Bomb Threat: ಬೆಂಗಳೂರಿನ ಪ್ರತಿಷ್ಠಿತ ಶಾಂಗ್ರೀಲಾ ಹೋಟೆಲ್ಗೆ ಬಾಂಬ್ ಬೆದರಿಕೆ
Bomb Threat to Hotel Shangri La; ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಶಾಂಗ್ರೀಲಾಗೆ ಶುಕ್ರವಾರ ರಾತ್ರಿ ಬಾಂಬ್ ದಾಳಿ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. ಹೋಟೆಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಬೆದರಿಕೆ ಸಂದೇಶ ಬಂದ ತಕ್ಷಣವೇ ಶಾಂಗ್ರೀಲಾ ಸಿಬ್ಬಂದಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರಿನ (Bangalore) ಪ್ರತಿಷ್ಠಿತ ಹೋಟೆಲ್ ಶಾಂಗ್ರೀಲಾಗೆ (Shangri-La Hotel) ಶುಕ್ರವಾರ ರಾತ್ರಿ ಬಾಂಬ್ ದಾಳಿ ಬೆದರಿಕೆಯ (Bomb Threat) ಇ-ಮೇಲ್ ಸಂದೇಶ ಬಂದಿದೆ. luisamaclare@proton.me ಎಂಬ ಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎನ್ನಲಾಗಿದೆ. ಹೋಟೆಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಬೆದರಿಕೆ ಸಂದೇಶ ಬಂದ ತಕ್ಷಣವೇ ಶಾಂಗ್ರೀಲಾ ಸಿಬ್ಬಂದಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಹೋಟೆಲ್‌ನಲ್ಲಿ ತಪಾಸಣೆ ಸಹ ನಡೆಸಲಾಗುತ್ತಿದೆ. ಬೆಂಗಳೂರು ಮಾತ್ರವಲ್ಲದೇ ದೇಶದ ಹಲವೆಡೆ ಇರುವ ಶಾಂಗ್ರಿಲಾ ಹೋಟೆಲ್‌ಗಳ ಇ-ಮೇಲ್‌ಗೆ ಬೆದರಿಕೆ ಸಂದೇಶ ಬಂದಿರುವುದಾಗಿ ದೂರುದಾರ ತಿಳಿಸಿದ್ದಾರೆ. ಸಾಮೂಹಿಕವಾಗಿ ಸಂದೇಶ ಕಳುಹಿಸಿ ಹೋಟೆಲ್‌ನವರಿಗೆ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗುತ್ತಿದೆ.
ಹಣಕ್ಕೆ ಬೇಡಿಕೆ
ನಿಮ್ಮ ಹೋಟೆಲ್‌ನಲ್ಲಿ ಬಾಂಬ್ ಇರಿಸಿ ಸ್ಫೋಟಿಸಲಾಗುವುದು. ಹೀಗೆ ಮಾಡಬಾರದೆಂದರೆ, 10 ಸಾವಿರ ಡಾಲರ್ (3 8.29 ಲಕ್ಷ) ಹಣ ನೀಡಿ ಎಂಬುದಾಗಿ ಆರೋಪಿಗಳು ಇಂಗ್ಲಿಷ್ ಮತ್ತು ಚೈನಿಸ್ ಭಾಷೆಗಳಲ್ಲಿ ಇಮೇಲ್ ಸಂದೇಶ ಕಳುಹಿಸಿದ್ದಾರೆ. ಯಾರೋ ಕಿಡಿಗೇಡಿಗಳು, ನಕಲಿ ಇ-ಮೇಲ್ ಸೃಷ್ಟಿಸಿದ್ದಾರೆ. ಅದರ ಮೂಲಕ ಸಾಮೂಹಿಕವಾಗಿ ಎಲ್ಲ ಹೋಟೆಲ್‌ಗಳಿಗೂ ಇ-ಮೇಲ್ ಕಳುಹಿಸಿ ಬೆದರಿಕೆಯೊಡ್ತಿದ್ದಾರೆ. ತಾಂತ್ರಿಕ ಪುರಾವೆಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:19 pm, Fri, 11 August 23