ಬೆಂಗಳೂರು: ಇತ್ತೀಚೆಗೆ ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ (BMTC) ಪ್ರಯಾಣಿಕರಿಗೆ ಶಾಕ್ ನೀಡಿತ್ತು. ಆದರೆ ಈಗ ನಿಯಮ ಉಲ್ಲಂಘಿಸಿದ ಪ್ರಯಾಣಿಕರಿಂದ ದಂಡ ವಸೂಲಿ ಮಾಡುವ ಮೂಲಕ ಮತ್ತೆ ಶಾಕ್ ನೀಡಿದೆ. ಬಿಎಂಟಿಸಿ ಬಸ್ನಲ್ಲಿ ಟಿಕೆಟ್ ರಹಿತ 3,591 ಪ್ರಯಾಣಿಕರು ಪತ್ತೆಯಾಗಿದ್ದು, 16,226 ಟ್ರಿಪ್ ತಪಾಸಣೆ ನಡೆಸಿ 6,77,190 ರೂ. ದಂಡ ವಸೂಲಿ ಮಾಡಲಾಗಿದೆ. ಜನವರಿ ತಿಂಗಳಲ್ಲಿ ಒಟ್ಟು 7,09,390 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94ರ ಪ್ರಕಾರ ದಂಡ ವಸೂಲಿ ಮಾಡಲಾಗಿದೆ. ಜೊತೆಗೆ BMTC ಬಸ್ ನಿರ್ವಾಹಕರ ವಿರುದ್ಧ 1521 ಕೇಸ್ ದಾಖಲು ಮಾಡಲಾಗಿದೆ. ಮಹಿಳೆಯರಿಗೆ ಮೀಸಲಿರುವ ಸೀಟ್ನಲ್ಲಿ ಪುರುಷರ ಪ್ರಯಾಣ ಹಿನ್ನೆಲೆ 322 ಪುರುಷ ಪ್ರಯಾಣಿಕರಿಂದ 32,200 ರೂ. ದಂಡ ವಸೂಲಿ ಮಾಡುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದೆ. ಇನ್ಮುಂದೆ ಮಹಿಳಾ ಆಸನಗಳಲ್ಲಿ ಕುಳಿತು ಪ್ರಯಾಣಿಸದಿರಲು ಸೂಚನೆ ಕೂಡ ನೀಡಲಾಗಿದೆ.
ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್, ದಿನದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: BMTC: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕೊಡುಗೆ, ವೋಲ್ವೊ ಸೇರಿ ಎಲ್ಲ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣ ಉಚಿತ
ಕೇವಲ ಬೆಂಗಳೂರು ನಗರ, ಬೆಂ.ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನ ಸರ್ಕಾರ ವಿಸ್ತರಣೆ ಮಾಡಿದೆ. ಇತ್ತೀಚೆಗೆ ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದ್ದು, ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಿ, BMTC ಬೋರ್ಡ್ ಅನುಮತಿ ನೀಡುವ ಮೂಲಕ ಪ್ರಯಾಣಿಕರಿಗೆ ಗುಡ್ನ್ಯೂಸ್ ನೀಡಿದೆ.
ಇದನ್ನೂ ಓದಿ: BMTC Driver: ಬಿಎಂಟಿಸಿ ಎಂಡಿಯನ್ನು ಅಮಾನತು ಮಾಡುವಂತೆ ರಾಜ್ಯಪಾಲರಿಗೆ ಪತ್ರ ಬರೆದ ಬಸ್ ಚಾಲಕ
ಹೊಸ ವರ್ಷದ ಮೊದಲ ವಾರದಿಂದಲೇ ಬಿಎಂಟಿಸಿ ಪ್ರಯಾಣಿಕರಿಗೆ ನಿರಾಸೆ ಮೂಡಿಸಿದ್ದು, ಬಿಎಂಟಿಸಿ ಸಂಸ್ಥೆಯ ಆರ್ಥಿಕ ನಷ್ಟ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿತ್ತು, ಇದರ ಜೊತೆಗೆ ಮಾಸಿಕ ಪಾಸ್ ತೆಗೆದುಕೊಂಡವರಿಗೆ ಮತ್ತೊಂದು ಶಾಕ್ ನೀಡಿತ್ತು. ಸಾಮಾನ್ಯ ಪಾಸ್ ಹಾಗೂ ಹಿರಿಯ ನಾಗರಿಕರ ಪಾಸ್ ಪಡೆದವರು ಭಾನುವಾರ ಪಾಸ್ ಬಳಸಿ ಉಚಿತ ಪ್ರಯಾಣ ಮಾಡುವಂತಿಲ್ಲ ಎಂದು ಹೇಳಿದ್ದು, ಇದೀಗ ತನ್ನ ವ್ಯಾಪ್ತಿಯನ್ನ ವಿಸ್ತರಿಸುವ ಮೂಲಕ ಬಹುದಿನಗಳ ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸಮ್ಮತಿಸಿದೆ. ಇನ್ನು ಮುಂದೆ ಸಾಮಾನ್ಯ ಹಾಗೂ ಐಷಾರಾಮಿ ಬಸ್ಗಳು ಬೆಂಗಳೂರು ಟು ಚಿಕ್ಕಬಳ್ಳಾಪುರಕ್ಕೆ ಸಂಚಾರ ಮಾಡಲಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:57 pm, Wed, 22 February 23