ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ನಗರದ ಎಲ್ಲ ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು (Student Bus Pass) ವಿತರಿಸಲು ಪ್ರಾರಂಭಿಸಿದೆ. ವಿದ್ಯಾರ್ಥಿಗಳು 2023-24ನೇ ಸಾಲಿಗೆ ರಿಯಾಯಿತಿ ದರದಲ್ಲಿ ಸ್ಮಾರ್ಟ್ ಕಾರ್ಡ್ ಪಾಸ್‌ಗಳನ್ನು ಪಡೆಯಬಹುದು. ಪಾಸ್ ವಿತರಣೆ ವಿಳಂಬವಾದ ಹಿನ್ನೆಲೆ ಬಿಎಂಟಿಸಿ ಕಳೆದ ವರ್ಷದ ವಿದ್ಯಾರ್ಥಿಗಳ ಬಸ್ ಪಾಸ್‌ಗಳ ಸಿಂಧುತ್ವವನ್ನು ಜೂನ್ 30ರವರೆಗೆ ವಿಸ್ತರಿಸಿತ್ತು. ಇದೀಗ ಪಾಸ್ ವಿತರಣೆ ಆರಂಭವಾಗಿದೆ.
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಅಥವಾ ಬಿಎಂಟಿಸಿ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸ್ಮಾರ್ಟ್ ಕಾರ್ಡ್ ಪಾಸ್‌ಗಳನ್ನು ಆಫ್‌ಲೈನ್‌ನಲ್ಲಿ ಪಡೆಯಲು ಬಯಸುವ ವಿದ್ಯಾರ್ಥಿಗಳು ಅವುಗಳನ್ನು ಬಿಎಂಟಿಸಿ ಬಸ್ ನಿಲ್ದಾಣ, ಟ್ರಾಫಿಕ್ ಮತ್ತು ಟ್ರಾನ್ಸಿಟ್ ಮ್ಯಾನೇಜ್‌ಮೆಂಟ್ ಸೆಂಟರ್‌ಗಳಲ್ಲಿ (TTMC) ಪಾಸ್ ಪಡೆಯಬಹುದು. ಟಿಟಿಎಂಸಿಗಳಲ್ಲಿ ವಿದ್ಯಾರ್ಥಿಗಳು ಬೆಳಿಗ್ಗೆ 8 ರಿಂದ ಸಂಜೆ 6:30 ರವರೆಗೆ ಬಸ್ ಪಾಸ್‌ಗಳನ್ನು ಪಡೆಯಬಹುದು.
ಇದನ್ನೂ ಓದಿ: BMTC: ವ್ಹೀಲ್ಚೇರ್ ಬಳಸುವ ವಿಶೇಷ ಚೇತನರಿಗೂ ಬಿಎಮ್ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ಅವಕಾಶ?
‘ಶಕ್ತಿ’ ಯೋಜನೆಯಡಿ ವಿದ್ಯಾರ್ಥಿನಿಯರು ತಮ್ಮ ಆಧಾರ್ ಕಾರ್ಡ್‌ಗಳನ್ನು ತೋರಿಸಿ ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ಈ ಹಿಂದೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್‌ಗಳನ್ನು ಜೂನ್ 30 ರವರೆಗೆ ವಿಸ್ತರಿಸಿತ್ತು. ವಿದ್ಯಾರ್ಥಿಗಳು ತಮ್ಮ 2022-23 ರ ಬಸ್ ಪಾಸ್‌ಗಳನ್ನು ತೋರಿಸಿ ಪ್ರಯಾಣಿಸಲು ಅನುಮತಿಸಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:19 pm, Sat, 8 July 23