
ಬೆಂಗಳೂರು, ಆಗಸ್ಟ್ 22: ಬೆಂಗಳೂರು ಮಹಾನಗರ ಸಾರಿಗೆಯ (BMTC) ಬಸ್ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು ಸಾಬೀತಾದರೇ ಕೆಲಸದಿಂದಲೇ ವಜಾ ಮಾಡಲಾಗುತ್ತದೆ. ಚಾಲನೆ ವೇಳೆ ಫೋನ್‌ನಲ್ಲಿ ಮಾತನಾಡಿದರೇ ಕೆಲಸದಿಂದ ಅಮಾನತು ಮಾಡಲಾಗುತ್ತದೆ. ಈ ಹೊಸ ನಿಯಮ ಇಂದಿನಿಂದಲೇ ಜಾರಿಯಾಗಲಿದೆ ಎಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಸಲ ಅಪಘಾತವೆಸಗಿದ್ದರೇ 6 ತಿಂಗಳು ಅಮಾನತು ಮಾಡುತ್ತೇವೆ. ಅಮಾನತು ಅವಧಿ ಮುಗಿದ ಮೇಲೆ ತರಬೇತಿ ನೀಡಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುತ್ತೇವೆ. ಮೊದಲ ಸಲ ಅಪಘಾತವೆಸಗಿದ ಚಾಲಕರಿಗೆ ಮೂರು ಇನ್ಕ್ರಿಮೆಂಟ್ ಕಡಿತಗೊಳಿಸಲಾಗುತ್ತದೆ. ಎರಡನೇ ಸಲ ಅಪಘಾತವೆಸಗಿದರೆ ಬಿಎಂಟಿಸಿ ಸಂಸ್ಥೆಯಿಂದಲೇ ವಜಾ ಮಾಡಲಾಗುತ್ತದೆ ಎಂದರು.
ಎಲೆಕ್ಟ್ರಿಕ್ ಬಸ್ ಚಾಲಕರು ಚಾಲನೆ ವೇಳೆ ವೇಳೆ ಫೋನ್‌ನಲ್ಲಿ ಮಾತಾಡಿದರೇ, ಬಸ್ ಕಂಪನಿಗೆ 5 ಸಾವಿರ ರೂಪಾಯಿ ದಂಡ,15 ದಿನಗಳ ಕಾಲ ಅಮಾನತು ಮಾಡಲಾಗುತ್ತದೆ. ಸೋಮವಾರದಿಂದ ಬಿಎಂಟಿಸಿ ಚಾಲಕರಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಚಾಲಕರಿಗೆ ಯೋಗ ತರಬೇತಿ ನೀಡಲಾಗುತ್ತದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಗಳಿಂದಲೇ ಅತಿ ಹೆಚ್ಚು ಅಪಘಾತ: ವಾರದಲ್ಲಿ ನಾಲ್ವರ ಸಾವು
ಬೆಂಗಳೂರು ಮಹಾನಗರವು ಅಧಿಕ ಸಂಚಾರ ದಟ್ಟಣೆಯಿಂದ ಕೂಡಿದ್ದು, ಲಕ್ಷಾಂತರ ಜನರು ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದು, ಸದರಿ ಪ್ರಯಾಣಿಕರ ಸುರಕ್ಷತೆಯ ಜೊತೆಗೆ ಸಹ ಸವಾರ ಸಾರ್ವಜನಿಕರ ಸುರಕ್ಷತೆಯು ಸಂಸ್ಥೆಯ ಆದ್ಯ ಕರ್ತವ್ಯವಾಗಿರುತ್ತದೆ. ಬೆಂಗಳೂರು ಮಹಾನಗರದಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದ್ದು, ರಸ್ತೆಗಳಲ್ಲಿ ನೀರು ನಿಲ್ಲುವುದು, ರಸ್ತೆ ಗುಂಡಿಗಳು ದುರಸ್ಥಿ ಹಾಗೂ ಇನ್ನಿತರ ಕಾರಣಗಳಿಂದ ಸಂಸ್ಥೆಯ ವಾಹನಗಳಿಂದ, ಸಂಭವಿಸುವ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಸದರಿ ಅಪಘಾತಗಳಲ್ಲಿ ದ್ವಿಚಕ್ರ ವಾಹನ ಸವಾರ, ಪಾದಚಾರಿ ಹಾಗೂ ಬಸ್ಸಿಗೆ ಹತ್ತುವ-ಇಳಿಯುವ ಪ್ರಯಾಣಿಕರು ಭಾಗಿಯಾಗಿರುವುದು ಕಂಡುಬಂದಿರುತ್ತದೆ. ಆದುದರಿಂದ, ವಿಭಾಗೀಯ ನಿಯಂತ್ರಣಾಧಿಕಾರಿಗಳು, ವಿಭಾಗೀಯ ಸಂಚಾರ ಅಧಿಕಾರಿಗಳು, ಘಟಕ ವ್ಯವಸ್ಥಾಪಕರು ಘಟಕಗಳಲ್ಲಿ ದ್ವಾರ ಸಭೆಯ ಮೂಲಕ ಪ್ರತಿ ದಿನ ಬೆಳಿಗ್ಗೆ, ಮಧ್ಯಾಹ್ನ, ಸಾಯಂಕಾಲ ಚಾಲನಾ ಸಿಬ್ಬಂದಿಗಳಿಗೆ ಸುರಕ್ಷಿತ ಚಾಲನೆಗೆ ಸಂಬಂಧಿಸಿದಂತೆ, ಈ ಕೆಳಕಂಡ ಅಂಶಗಳ ಕುರಿತು ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು.
ಮುಂದುವರೆದು, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ಮೇಲಿನ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಚಾಲನಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.
Published On - 4:27 pm, Fri, 22 August 25