AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTCಯಿಂದ ತಡರಾತ್ರಿವರೆಗೆ ಫೀಡರ್ ಬಸ್ ಕಾರ್ಯಾಚರಣೆ

ಇದೀಗ ಮತ್ತೆ ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಮೆಟ್ರೋ ಸೇವೆ ವಿಸ್ತರಣೆ ಬೆನ್ನಲ್ಲೇ ಫೀಡರ್ ಬಸ್​ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಲಾಗಿದೆ.

BMTCಯಿಂದ ತಡರಾತ್ರಿವರೆಗೆ ಫೀಡರ್ ಬಸ್ ಕಾರ್ಯಾಚರಣೆ
ಬಿಎಂಟಿಸಿ ಬಸ್
TV9 Web
| Edited By: |

Updated on:Nov 17, 2021 | 8:06 PM

Share

ಬೆಂಗಳೂರು: ಬಿಎಂಟಿಸಿ (BMTC) ಯಿಂದ ತಡರಾತ್ರಿವರೆಗೆ ಫೀಡರ್​ ಬಸ್ ಕಾರ್ಯಾಚರಣೆ ನಡೆಸಲಿದೆ. ತಡರಾತ್ರಿವರೆಗೂ ಮೆಟ್ರೋ ಫೀಡರ್ ಬಸ್ ಕಾರ್ಯಾಚರಣೆ ಮಾಡಲಿದೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಮೆಟ್ರೋ ರೈಲು ಸೇವೆ ಒದಗಿಸಲಿದೆ. ಹೀಗಾಗಿ ಜನರಿಗೆ ಅನುಕೂಲವಾಗಲು ಫೀಡರ್ ಬಸ್​ ಸೇವೆ ಸಿಗಲಿದೆ.

ಕೊರೊನಾ ಸಾಂಕ್ರಾಮಿಕ ಬಳಿಕ ಮೆಟ್ರೋ ರೈಲು ಸೇವೆ ಅವಧಿ ಕಡಿತಗೊಳಿಸಲಾಗಿತ್ತು. ಇದೀಗ ಮತ್ತೆ ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಮೆಟ್ರೋ ಸೇವೆ ವಿಸ್ತರಣೆ ಬೆನ್ನಲ್ಲೇ ಫೀಡರ್ ಬಸ್​ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಲಾಗಿದೆ.

ಕರ್ನಾಟಕದಲ್ಲಿ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ. ನ.18ರಿಂದ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ. ಮೆಜೆಸ್ಟಿಕ್​ನಿಂದ 11:30ಕ್ಕೆ ಕೊನೆಯ ರೈಲು ಸಂಚರಿಸಲಿದೆ.

ಭಾನುವಾರ ಬೆಳಿಗ್ಗೆ ಒಂದು ತಾಸು ತಡವಾಗಿ, ಎಂದರೆ 7 ಗಂಟೆಯಿಂದ ಸೇವೆ ಆರಂಭವಾಗಲಿದೆ. ಕೊರೊನಾ ಪಿಡುಗು ಹರಡುವ ಮೊದಲು ಇದ್ದ ವೇಳಾಪಟ್ಟಿಯ ಮಾದರಿಯಲ್ಲಿಯೇ ನವೆಂಬರ್ 18ರಿಂದ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ. ಕೊರೋನಾ ಅನ್​ಲಾಕ್ ಆದ ಬಳಿಕ ಹಂತಹಂತವಾಗಿ ನಮ್ಮ ಮೆಟ್ರೋ ಸೇವೆಯ ಅವಧಿ ವಿಸ್ತರಣೆಯಾಗಿತ್ತು. ಈವರೆಗೆ ಬೆಳಿಗ್ಗೆ 7ರಿಂದ ರಾತ್ರಿ 10ರವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸುತ್ತಿದ್ದವು.

ಇದನ್ನೂ ಓದಿ: Namma Metro: ಬೆಂಗಳೂರು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ: ಕೊರೊನಾ ಮೊದಲಿನ ವೇಳಾಪಟ್ಟಿ

ಇದನ್ನೂ ಓದಿ: ರಸ್ತೆ, ಮೆಟ್ರೋ, ಕೆರೆಗಳ ಅಭಿವೃದ್ಧಿ; ಮಿಷನ್ 2022 ಪ್ರಗತಿ ಪರಿಶೀಲನ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಸಲಹೆ

Published On - 7:54 pm, Wed, 17 November 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ