AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ, ಎಫ್​​ಐಆರ್​ ದಾಖಲು

ಕಳೆದ ಕೆಲವು ತಿಂಗಳ ಹಿಂದೆ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್​ ಬೆದರಿಕೆ ಸಂದೇಶಗಳು ಬಂದಿದ್ದವು. ಈ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಇದಾದ ಬಳಿಕ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟ ಸಂಭವಿಸಿತ್ತು. ಈ ಎರಡೂ ಪ್ರಕರಣಗಳು ಜನಮನದಿಂದ ಮಾಸುವ ಮುನ್ನವೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಬೆದರಿಕೆ ಸಂದೇಶ ಬಂದಿದೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ, ಎಫ್​​ಐಆರ್​ ದಾಖಲು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 29, 2024 | 1:30 PM

Share

ಬೆಂಗಳೂರು, ಮೇ 08: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 1 (Terminal 1) ಮತ್ತು ಕೆಲವು ವಿಮಾನಗಳಲ್ಲಿ (Plane) ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್​ ಬೆದರಿಕೆ (Fake bomb threat) ಬಂದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಾಂಬ್​ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದಾರೆ. ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಟರ್ಮಿನಲ್​ 1ರ ಮ್ಯಾನೇಜರ್ ಗೀತಾ ರಾಣಿ ಅವರು ಮೇ 2 ರಂದು ದೂರು ದಾಖಲಿಸಿದ್ದು. ಏಪ್ರಿಲ್ 29 ರಂದು ಬೆಳಿಗ್ಗೆ ವಿಮಾನ ನಿಲ್ದಾಣದ ಮೇಲ್ ಐಡಿಗೆ, 209.85.218.54 ಐಪಿ ವಿಳಾಸದೊಂದಿಗೆ 666darktriad666@gmail.com ಇಮೇಲ್ ವಿಳಾಸದಿಂದ ‘Terrorzers111’ ಗುಂಪಿನಿಂದ ಬಾಂಬ್​ ಬೆದರಿಕೆ ಮೇಲ್​ ಬಂದಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

“ವಿಮಾನದಲ್ಲಿ ಟೈಂ ಬಾಂಬ್​ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಗುಂಪಿನಿಂದ ಟರ್ಮಿನಲ್ 1 ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ” ಅಂತ ಮೇಲ್​ ಬಂದಿದೆ ಎಂದು ವಿಮಾನ ನಿಲ್ದಾಣ ಸಿಬ್ಬಂದಿ ತಿಳಿಸಿದರು.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ವಿಮಾನ ನಿಲ್ದಾಣ ಸಿಬ್ಬಂದಿಯ ದೂರಿನ ಆಧಾರದ ಮೇಲೆ, ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ IPC ಸೆಕ್ಷನ್‌ಗಳು 501 (1) (ಬಿ), ಸೆಕ್ಷನ್ 507 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೂ ಅದೇ ದಿನ (ಏಪ್ರಿಲ್ 29) ಬಾಂಬ್​ ಬೆದರಿಕೆ ಮೇಲ್​ ಬಂದಿತ್ತು. ಅಲ್ಲದೆ ದೇಶದ ಇತರ ಕೆಲವು ಖಾಸಗಿ ವಿಮಾನ ನಿಲ್ದಾಣಗಳಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ದೆಹಲಿ ಮತ್ತು ಎನ್‌ಸಿಆರ್‌ನ ಶಾಲೆಗಳಿಗೆ ಮೇ 1 ರಂದು ಇದೇ ರೀತಿಯ ಬೆದರಿಕೆಗಳು ಬಂದಿದ್ದರೇ, ಅಹಮದಾಬಾದ್‌ನ ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಸಂದೇಶ ಬಂದಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:13 am, Wed, 8 May 24

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ