Bomb Threat: ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್

ಕಳೆದ ಸೆ.28 ರಂದು ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ ಹಾಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ನಗರದ ಕೆಲವು ಕಾಲೇಜುಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ ಬಂದಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

Bomb Threat: ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್
ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 04, 2024 | 5:26 PM

ಬೆಂಗಳೂರು, ಅ.04: ಬೆಂಗಳೂರಿನ ಕೆಲವು ಕಾಲೇಜು(College)ಗಳಿಗೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಎಂಎಸ್​​ ಕಾಲೇಜು, ವಿ.ವಿ.ಪುರಂನಲ್ಲಿರುವ ಬಿಐಟಿ​ ಕಾಲೇಜು ಸೇರಿದಂತೆ ಕೆಲವು ಕಾಲೇಜುಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರ ಬಂದಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕಿಯ ಸಿಬ್ಬಂದಿ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಮುಂಜಾಗೃತ ಕ್ರಮವಾಗಿ ಪೊಲೀಸರು ಮೂರು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಹೊರಕ್ಕೆ ಕಳುಹಿಸಿದ್ದಾರೆ. ಸದ್ಯ ಪರಿಶೀಲನೆ ಮುಂದುವರೆದಿದೆ.

ಘಟನೆ ಕುರಿತು ಮಾತನಾಡಿದ ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಜಗಲಾಸರ್, ‘ಇಂದು ಮಧ್ಯಾಹ್ನ 1 ಗಂಟೆಗೆ ಮೂರು ಕಾಲೇಜಿಗೆ ಡೆಸ್ಕ್​ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ‌ ಮೇಲ್ ಬಂದಿದೆ. ಈ ಬಗ್ಗೆ ಹನುಮಂತ ನಗರ ಠಾಣೆಯಲ್ಲಿ ಕೇಸ್​ ದಾಖಲಾಗಿದೆ. ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಗುತ್ತಿದೆ. ಮೇಲ್ ಕಳಿಸಿರುವ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಮೂರು ಕಾಲೇಜುಗಳಿಗೆ ಒಂದೇ ಮೇಲ್ ಐಡಿಯಿಂದ ಬೆದರಿಕೆ ಬಂದಿದ್ದು, ಆ ಸಂಬಂಧ ತನಿಖೆ ಮುಂದುವರಿದಿದೆ ಎಂದರು.

ಇದನ್ನೂ ಓದಿ:Bomb Threat: ಬೆಂಗಳೂರಿನ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ; ಸ್ಥಳಕ್ಕೆ ಪೊಲೀಸರು ದೌಡು

ಇನ್ನು ಇದೇ ಸೆ.28 ರಂದು ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ ಹಾಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದರು. ಇದಾದ ಆರು ದಿನಗಳ ಬಳಿಕ ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಇ-ಮೇಲ್ ಮುಖಾಂತರ ಬಾಂಬ್​ ಬೆದರಿಕೆ ಬಂದಿದೆ.

ಇಂತಹ ಘಟನೆಗಳು ಇದೇ ಮೊದಲಲ್ಲ, ಹಲವಾರು ಬಾರಿ ನಡೆದಿವೆ. ಆದರೆ, ಇನ್ನೂವರೆಗೂ ಕಿಡಿಗೇಡಿಗಳು ಮಾತ್ರ ಪತ್ತೆಯಾಗಿಲ್ಲ. ಕಳೆದ ಆರು ದಿನಗಳ ಹಿಂದೆಯಷ್ಟೇ ತಾಜ್ ವೆಸ್ಟ್ ಎಂಡ್ ​ಹೋಟೆಲ್​ ಹಾಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾಗೆ ಇದೇ ರೀತಿಯ ಬಾಂಬ್​ ಬೆದರಿಕೆ ಇ-ಮೇಲ್​ ಬಂದಿತ್ತು. ಅಷ್ಟೇ ಅಲ್ಲ, ಇತ್ತೀಚೆಗೆ ಬೆಂಗಳೂರಿನ ಅಶೋಕ್ ನಗರದಲ್ಲಿರುವ ಸೈನಿಕ ಶಾಲೆಗೂ ಇಂತಹುದೇ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು. ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿತ್ತು. ಇಂತಹ ಬೆದರಿಕೆ ಇ-ಮೇಲ್​ಗಳು ಬರುತ್ತಲೇ ಇದೆ. ಆದರೆ, ಈವರೆಗೂ ಆರೋಪಿಗಳು ಮಾತ್ರ ಸಿಗದೆ ಇರುವುದು ದರುಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Fri, 4 October 24

ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ