AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಬಂದ 320 ಎಸಿ ಎಲೆಕ್ಟ್ರಿಕ್ ಬಸ್: ಮೊದಲ ಬಾರಿಗೆ ರಾಜಧಾನಿಯಲ್ಲಿ ಬಿಎಂಟಿಸಿ ಎಸಿ ಎಲೆಕ್ಟ್ರಿಕ್ ಬಸ್ ಸಂಚಾರ

ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆಯೇ ಸಿಲಿಕಾನ್ ಸಿಟಿ ಬೆಂಗಳೂರಿನ ಜನರು ಎಸಿ ಇರುವ ವಾಹನಗಳ, ಮೆಟ್ರೋ ರೈಲಿನ ಮೊರೆ ಹೋಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಬಿಎಂಟಿಸಿ ಹೈಟೆಕ್ ಎಸಿ ಬಸ್ಸುಗಳ ಮೊರೆ ಹೋಗಿದ್ದು, ಪ್ರಯಾಣಿಕರಿಗೆ ನೆರವಾಗಲು ಕ್ರಮ ಕೈಗೊಂಡಿದೆ. ಅಂದಹಾಗೆ, ರಾಜ್ಯ ರಾಜಧಾನಿಯಲ್ಲಿ ಎಸಿ ಎಲೆಕ್ಟ್ರಿಕ್ ಬಸ್ ಸಂಚಾರ ಇದೇ ಮೊದಲಾಗಿದೆ.

ಬೆಂಗಳೂರಿಗೆ ಬಂದ 320 ಎಸಿ ಎಲೆಕ್ಟ್ರಿಕ್ ಬಸ್: ಮೊದಲ ಬಾರಿಗೆ ರಾಜಧಾನಿಯಲ್ಲಿ ಬಿಎಂಟಿಸಿ ಎಸಿ ಎಲೆಕ್ಟ್ರಿಕ್ ಬಸ್ ಸಂಚಾರ
ಮೊದಲ ಬಾರಿಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಎಸಿ ಎಲೆಕ್ಟ್ರಿಕ್ ಬಸ್ ಸಂಚಾರ
Follow us
Kiran Surya
| Updated By: Ganapathi Sharma

Updated on: Apr 23, 2025 | 8:02 AM

ಬೆಂಗಳೂರು, ಏಪ್ರಿಲ್ 23: ಬೆಂಗಳೂರು (Bengaluru) ನಗರದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಲೇ ಇದೆ. ಇದರಿಂದ ತಪ್ಪಿಸಿಕೊಳ್ಳಲು ಪ್ರಯಾಣಿಕರು ಮೆಟ್ರೋ ರೈಲಿನ ಮೊರೆ ಹೋಗುತ್ತಿದ್ದಾರೆ. ಈ ಹಿಂದೆ ಪ್ರತಿದಿನ ಎಂಟು ಲಕ್ಷ ಪ್ರಯಾಣಿಕರು ಸಂಚಾರ ಮಾಡುತ್ತಿದ್ದರೆ, ಬೇಸಿಗೆ ಆರಂಭವಾದ ಮೇಲೆ 9 ಲಕ್ಷ ಪ್ರಯಾಣಿಕರು ಮೆಟ್ರೋದಲ್ಲಿ ಸಂಚಾರ ಮಾಡುತ್ತಿದ್ದಾರೆ. ಬಿಎಂಟಿಸಿ (BMTC) ಅಂದರೆ ಜನರು ಮೂಗು ಮುರಿಯುತ್ತಿದ್ದಾರೆ. ಇದಕ್ಕೆ ಬ್ರೇಕ್ ಹಾಕಲು ಬಿಎಂಟಿಸಿ ಮುಂದಾಗಿದ್ದು, 320 ಹೊಚ್ಚ ಹೊಸ ಬಸ್​​ಗಳ ಮೊರೆ ಹೋಗಿದೆ. ಈಗಾಗಲೇ ಎಸಿ ಎಲೆಕ್ಟ್ರಿಕ್ ಬಸ್​ಗಳ (BMTC Electric AC Buses) ಪ್ರಾಯೋಗಿಕ ಸಂಚಾರ ಯಶಸ್ವಿಯೂ ಆಗಿದೆ. ಸದ್ಯದಲ್ಲೇ ಈ ಎಲ್ಲಾ ಬಸ್​​ಗಳಿಗೆ ಸಿಎಂ, ಡಿಸಿಎಂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಲಿದ್ದಾರೆ.

ಈ ಬಗ್ಗೆ ಮಾತನಾಡಿದ ಪ್ರಯಾಣಿಕರು, ಪ್ರಾಯೋಗಿಕ ಸಂಚಾರದ ವೇಳೆ ನಾವು ಈ ಬಸ್​ನಲ್ಲಿ ಸಂಚಾರ ಮಾಡಿದ್ದೇವೆ. ತುಂಬಾ ಚೆನ್ನಾಗಿದೆ ಎಂದಿದ್ದಾರೆ.

ಎಸಿ ಬಸ್​​ಗಳು ಅಶೋಕ್ ಲೇಲ್ಯಾಂಡ್ ನ ಓಂ ಕಂಪ‌ನಿಯಾದ್ದಗಿವೆ. ಒಟ್ಟು 320 ಎಸಿ ಎಲೆಕ್ಟ್ರಿಕ್ ಬಸ್​​ಗಳು ಕಿಮೀಗೆ 65 ರುಪಾಯಿಯಂತೆ ಗುತ್ತಿಗೆ ಆಧಾರದಲ್ಲಿ 12 ವರ್ಷಗಳ ಕಾಲ ರಾಜಧಾನಿಯಲ್ಲಿ ಸಂಚಾರ ಮಾಡಲಿವೆ.

ಇದನ್ನೂ ಓದಿ
Image
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
Image
ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೊಬ್ಬ ಕನ್ನಡಿಗ ಬಲಿ
Image
ದುಷ್ಟರ ಉದ್ದೇಶವೆಂದೂ ಯಶಸ್ವಿಯಾಗದು; ಪಹಲ್ಗಾಮ್ ದಾಳಿಗೆ ಮೋದಿ ಖಂಡನೆ
Image
ಪಹಲ್ಗಾಮ್‌ ಉಗ್ರರ ದಾಳಿ, ಕನ್ನಡಿಗರ ನೆರವಿಗೆ ಅಧಿಕಾರಿಗಳನ್ನ ಕಳುಹಿಸಿದ ಸಿಎಂ

ಎಲ್ಲೆಲ್ಲ ಎಸಿ ಎಲೆಕ್ಟ್ರಿಕ್ ಬಸ್ ಸಂಚಾರ?

ಕೆಂಪೇಗೌಡ ವಿಮಾನ ನಿಲ್ದಾಣ, ಮೆಜೆಸ್ಟಿಕ್, ಕತ್ರಿಗುಪ್ಪೆ, ಐಟಿಪಿಎಲ್, ಎಚ್​ಎಸ್​ಆರ್ ಲೇಔಟ್ ಡಿಪೋದಿಂದ ಬಸ್ ಕಾರ್ಯಾಚರಣೆ ‌ಮಾಡಲು ಯೋಜನೆ ರೂಪಿಸಲಾಗುತ್ತಿದೆ. ವಿಮಾನ ನಿಲ್ದಾಣಕ್ಕೆ ವಾಯುವಜ್ರ ಬಸ್ ನಿಲ್ಲಿಸಿ, ಈ ಎಸಿ ಎಲೆಕ್ಟ್ರಿಕ್ ಬಸ್​ಗಳನ್ನು 900 ಟ್ರಿಪ್​​ಗಳಲ್ಲಿ ಬಸ್ ಓಡಿಸಲು ಬಿಎಂಟಿಸಿ ಯೋಜನೆ ರೂಪಿಸುತ್ತಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ತಂಡ ದೌಡು: ಕೊಪ್ಪಳದ 20 ಮಂದಿ ಸುರಕ್ಷಿತ

ಒಟ್ಟಿನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ವಾಯುಮಾಲಿನ್ಯಕ್ಕೆ ಕೊಂಚಮಟ್ಟಿಗಾದರೂ ಈ ಎಲೆಕ್ಟ್ರಿಕ್ ಬಸ್​​ಗಳು ಬ್ರೇಕ್ ಹಾಕುವುದರಲ್ಲಿ ಅನುಮಾನವೇ ಇಲ್ಲ. ಈ ಬಸ್​​ಗಳಿಗೆ ಯಾವಾಗ ಚಾಲನೆ ದೊರೆಯಲಿದೆ ಎಂದು ಪ್ರಯಾಣಿಕರು ಕಾಯುತ್ತಿರುವುದಂತೂ ಸುಳ್ಳಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ