Bomb Threat: ಬೆಂಗಳೂರಿನ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ; ಸ್ಥಳಕ್ಕೆ ಪೊಲೀಸರು ದೌಡು
ಇಂದು ಮಧ್ಯಾಹ್ನ ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಇದಾಗಿ ಕೆಲವೇ ಗಂಟೆಗಳ ಬಳಿಕ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಸಧ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು, ಸೆ.28: ಬೆಂಗಳೂರು (Bengaluru) ನಗರದ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ((bomb threat) ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಆರು ತಿಂಗಳ ಹಿಂದೆಯೂ ಹೊಟೇಲ್ ಓಟೇರಾಗೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಇದೀಗ ಮತ್ತೆ ಬಾಂಬ್ ಇಟ್ಟು ಹೊಟೇಲ್ ಸ್ಪೋಟಿಸುವುದಾಗಿ ಈ ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಈ ಮೂಲಕ ಒಂದೇ ದಿನ ಎರಡು ನಗರದ ಎರಡು ಪ್ರತಿಷ್ಠಿತ ಹೋಟೆಲ್‌ಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾಳ ದಳ ಮತ್ತು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿದ್ದು, ಸಂಪೂರ್ಣ ಹೋಟೆಲ್ನ್ನು ತಪಾಸಣೆ ಮಾಡಲಾಗುತ್ತಿದೆ.
ಇಂದು(ಶನಿವಾರ) ಮಧ್ಯಾಹ್ನ 12 ಗಂಟೆಯ ಸುಮಾರಿಗೆ ರಾಜಕಾರಣಿಗಳು, ಕ್ರಿಕೆಟರ್ಗಳು ಆಗಾಗ ವಾಸ್ತವ್ಯ ಹೂಡುವ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಕೂಡಲೇ ಎಚ್ಚೆತ್ತ ಹೋಟೆಲ್ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೆಲಹೊತ್ತಲ್ಲೇ ಸ್ಥಳಕ್ಕೆ ಬಂದ ಪೊಲೀಸರು, ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದರು. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.
ಇದನ್ನೂ ಓದಿ:ಬೆಂಗಳೂರು: ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಬಾಂಬ್ ಬೆದರಿಕೆ
ಇತ್ತೀಚೆಗೆ ಬೆಂಗಳೂರಿನ ಅಶೋಕ್ ನಗರದಲ್ಲಿರುವ ಸೈನಿಕ ಶಾಲೆಗೂ ಇಂತಹುದೇ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು. ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ. ಇಂತಹ ಘಟನೆಗಳು ಇದೇ ಮೊದಲಲ್ಲ, ಹಲವಾರು ಬಾರಿ ನಡೆದಿವೆ. ಆದರೆ, ಇನ್ನೂವರೆಗೂ ಕಿಡಿಗೇಡಿಗಳು ಮಾತ್ರ ಪತ್ತೆಯಾಗಿಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:53 pm, Sat, 28 September 24