AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹಲಸೂರು ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು ನಗರದಲ್ಲಿ ಬಾಂಬ್ ಬೆದರಿಕೆ ಹಾವಳಿ ಇನ್ನು ನಿಂತಿಲ್ಲ. ಕೆಲವು ದಿನಗಳ ಹಿಂದಷ್ಟೇ ಬೆಂಗಳೂರು ಸಿವಿಲ್ ಕೋರ್ಟ್ ಮತ್ತು ಹೈಕೋರ್ಟಿಗೆ . ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಇದೀಗ ಬೆಂಗಳೂರಿನ ಗುರುದ್ವಾರವೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಹಲಸೂರು ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: Ganapathi Sharma|

Updated on:Aug 29, 2025 | 10:57 AM

Share

ಬೆಂಗಳೂರು, ಆಗಸ್ಟ್ 29: ಬೆಂಗಳೂರಿನ (Bengaluru) ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ (Bomb Threat) ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ಕು ಆರ್​​ಡಿಎಕ್ಸ್ ಸ್ಫೋಟಿಸುವುದಾಗಿ ರಾಜ ಗಿರಿ ಎಂಬಾತನ ಹೆಸರಿನಲ್ಲಿ ಕಳುಹಿಸಲಾದ ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿದ್ದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ಋಷಿಪಾಲ್ ಸಿಂಗ್ ಎಂಬವರು ನೀಡಿದ ದೂರು ಆಧರಿಸಿ ಕೇಸ್ ದಾಖಲಿಸಿದ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಸಂದೇಶಗಳು ಹೆಚ್ಚಾಗುತ್ತಿರುವುದು ಪೊಲೀಸರ ನಿದ್ದೆಗೆಡಿಸಿದೆ. ಆರು ದಿನಗಳ ಹಿಂದಷ್ಟೇ, ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ತಕ್ಷಣವೇ ಹಲಸೂರು ಗೇಟ್ ಪೊಲೀಸರು ಮತ್ತು ಶ್ವಾನದಳ ಕೋರ್ಟ್ ಆವರಣವನ್ನು ಪರಿಶೀಲಿಸಿ, ಅದೊಂದು ಹುಸಿ ಬಾಂಬ್ ಬೆದರಿಕೆ ಎಂಬುದನ್ನು ಪತ್ತೆ ಹಚ್ಚಿತ್ತು.

ಜುಲೈ 27ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಚೇರಿ ಮತ್ತು ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.

ಇದನ್ನೂ ಓದಿ
Image
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಸಂದೇಶ
Image
ಗುರುದ್ವಾರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಬೆದರಿಕೆ ಸಂದೇಶ
Image
ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ
Image
ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ: ಹೈ ಅಲರ್ಟ್

ಇದನ್ನೂ ಓದಿ: ಬೀದರ್​ನ ಗುರುದ್ವಾರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಬಂತು ಬೆದರಿಕೆ ಸಂದೇಶ!

ತಿಂಗಳ ಹಿಂದಷ್ಟೇ ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಇದರಿಂದ ಶಾಲೆಗಳಲ್ಲಿ ಆತಂಕದ ಪರಿಸ್ಥಿತಿ ಸೃಷ್ಟಿಯಾಗಿತ್ತು. ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ ತಪಾಸಣೆ ನಡೆಸಲಾಗಿತ್ತು. ನಂತರ ಅದೂ ಸಹ ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:46 am, Fri, 29 August 25