Bengaluru: ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಿಸಲು ಆರಂಭಿಸಿದ ಬಿಎಂಟಿಸಿ; ಇಲ್ಲಿದೆ ವೆಬ್​ಸೈಟ್​ ಲಿಂಕ್​

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಗರದ ಎಲ್ಲ ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲು ಪ್ರಾರಂಭಿಸಿದೆ.

Bengaluru: ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಿಸಲು ಆರಂಭಿಸಿದ ಬಿಎಂಟಿಸಿ; ಇಲ್ಲಿದೆ ವೆಬ್​ಸೈಟ್​ ಲಿಂಕ್​
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Jul 08, 2023 | 1:21 PM

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ನಗರದ ಎಲ್ಲ ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು (Student Bus Pass) ವಿತರಿಸಲು ಪ್ರಾರಂಭಿಸಿದೆ. ವಿದ್ಯಾರ್ಥಿಗಳು 2023-24ನೇ ಸಾಲಿಗೆ ರಿಯಾಯಿತಿ ದರದಲ್ಲಿ ಸ್ಮಾರ್ಟ್ ಕಾರ್ಡ್ ಪಾಸ್‌ಗಳನ್ನು ಪಡೆಯಬಹುದು. ಪಾಸ್ ವಿತರಣೆ ವಿಳಂಬವಾದ ಹಿನ್ನೆಲೆ ಬಿಎಂಟಿಸಿ ಕಳೆದ ವರ್ಷದ ವಿದ್ಯಾರ್ಥಿಗಳ ಬಸ್ ಪಾಸ್‌ಗಳ ಸಿಂಧುತ್ವವನ್ನು ಜೂನ್ 30ರವರೆಗೆ ವಿಸ್ತರಿಸಿತ್ತು. ಇದೀಗ ಪಾಸ್​ ವಿತರಣೆ ಆರಂಭವಾಗಿದೆ.

ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಅಥವಾ ಬಿಎಂಟಿಸಿ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸ್ಮಾರ್ಟ್ ಕಾರ್ಡ್ ಪಾಸ್‌ಗಳನ್ನು ಆಫ್‌ಲೈನ್‌ನಲ್ಲಿ ಪಡೆಯಲು ಬಯಸುವ ವಿದ್ಯಾರ್ಥಿಗಳು ಅವುಗಳನ್ನು ಬಿಎಂಟಿಸಿ ಬಸ್ ನಿಲ್ದಾಣ, ಟ್ರಾಫಿಕ್ ಮತ್ತು ಟ್ರಾನ್ಸಿಟ್ ಮ್ಯಾನೇಜ್‌ಮೆಂಟ್ ಸೆಂಟರ್‌ಗಳಲ್ಲಿ (TTMC) ಪಾಸ್​ ಪಡೆಯಬಹುದು. ಟಿಟಿಎಂಸಿಗಳಲ್ಲಿ ವಿದ್ಯಾರ್ಥಿಗಳು ಬೆಳಿಗ್ಗೆ 8 ರಿಂದ ಸಂಜೆ 6:30 ರವರೆಗೆ ಬಸ್ ಪಾಸ್‌ಗಳನ್ನು ಪಡೆಯಬಹುದು.

ಇದನ್ನೂ ಓದಿ: BMTC: ವ್ಹೀಲ್​ಚೇರ್ ಬಳಸುವ ವಿಶೇಷ ಚೇತನರಿಗೂ ಬಿಎಮ್​ಟಿಸಿ ಬಸ್​ಗಳಲ್ಲಿ ಪ್ರಯಾಣಿಸುವ ಅವಕಾಶ?

‘ಶಕ್ತಿ’ ಯೋಜನೆಯಡಿ ವಿದ್ಯಾರ್ಥಿನಿಯರು ತಮ್ಮ ಆಧಾರ್ ಕಾರ್ಡ್‌ಗಳನ್ನು ತೋರಿಸಿ ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ಈ ಹಿಂದೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್‌ಗಳನ್ನು ಜೂನ್ 30 ರವರೆಗೆ ವಿಸ್ತರಿಸಿತ್ತು. ವಿದ್ಯಾರ್ಥಿಗಳು ತಮ್ಮ 2022-23 ರ ಬಸ್ ಪಾಸ್‌ಗಳನ್ನು ತೋರಿಸಿ ಪ್ರಯಾಣಿಸಲು ಅನುಮತಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:19 pm, Sat, 8 July 23

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ