ತಿದ್ದಾರೆ. ಆದರೆ, ಲಾಕ್‌ಡೌನ್‌ನಿಂದಾಗಿ ನಿಗಮಕ್ಕೆ 4000 ಕೋಟಿ ರೂಪಾಯಿ ನಷ್ಟ ಆಗಿದೆ‌ ಎಂದು ಅವರು ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: 

ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳಿಗೆ ಸ್ವತಃ ಭೇಟಿ ನೀಡಿ ಪರಿಶೀಲಿಸಲು ನಿರ್ಧರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು: ಅನಧಿಕೃತ ಕಟ್ಟಡಗಳ ತೆರವು ವಿಚಾರ; ಕ್ರಮ ಕೈಗೊಳ್ಳದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ

(BMTC July monthly bus pass distribution started in Bengaluru)

Published On - 6:26 pm, Tue, 6 July 21

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು