Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಯಾವೆಲ್ಲಾ ಸ್ಕೂಲ್? ಇಲ್ಲಿದೆ ಪಟ್ಟಿ

Bomb Threat To Bengaluru Schools: ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಇಮೇಲ್ ಬೆದರಿಕೆ ಬಂದಿದ್ದು, ಇಡೀ ಸಿಲಿಕಾನ್ ಸಿಟಿ ಬೆಚ್ಚಿಬೀಳಿಸುವಂತೆ ಮಾಡಿದೆ, ಯಾಕಂದ್ರೆ ಈ ಹಿಂದೆ ಬಂದ ಬೆದರಿಕೆಗಳು ಬೇರೆ. ಈಗ ಬಂದ ಬೆದರಿಕೆ ಇಮೇಲ್​ನಲ್ಲಿ ಉಗ್ರವಾದ ಪದ ಬಳಿಕೆ ಮಾಡಲಾಗಿದೆ. ಹೀಗಾಗಿ ಇದು ಆತಂಕಕ್ಕೆ ಕಾರಣವಾಗಿದೆ. ಹಾಗಾದ್ರೆ, ಯಾವೆಲ್ಲಾ ಶಾಲೆಗಳಿಗೆ ಬೆದರಿಕೆ ಇಮೇಲ್ ಬಂದಿದೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ.

ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಯಾವೆಲ್ಲಾ ಸ್ಕೂಲ್? ಇಲ್ಲಿದೆ ಪಟ್ಟಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 01, 2023 | 1:17 PM

ಬೆಂಗಳೂರು, (ಡಿಸೆಂಬರ್ 01): ಬೆಂಗಳೂರಿನಲ್ಲಿ  ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್(Bomb Threat To Bengaluru Schools) ಬಂದಿರುವುದು ಪೋಷಕರಿಗೆ ಆತಂಕ ಹೆಚ್ಚಿಸಿದೆ. ಈ ರೀತಿ ಆಗಾಗಿ ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದ ಉದಾಹರಣಗಳು ಇವೆ. ಆದ್ರೆ, ಈ ಬಾರಿ ಬರೋಬ್ಬರಿ 44 ಶಾಲೆಗಳಿಗೆ ಬಂದಿದೆ. ಮುಖ್ಯವಾಗಿ ಬೆದರಿಕೆ ಇಮೇಲ್​ನಲ್ಲಿ ಉಗ್ರವಾದ ಪದಗಳ ಉಲ್ಲೇಖವಾಗಿದ್ದರಿಂದ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇನ್ನು ಸುರಕ್ಷತಾ ದೃಷ್ಟಿಯಿಂದ ಶಾಲಾ ಆಡಳಿತ ಮಂಡಳಿ ಮಕ್ಕಳನ್ನು ಮನೆಗೆ ಕಳುಹಿಸುತ್ತಿದೆ. ಕೆಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ, ಯಾವೆಲ್ಲಾ ಶಾಲೆಗಳಿಗೆ ಬಾಂಬ್​ ಬೆದರಿಕೆ ಹಾಕಲಾಗಿದೆ ಎನ್ನುವ ಪಟ್ಟಿ ಇಲ್ಲಿದೆ.

ಮೊದಲು 15 ಶಾಲೆಗಳಿಗೆ ಬೆದರಿಕೆ ಇಮೇಲ್​ ಬಂದಿದೆ. ಬಳಿಕ ಇನ್ನುಳಿದ ಆಡಳಿತ ಮಂಡಳಿಗಳು ತಮ್ಮ ತಮ್ಮ ಶಾಲೆಯ ಇಮೇಲ್ ಪರಿಶೀಲನೆ ಮಾಡಿದ ಬಳಿಕ 44 ಶಾಲೆಗಳಿಗೆ ಇಮೇಲ್ ಬೆದರಿಕೆ ಬಂದಿತ್ತಿ. ಇದೀಗ ಸಾಕಷ್ಟು ಶಾಲೆಗಳ ಆಡಳಿತ ಮಂಡಳಿ ಮೇಲ್ ಚೆಕ್ ಬಳಿಕ ಬಯಲಾಗುತ್ತಿದ್ದು, ಸಮಯ ಕಳೆದಂತೆ ಬೆದರಿಕೆ ಹಾಕಿದ ಶಾಲೆಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

ಇದನ್ನೂ ಓದಿ: ಎಲ್ಲರೂ ಇಸ್ಲಾಂಗೆ ಮತಾಂತರವಾಗಿ, ಇಲ್ಲ ಎಲ್ಲರೂ ಸಾಯಲು ಸಿದ್ಧರಾಗಿ: ಇದು ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆ

ಯಾವ ವಯಲದಲ್ಲಿ ಎಷ್ಟು ಶಾಲೆಗಳಿಗೆ ಬೆದರಿಕೆ?

  • ಬೆಂಗಳೂರಿನ ಉತ್ತರ ವಲಯ -1ರಲ್ಲಿ 4 ಶಾಲೆಗಳಿಗೆ ಬೆದರಿಕೆ ಇಮೇಲ್ ಬಂದಿದೆ.
  • ಬೆಂಗಳೂರಿನ ಉತ್ತರ ವಲಯ – 2ರಲ್ಲಿ 2 ಶಾಲೆಗಳಿಗೆ
  • ಬೆಂಗಳೂರಿನ ಉತ್ತರ ವಲಯ -4: 01 ಶಾಲೆ.

ಬೆಂಗಳೂರಿನ ದಕ್ಷಿಣ ವಲಯ – 1: 15 ಶಾಲೆಗಳಿಗೆ ಬೆದರಿಕೆ ಇಮೇಲ್​ ಬೆಂಗಳೂರಿನ ದಕ್ಷಿಣ ವಲಯ – 2: 03 ಶಾಲೆಗಳು. ಬೆಂಗಳೂರಿನ ದಕ್ಷಿಣ ವಲಯ – 3: 10 ಶಾಲೆಗಳು ಬೆಂಗಳೂರಿನ ದಕ್ಷಿಣ ವಲಯ 4: 04 ಶಾಲೆಗಳು

ಬನ್ನೇರುಘಟ್ಟದ 7 ಶಾಲೆಗಳಿಗೆ ಬಾಂಬ್ ಬೆದರಿಕೆ

  •  ಗ್ರೀನ್ ಹುಡ್ ಹೈಸ್ಕೂಲ್, ದಿನ್ನೇಪಾಳ್ಯ
  • ಗ್ಲೋಬಲ್ ಇಂಟರ್ನ್ಯಾಷನಲ್ ಶಾಲೆ
  • ರಾಯನ್ ಇಂಟರ್ನ್ಯಾಷನಲ್ ಶಾಲೆ
  • ಆಲ್ ಬಷೀರ್ ಶಾಲೆ
  • ದೀಕ್ಷಾ ಹೈಟ್‌ ಶಾಲೆ
  • ಕಾಂಡರ್ ಇಂಟರ್ನ್ಯಾಷನಲ್ ಶಾಲೆ
  • ಬಿವಿಎಂ ಗ್ಲೋಬಲ್ ಶಾಲೆ

ಹೆಬ್ಬಗೋಡಿಯ ನಾಲ್ಕು ಶಾಲೆಗಳಿಗೆ ಹುಸಿಬಾಂಬ್

  • ಡಿವೈನ್ ಇಂಟರ್ನ್ಯಾಷನಲ್ ಶಾಲೆ
  • ಟ್ರೀಮೈಸ್‌ ಇಂಟರ್ನ್ಯಾಷನಲ್ ಶಾಲೆ
  • ಫ್ಲಾರೆನ್ಸ್ ಇಂಟರ್ನ್ಯಾಷನಲ್ ಶಾಲೆ
  • ಎಬೆನ್ಸರ್ ಇಂಟರ್ನ್ಯಾಷನಲ್ ಶಾಲೆ

ಸರ್ಜಾಪುರದ ಐದು ಶಾಲೆಗಳಿಗೆ ಬಾಂಬ್ ಬೆದರಿಕೆ

  • ಗ್ರೀನ್ ಹುಡ್ ಇಂಟರ್ನ್ಯಾಷನಲ್ ಹೈಸ್ಕೂಲ್
  • ಗ್ಲೋಬಲ್ ಇಂಡಿಯನ್ ಇಂಟರ್ನ್ಯಾಷನಲ್ ಶಾಲೆ
  • ಓಕರಿಡ್ಜ್ ಶಾಲೆ
  • ಟಿ ಐ ಎಸ್ ಬಿ ಶಾಲೆ
  • ಇನ್ವೆಂಚರ್ ಅಕಾಡೆಮಿ

ಜಿಗಣಿಯ ಎರಡು ಶಾಲೆಗಳಿಗೆ ಹುಸಿ ಬಾಂಬ್

  • ಅಚೀವರ್ಸ್ ಅಕಾಡೆಮಿ
  • ಎನ್ಡೆವರ್ಸ್ ಅಕಾಡೆಮಿ

ಅನೇಕಲ್​ನ 05 ಶಾಲೆಗಳಿಗೆ ಸೇರಿದಂತೆ ಒಟ್ಟು 44 ಖಾಸಗಿ ಶಾಲೆಗಳ ಇಮೇಲ್​ಗೆ ಬಾಂಬ್​ ಬೆದರಿಕೆ ಬಂದಿದೆ.