Bomb Threat: ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್​ಗಳಿಗೆ ಬಾಂಬ್​ ಬೆದರಿಕೆ

Bomb Threat to Electronic City Five star Hotels; ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ನಂತರ ಆತಂಕದಲ್ಲಿರುವ ಬೆಂಗಳೂರಿಗರಿಗೆ ಆಗಾಗ್ಗೆ ಬರುತ್ತಿರುವ ಹುಸಿ ಬಾಂಬ್ ಬೆದರಿಕೆ ಸಂದೇಶ, ಕರೆಗಳು ತಲೆನೋವು ಸೃಷ್ಟಿಸುತ್ತಿವೆ. ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಮೂರು ಫೈವ್​ ಸ್ಟಾರ್ ಹೋಟೆಲ್​ಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.

Bomb Threat: ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್​ಗಳಿಗೆ ಬಾಂಬ್​ ಬೆದರಿಕೆ
ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್​ಗಳಿಗೆ ಬಾಂಬ್​ ಬೆದರಿಕೆ
Follow us
ರಾಚಪ್ಪಾಜಿ ನಾಯ್ಕ್
| Updated By: Ganapathi Sharma

Updated on:May 23, 2024 | 11:33 AM

ಬೆಂಗಳೂರು, ಮೇ 23: ಬೆಂಗಳೂರಿನ (Bengaluru) ಮೂರು ಫೈವ್ ಸ್ಟಾರ್ ಹೋಟೆಲ್​ಗಳಿಗೆ (Five Star Hotels) ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ (Bomb Threat) ಸಂದೇಶ ಬಂದಿದೆ. ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿಯ ಸ್ಟಾರ್​ ಹೋಟೆಲ್​ಗೆ ಬೆದರಿಕೆ ಸಂದೇಶ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್​ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಹೋಟೆಲ್​ಗೆ ಪೊಲೀಸರು ಭೇಟಿ ನೀಡಿದ್ದಾರೆ. ಬಾಂಬ್ ಸ್ಕ್ವಾಡ್ ಸಹ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದೆ.

ಕೆಲವೇ ದಿನಗಳ ಹಿಂದೆ, ಅಂದರೆ ಮೇ 13ರಂದು ಅಮೃತಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಅದರ ಮರುದಿನವೇ ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಕಗ್ಗಲಿಪುರದ ಕನಕಪುರ ರಸ್ತೆ ಸೋಮನಹಳ್ಳಿ ಬಳಿಯ ಈಡಿಫೈ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಪರಿಶೀಲನೆಯ ನಂತರ ಈ ಎರಡೂ ಬೆದರಿಕೆ ಸಂದೇಶಗಳು ಹುಸಿ ಎಂಬುದು ತಿಳಿದುಬಂದಿತ್ತು.

ಕಳೆದ ತಿಂಗಳು ಜಾಲಹಳ್ಳಿ ಠಾಣೆ ವ್ಯಾಪ್ತಿಯ ಎಚ್‌ಎಂಟಿ ಮೈದಾನ ಬಳಿಯ ಕದಂಬ ಹೋಟೆಲ್ ಸುತ್ತಮುತ್ತ ಬಾಂಬ್ ಇರಿಸಲಾಗಿದೆ ಎಂದು ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದ್ದು ಆತಂಕಕ್ಕೆ ಕಾರಣವಾಗಿತ್ತು. ನಂತರ ಅದು ಹುಸಿ ಬೆದರಿಕೆ ಎಂಬುದು ತಿಳಿದುಬಂದಿತ್ತು.

ದೇಶದಲ್ಲಿ ಹೆಚ್ಚುತ್ತಿರುವ ಹುಸಿ ಬಾಂಬ್ ಬೆದರಿಕೆಗಳು

ದೇಶದಾದ್ಯಂತ ಹುಸಿ ಬಾಂಬ್ ದಾಳಿ ಬೆದರಿಕೆ ಸಂದೇಶಗಳು ಕಳೆದ ಕೆಲವು ತಿಂಗಳುಗಳಲ್ಲಿ ವಿಪರೀತ ಹೆಚ್ಚಾಗಿದೆ. ಇದು ಪೊಲೀಸರನ್ನು ಹಾಗೂ ಸಾರ್ವಜನಿಕರನ್ನು ಆತಂಕಕ್ಕೀಡುಮಾಡಿವೆ. ಮೇ 19ರಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ವ್ಯಕ್ತಿಯೊಬ್ಬರು ಕರೆ ಮಾಡಿ ದಾದರ್​ನ ಮೆಕ್​ಡೊನಾಲ್ಡ್​ಸ್ಫೋಟಿಸುವ ಕುರಿತು ಯಾರೋ ಮಾತನಾಡಿಕೊಳ್ಳುತ್ತಿದ್ದರು ಎನ್ನುವ ಮಾಹಿತಿ ನೀಡಿದ್ದು, ಆತಂಕಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಬೆಂಗಳೂರು ಆಯ್ತು ಈಗ ಕಗ್ಗಲಿಪುರ ಈಡಿಫೈ ಶಾಲೆಗೆ ಬಾಂಬ್ ಬೆದರಿಕೆ

ದೆಹಲಿಯ 4 ಆಸ್ಪತ್ರೆಗಳಿಗೆ ಮೇ 14ರಂದು ಬಾಂಬ್ ದಾಳಿ ಬೆದರಿಕೆ ಸಂದೇಶ ಬಂದಿತ್ತು. ದೀಪ್ ಚಂದ್ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್ ಆಸ್ಪತ್ರೆ, ಹೆಡ್ಗೆವಾರ್ ಆಸ್ಪತ್ರೆಗೆ ಬೆದರಿಕೆ ಸಂದೇಶ ಬಂದಿದ್ದವು. ನಂತರ ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:20 am, Thu, 23 May 24

ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ