ಬೆಂಗಳೂರು: ಬಿಎಂಟಿಸಿ (BMTC) ಯಿಂದ ತಡರಾತ್ರಿವರೆಗೆ ಫೀಡರ್ ಬಸ್ ಕಾರ್ಯಾಚರಣೆ ನಡೆಸಲಿದೆ. ತಡರಾತ್ರಿವರೆಗೂ ಮೆಟ್ರೋ ಫೀಡರ್ ಬಸ್ ಕಾರ್ಯಾಚರಣೆ ಮಾಡಲಿದೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಮೆಟ್ರೋ ರೈಲು ಸೇವೆ ಒದಗಿಸಲಿದೆ. ಹೀಗಾಗಿ ಜನರಿಗೆ ಅನುಕೂಲವಾಗಲು ಫೀಡರ್ ಬಸ್ ಸೇವೆ ಸಿಗಲಿದೆ.
ಕೊರೊನಾ ಸಾಂಕ್ರಾಮಿಕ ಬಳಿಕ ಮೆಟ್ರೋ ರೈಲು ಸೇವೆ ಅವಧಿ ಕಡಿತಗೊಳಿಸಲಾಗಿತ್ತು. ಇದೀಗ ಮತ್ತೆ ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಮೆಟ್ರೋ ಸೇವೆ ವಿಸ್ತರಣೆ ಬೆನ್ನಲ್ಲೇ ಫೀಡರ್ ಬಸ್ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಲಾಗಿದೆ.
ಕರ್ನಾಟಕದಲ್ಲಿ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ. ನ.18ರಿಂದ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ. ಮೆಜೆಸ್ಟಿಕ್ನಿಂದ 11:30ಕ್ಕೆ ಕೊನೆಯ ರೈಲು ಸಂಚರಿಸಲಿದೆ.
ಭಾನುವಾರ ಬೆಳಿಗ್ಗೆ ಒಂದು ತಾಸು ತಡವಾಗಿ, ಎಂದರೆ 7 ಗಂಟೆಯಿಂದ ಸೇವೆ ಆರಂಭವಾಗಲಿದೆ. ಕೊರೊನಾ ಪಿಡುಗು ಹರಡುವ ಮೊದಲು ಇದ್ದ ವೇಳಾಪಟ್ಟಿಯ ಮಾದರಿಯಲ್ಲಿಯೇ ನವೆಂಬರ್ 18ರಿಂದ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ. ಕೊರೋನಾ ಅನ್ಲಾಕ್ ಆದ ಬಳಿಕ ಹಂತಹಂತವಾಗಿ ನಮ್ಮ ಮೆಟ್ರೋ ಸೇವೆಯ ಅವಧಿ ವಿಸ್ತರಣೆಯಾಗಿತ್ತು. ಈವರೆಗೆ ಬೆಳಿಗ್ಗೆ 7ರಿಂದ ರಾತ್ರಿ 10ರವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸುತ್ತಿದ್ದವು.
ಇದನ್ನೂ ಓದಿ: Namma Metro: ಬೆಂಗಳೂರು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ: ಕೊರೊನಾ ಮೊದಲಿನ ವೇಳಾಪಟ್ಟಿ
ಇದನ್ನೂ ಓದಿ: ರಸ್ತೆ, ಮೆಟ್ರೋ, ಕೆರೆಗಳ ಅಭಿವೃದ್ಧಿ; ಮಿಷನ್ 2022 ಪ್ರಗತಿ ಪರಿಶೀಲನ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಸಲಹೆ
Published On - 7:54 pm, Wed, 17 November 21