ಜೂನ್ 1 ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ: ಎಲ್ಲೆಲ್ಲಿ ಸಿಗುತ್ತೆ? ಇಲ್ಲಿದೆ ವಿವರ

BMTC student bus pass: ವಿದ್ಯಾರ್ಥಿಗಳ ರಿಯಾಯಿತಿ ಬಸ್ ಪಾಸ್‌ಗಳಿಗಾಗಿ ಅರ್ಜಿಗಳನ್ನು ಸ್ವೀಕರಿಸಲು ಬಿಎಂಟಿಸಿ ಇಂದಿನಿಂದ ಆರಂಭಿಸಿದ್ದು, ಜೂನ್ 1ರಿಂದ ಪಾಸ್ ವಿತರಣೆ ನಡೆಯಲಿದೆ. ಬಸ್ ಪಾಸ್​ ಅರ್ಜಿಗೆ ಯಾವೆಲ್ಲ ದಾಖಲೆ ಅಗತ್ಯ? ಅರ್ಜಿ ಸಲ್ಲಿಸುವುದು ಹೇಗೆ? ಎಲ್ಲೆಲ್ಲಿ ದೊರೆಯುತ್ತದೆ ಬಸ್ ಪಾಸ್? ಇತ್ಯಾದಿ ವಿವರ ಇಲ್ಲಿದೆ.

ಜೂನ್ 1 ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ: ಎಲ್ಲೆಲ್ಲಿ ಸಿಗುತ್ತೆ? ಇಲ್ಲಿದೆ ವಿವರ
ಜೂನ್ 1 ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ
Follow us
|

Updated on: May 29, 2024 | 10:29 AM

ಬೆಂಗಳೂರು, ಮೇ 29: ಬಿಎಂಟಿಸಿಯು 2024-25ನೇ ಸಾಲಿನ ವಿದ್ಯಾರ್ಥಿಗಳ (Student Bus Pass) ರಿಯಾಯಿತಿ ಬಸ್ ಪಾಸ್‌ಗಳಿಗಾಗಿ (BMTC Bus Pass) ಇಂದಿನಿಂದ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸುತ್ತಿದೆ. ಜೂನ್ 1 ರಿಂದ ಬಸ್ ಪಾಸ್‌ಗಳನ್ನು ವಿತರಿಸಲು ಆರಂಭಿಸಲಿದೆ. ಬಸ್ ಪಾಸ್​​​ಗೆ ಅರ್ಜಿಗಳನ್ನು https://sevasindhu.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಬಿಎಂಟಿಸಿ (BMTC) ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲೆಲ್ಲಿ ದೊರೆಯುತ್ತದೆ ಬಸ್ ಪಾಸ್?

ಬೆಂಗಳೂರು ಒನ್ ಕೇಂದ್ರಗಳು, ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್), ಕೆಂಗೇರಿ ಟಿಟಿಎಂಸಿ, ಶಾಂತಿನಗರ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ಸ್ ಸಿಟಿ ಡಿಪೋ-19, ಮತ್ತು ಆನೇಕಲ್ ಬಸ್ ನಿಲ್ದಾಣದಲ್ಲಿ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6.30 ರವರೆಗೆ ಪಾಸ್‌ಗಳನ್ನು ನೀಡಲಾಗುತ್ತದೆ.

ಶಕ್ತಿ ಯೋಜನೆಯಡಿ, ಕರ್ನಾಟಕದಲ್ಲಿ ನೆಲೆಸಿರುವ ವಿದ್ಯಾರ್ಥಿನಿಯರು ಬಿಎಂಟಿಸಿಯ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ತಿಳಿಸಿದೆ.

ಹೆಚ್ಚಿನ ವಿವರಗಳಿಗಾಗಿ, ಬಿಎಂಟಿಸಿ ಕಾಲ್ ಸೆಂಟರ್ ಸಂಖ್ಯೆ 080-22483777 ಸಂಪರ್ಕಿಸಿ ಅಥವಾ ಬಿಎಂಟಿಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ರಾಜ್ಯದ ವಿವಿಧಡೆಯಿಂದ ಬೆಂಗಳೂರಿಗೆ ಬರುವ ಕೆಲವು ರೈಲುಗಳು ಮೇ 31ರವರೆಗೆ ರದ್ದು; ಇಲ್ಲಿದೆ ವಿವರ

ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸುವವರು ರಾಜ್ಯದಲ್ಲಿ ಶಾಶ್ವತ ನಿವಾಸವನ್ನು ಹೊಂದಿರಬೇಕು. ಇತರ ಪರ್ಯಾಯಗಳ ಜೊತೆಗೆ ವಿದ್ಯಾರ್ಥಿಯು ಪದವಿ, ತಾಂತ್ರಿಕ, ವೃತ್ತಿಪರ, ವೈದ್ಯಕೀಯ ಅಥವಾ ಡಾಕ್ಟರೇಟ್ ಕೋರ್ಸ್‌ಗಳಿಗೆ ದಾಖಲಾಗಬೇಕು ಎಂದು ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ.

ಬಸ್ ಪಾಸ್​ ಅರ್ಜಿಗೆ ಯಾವೆಲ್ಲ ದಾಖಲೆ ಅಗತ್ಯ?

ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸುವಾಗ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಅರ್ಜಿದಾರರ ಆಧಾರ್ ಕಾರ್ಡ್, ನಿವಾಸ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಹಾಗೂ ಮೊಬೈಲ್ ಸಂಖ್ಯೆ ನೀಡಬೇಕಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘