ಬೆಂಗಳೂರು ನಿವಾಸಿಗಳೇ ಗಮನಿಸಿ; ಜುಲೈ ತಿಂಗಳ ಬಿಎಂಟಿಸಿ ಮಾಸಿಕ ಪಾಸ್ ವಿತರಣೆ ಆರಂಭ

| Updated By: guruganesh bhat

Updated on: Jul 06, 2021 | 6:36 PM

ಏಪ್ರಿಲ್​ನಲ್ಲಿ ಸಾರಿಗೆ ಮುಷ್ಕರ ಹಿನ್ನೆಲೆ ಪಾಸ್ ಬಳಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಜುಲೈ 8ರವರೆಗೆ ಪಾಸ್ ಅವಧಿಯನ್ನು ವಿಸ್ತರಿಸಲಾಗಿತ್ತು. ಹಿಗಾಗಿ ಇದೀಗ ಹೊಸ ಮಾಸಿಕ ಪಾಸ್ ವಿತರಿಸಲು ಬಿಎಂಟಿಸಿ ಮುಂದಾಗಿದೆ.

ಬೆಂಗಳೂರು ನಿವಾಸಿಗಳೇ ಗಮನಿಸಿ; ಜುಲೈ ತಿಂಗಳ ಬಿಎಂಟಿಸಿ ಮಾಸಿಕ ಪಾಸ್ ವಿತರಣೆ ಆರಂಭ
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್​ಗಳು ಸೇವೆ ಆರಂಭಿಸಿದ ಬೆನ್ನಲ್ಲೇ ಹೊಸ ಮಾಸಿಕ‌ ಪಾಸ್​ಗಳ ವಿತರಣೆಗೆ ಸಾರಿಗೆ ಸಂಸ್ಥೆ ಮುಂದಾಗಿದೆ. ಜುಲೈ 9 ರಿಂದ ಜುಲೈ31ರವರೆಗೆ ಮಾನ್ಯತೆ ಇರುವಂತೆ ಪಾಸ್ ವಿತರಣೆ ಮಾಡಲಾಗುತ್ತಿದ್ದು, ಸಾಮಾನ್ಯ ಸೇವೆಯ ಪಾಸ್​ಗೆ 800 ರೂಪಾಯಿ ನಿಗದಿಪಡಿಸಲಾಗಿದೆ. ಹಿರಿಯ ನಾಗರಿಕರಿಗೆ ರಿಯಾತಿಯಲ್ಲಿ ₹ 720 ಕ್ಕೆ ಮಾಸಿಕ ಪಾಸ್ ನೀಡಲಾಗುತ್ತಿದೆ. ಏಪ್ರಿಲ್​ನಲ್ಲಿ ಸಾರಿಗೆ ಮುಷ್ಕರ ಹಿನ್ನೆಲೆ ಪಾಸ್ ಬಳಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಜುಲೈ 8ರವರೆಗೆ ಪಾಸ್ ಅವಧಿಯನ್ನು ವಿಸ್ತರಿಸಲಾಗಿತ್ತು. ಹಿಗಾಗಿ ಇದೀಗ ಹೊಸ ಮಾಸಿಕ ಪಾಸ್ ವಿತರಿಸಲು ಬಿಎಂಟಿಸಿ ಮುಂದಾಗಿದೆ.

ಬಿಎಂಟಿಸಿ ನೂತನ ಎಂಡಿ ಆಗಿ ಡಾ.ಎಂ.ಟಿ.ರೇಜು ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮುನ್ನ ಬಿಎಂಟಿಸಿ ಎಂಡಿಯಾಗಿದ್ದ ಶಿಖಾ ಅವರನ್ನ ಇತ್ತೀಚಿಗೆ ವಾಣಿಜ್ಯ ತೆರಿಗೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿತ್ತು. ಬಳಿಕ ಬಿಎಂಟಿಸಿ ಎಂಡಿ ಹುದ್ದೆಯನ್ನ ಹೆಚ್ಚುವರಿಯಾಗಿ ನೀಡಲಾಗಿತ್ತು. ಈಗ ಬಿಎಂಟಿಸಿ ಎಂಡಿ ಜಾಗಕ್ಕೆ ಡಾ. ರೇಜು ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ; ಕೊವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಈ ನಿರ್ಧಾರ: ಲಕ್ಷ್ಮಣ ಸವದಿ ಸ್ಪಷ್ಟನೆ
ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರವನ್ನು ಏರಿಕೆ ಮಾಡಿಲ್ಲ ಎಂದು ಮೈಸೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು (ಜುಲೈ 6) ಸ್ಪಷ್ಟನೆ ನೀಡಿದ್ದಾರೆ. ಬಸ್ ಟಿಕೆಟ್ ದರ ಏರಿಕೆ ಮಾಡುವಂತೆ ನಿಗಮಗಳಿಂದ ಪ್ರಸ್ತಾವನೆ ಬಂದಿದೆ. ಆದರೆ, ಕೊವಿಡ್ ಸಂಕಷ್ಟ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ದರ ಏರಿಕೆ ಇಲ್ಲ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದ ಜನರಿಗೆ ಸಾಕಷ್ಟು ತೊಂದರೆ ಆಗಿದೆ. ಈ ಸಂದರ್ಭದಲ್ಲಿ ಟಿಕೆಟ್ ದರ ಏರಿಸಿದರೆ ಮತ್ತಷ್ಟು ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡ್ತಿಲ್ಲ ಎಂದು ಮೈಸೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ, ಸಾರಿಗೆ ನೌಕರರ ಮುಷ್ಕರ ವಿಚಾರವಾಗಿಯೂ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ. ನೌಕರರು 9 ಬೇಡಿಕೆ ಮುಂದಿಟ್ಟಿದ್ದರು. ಅವುಗಳ ಪೈಕಿ 8 ಬೇಡಿಕೆ ಈಡೇರಿಸಿದ್ದೇವೆ. ಸಾರಿಗೆ ನೌಕರರು ವೇತನ ಪರಿಷ್ಕರಣೆ ಮಾಡಬೇಕು ಅಂತ ಕೇಳುತ್ತಿದ್ದಾರೆ. ಆದರೆ, ಲಾಕ್‌ಡೌನ್‌ನಿಂದಾಗಿ ನಿಗಮಕ್ಕೆ 4000 ಕೋಟಿ ರೂಪಾಯಿ ನಷ್ಟ ಆಗಿದೆ‌ ಎಂದು ಅವರು ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: 

ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳಿಗೆ ಸ್ವತಃ ಭೇಟಿ ನೀಡಿ ಪರಿಶೀಲಿಸಲು ನಿರ್ಧರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು: ಅನಧಿಕೃತ ಕಟ್ಟಡಗಳ ತೆರವು ವಿಚಾರ; ಕ್ರಮ ಕೈಗೊಳ್ಳದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ

(BMTC July monthly bus pass distribution started in Bengaluru)

Published On - 6:26 pm, Tue, 6 July 21