AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್​ ಬೆದರಿಕೆ: ಎಫ್​ಐಆರ್​ ದಾಖಲು

ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಇ-ಮೇಲೆ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್​ ಬೆದರಿಕೆ: ಎಫ್​ಐಆರ್​ ದಾಖಲು
ವಿಶ್ವೇಶ್ವರಯ್ಯ ಮ್ಯೂಸಿಯಂ
Jagadisha B
| Edited By: |

Updated on: Jan 06, 2024 | 8:20 AM

Share

ಬೆಂಗಳೂರು, ಜನವರಿ 06: ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ (Visvesvaraya Museum) ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ (Bomb threat) ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ (Cubbon Park Police Station) ಇ-ಮೇಲೆ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ವಿದೇಶಿ ಕೋರ್ಟ್ ಮೊರೆ ಹೋದ ನಗರ ಪೊಲೀಸರು

ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂಬುದು ಪತ್ತೆಯಾಗಿತ್ತು. ಇದೀಗ ಕಬ್ಬನ್​ ಪಾರ್ಕ್​ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆಗಳಿಗೆ ಬಾಂಬ್​ ಬೆದರಿಕೆ

ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಬಂದಿತ್ತು. ಈ ಪ್ರಕರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿತ್ತು. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು