AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಇಟಲಿ, ಜಪಾನ್ ಬಳಿಕ ನೆದರ್​​ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್​ ಬೆದರಿಕೆ ಸಂದೇಶ

ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಸಂದೇಶಗಳ ಹಾವಳಿ ಮತ್ತೆ ಮುಂದುವರಿದಿದೆ. ಜನವರಿ 29 ರಂದು ಇಟಲಿ ಮತ್ತು ಜಪಾನ್ ಕಾನ್ಸುಲೇಟ್ ಕಚೇರಿಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಅದಾದ ನಂತರ ನೆದರ್​ಲ್ಯಾಂಡ್​ ಕಾನ್ಸುಲೇಟ್ ಕಚೇರಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಈಗ ಬೆಳಕಿಗೆ ಬಂದಿದ್ದು, ದೂರು ದಾಖಲಾಗಿದೆ. ಭದ್ರತೆಯನ್ನೂ ಹೆಚ್ಚಿಸಲಾಗಿದೆ.

ಬೆಂಗಳೂರು: ಇಟಲಿ, ಜಪಾನ್ ಬಳಿಕ ನೆದರ್​​ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್​ ಬೆದರಿಕೆ ಸಂದೇಶ
ಸಾಂದರ್ಭಿಕ ಚಿತ್ರImage Credit source: TV9 Network
ರಾಚಪ್ಪಾಜಿ ನಾಯ್ಕ್
| Edited By: |

Updated on: Feb 06, 2026 | 10:03 AM

Share

ಬೆಂಗಳೂರು, ಫೆಬ್ರವರಿ 6: ಬೆಂಗಳೂರಿನಲ್ಲಿ (Bangalore) ವಿದೇಶಿ ರಾಯಭಾರಿ ಕಚೇರಿಗಳಿಗೆ ಮತ್ತೆ ಬಾಂಬ್ ಬೆದರಿಕೆ (Bomb Threat) ಸಂದೇಶಗಳು ಬರುತ್ತಿದ್ದು ಆತಂಕ ಮೂಡಿಸಿದೆ. ಇಟಲಿ ಮತ್ತು ಜಪಾನ್ ಕಾನ್ಸುಲೇಟ್ ಬಳಿಕ ಇದೀಗ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದು ಬೆಳಕಿಗೆ ಬಂದಿದೆ. ಆರ್​​ಟಿ ನಗರದ ಗಂಗಾನಗರದಲ್ಲಿರುವ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೆ ಜನವರಿ 29ರಂದು ಕಿಡಿಗೇಡಿಗಳು ಇ-ಮೇಲ್ ಕಳುಹಿಸಿ ‘‘5 RDX ಮತ್ತು ಐಇಡಿ ಬಳಸಿ ಸ್ಫೋಟ ಮಾಡುತ್ತೇವೆ’’ ಎಂದು ಬೆದರಿಕೆ ಹಾಕಿದ್ದಾರೆ. ಈ ಕುರಿತು ರಾಯಭಾರಿ ಕಚೇರಿ ಅಧಿಕಾರಿ ಭಾಸ್ಕರ್ ಸುಬ್ರಹ್ಮಣಿ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಹಿಂದೆ ಹಲಸೂರಿನಲ್ಲಿರುವ ಇಟಾಲಿಯನ್ ಕಾನ್ಸುಲೇಟ್ ಕಚೇರಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. gaina_ramesh@outlook.com ವಿಳಾಸದಿಂದ bangalore.visa@esteri.it ಗೆ ಸಂದೇಶ ಕಳುಹಿಸಿ ‘5 RDX ಬಾಂಬ್ ಸ್ಫೋಟ ಮಾಡುತ್ತೇವೆ’ ಎಂದು ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಇಟಾಲಿಯನ್ ಕಾನ್ಸುಲೇಟ್ ಭದ್ರತಾ ವ್ಯವಸ್ಥಾಪಕ ಜಿಯೋಡೊಮೆನಿಕ್ ಒ ಮಿಲಾನೋ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಇದರ ಬೆನ್ನಲ್ಲೇ ಕಬ್ಬನ್ ರಸ್ತೆಯಲ್ಲಿರುವ ಜಪಾನ್ ಕಾನ್ಸುಲೇಟ್ ಜನರಲ್ ಕಚೇರಿಗೂ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿತ್ತು. ‘Please be careful, someone will kill you’ ಎಂದು ಕರೆ ಬಂದಿದ್ದಾಗಿ ತಿಳಿದುಬಂದಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಬಾಂಬ್ ಬೆದರಿಕೆ ಹಾಕಿದ ಯುವಕನ ಬಂಧನ

ಸದ್ಯ ಇಟಲಿ, ಜಪಾನ್ ಹಾಗೂ ನೆದರ್‌ಲ್ಯಾಂಡ್ ಕಚೇರಿಗಳಿಗೆ ಬಂದಿರುವ ಬೆದರಿಕೆ ಸಂದೇಶಗಳ ಮೂಲ ಪತ್ತೆಗೆ ಪೊಲೀಸರು ಇ-ಮೇಲ್ ಐಡಿ ಹಾಗೂ ಕರೆಗಳ ಜಾಡು ಬೆನ್ನತ್ತಿದ್ದು, ರಾಯಭಾರ ಕಚೇರಿಗಳಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!