ಪೊಲೀಸರಿಂದ ತಪ್ಪಿಸಿಕೊಳ್ಳಲು ನಗ್ನನಾಗಿಯೇ 4ನೇ ಮಹಡಿಯಿಂದ ಜಿಗಿದು ಆರೋಪಿ ಸಾವು: ಪ್ರಕರಣ ಸಿಐಡಿಗೆ ವರ್ಗಾವಣೆ

ಪೊಲೀಸರಿಂದ ತಪ್ಪಿಕೊಳ್ಳಲು ಹೋಗಿ ನಾಲ್ಕನೇ ಮಹಡಿಯಿಂದ ಜಿಗಿದು ಆರೋಪಿ ಮೃತಪಟ್ಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ತನಿಖೆಗೆ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಪೊಲೀಸರಿಂದ ತಪ್ಪಿಸಿಕೊಳ್ಳಲು ನಗ್ನನಾಗಿಯೇ 4ನೇ ಮಹಡಿಯಿಂದ ಜಿಗಿದು ಆರೋಪಿ ಸಾವು: ಪ್ರಕರಣ ಸಿಐಡಿಗೆ ವರ್ಗಾವಣೆ
(ಸಾಂದರ್ಭಿಕ ಚಿತ್ರ
Follow us
|

Updated on: May 25, 2023 | 11:37 AM

ಬೆಂಗಳೂರು: ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಆರೋಪ ಬೆತ್ತಲೆಯಲ್ಲೇ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿ ಮೃತಪಟ್ಟಿರುವ ಪ್ರಕರಣದ ತನಿಖೆ ಮಾಡಲು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಅಪರಾಧ ಪ್ರಕರಣದ ವಿಚಾರಣೆ ಸಲುವಾಗಿ ನಿನ್ನೆ (ಮೇ 24) ವಶಕ್ಕೆ ಪಡೆಯಲು ಪೊಲೀಸರು ತೆರಳಿದಾಗ ಆರೋಪಿ ಮೊಹಮ್ಮದ್ ಹುಸೇನ್ (31) ಬೆಂಗಳೂರಿನ ಬೇಗೂರು ರಸ್ತೆಯ ಮನೆಯೊಂದರ 3ನೇ ಮಹಡಿಯಿಂದ ಕೆಳಗೆ ಜಿಗಿದು ಮೃತಪಟ್ಟಿದ್ದ. ಇದೀಗ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಪೊಲೀಸರೇ ತಳ್ಳಿ ಕೊಂದಿದ್ದಾರೆಂದು ಮೃತ ವ್ಯಕ್ತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಹಿನ್ನಲೆ ಸಂಕ್ಷಿಪ್ತವಾದ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: Bangalore News: ಬೊಮ್ಮನಹಳ್ಳಿ; ಪೊಲೀಸರು ವಶಕ್ಕೆ ಪಡೆಯಲು ತೆರಳಿದಾಗ ನಾಲ್ಕನೇ ಮಹಡಿಯಿಂದ ನಗ್ನನಾಗಿ ಬಿದ್ದು ಆರೋಪಿ ಸಾವು

ಘಟನೆ ಹಿನ್ನೆಲೆ

ಲಾಂಗ್‌ ತೋರಿಸಿ ಜೀವ ಬೆದರಿಕೆ: ತನ್ನ ಕುಟುಂಬದ ಜತೆ ನೆಲೆಸಿದ್ದ ಹುಸೇನ್‌, ಸ್ಥಳೀಯವಾಗಿ ಕಾನೂನುಬಾಹಿರ ಚಟುವಟಿಕೆಯಲ್ಲಿ ಸಹ ಪಾತ್ರವಹಿಸುತ್ತಿದ್ದ ಎಂಬ ಆರೋಪ ಬಂದಿದೆ. ಈ ಹಿಂದೆ ಆತನ ಮೇಲೆ ಬೊಮ್ಮನಹಳ್ಳಿ ಠಾಣೆಯಲ್ಲಿ ಸುಲಿಗೆ (ಐಪಿಸಿ 384) ಪ್ರಕರಣ ಕೂಡಾ ದಾಖಲಾಗಿತ್ತು. ಎರಡು ದಿನಗಳಿಂದ ಯುವತಿಯೊಬ್ಬಳಿಗೆ ರಸ್ತೆಯಲ್ಲಿ ಅಡ್ಡಗಟ್ಟಿಹುಸೇನ್‌ ಕಿರುಕುಳ ಕೊಡುತ್ತಿದ್ದ. ಮಂಗಳವಾರ ಕೂಡಾ ಆಕೆಗೆ ಲಾಂಗ್‌ ತೋರಿಸಿ ಹುಸೇನ್‌ ಜೀವ ಬೆದರಿಕೆ ಹಾಕಿದ್ದ. ಈ ಬಗ್ಗೆ ತನ್ನ ತಂದೆ ಬಳಿ ಸಂತ್ರಸ್ತೆ ಹೇಳಿಕೊಂಡು ಕಣ್ಣೀರಿಟ್ಟಿದ್ದಳು. ಕೊನೆಗೆ ಸಂತ್ರಸ್ತೆ ತಂದೆ ನೀಡಿದ ದೂರಿನ ಮೇರೆಗೆ ಹುಸೇನ್‌ ವಿರುದ್ಧ ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಬುಧವಾರ ಸಂಜೆ ಹುಸೇನ್‌ನನ್ನು ವಶಕ್ಕೆ ಪಡೆಯಲು ಆತನ ಮನೆಗೆ ತೆರಳಿದ್ದರು. ನಾಲ್ಕು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ ಹುಸೇನ್‌ ಕುಟುಂಬ ನೆಲೆಸಿದೆ. ಮನೆಗೆ ಪೊಲೀಸರನ್ನು ಬಂದಿದ್ದನ್ನು ಕಂಡು ತಪ್ಪಿಸಿಕೊಳ್ಳುವ ಭರದಲ್ಲಿ ಮಹಡಿಯಿಂದ ಆತ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದರು.

ಆದ್ರೆ, ಪೊಲೀಸರ ಹೇಳಿಕೆಯನ್ನು ಅಲ್ಲಗೆಳೆದಿದ್ದು, ಪೊಲೀಸರೇ ಹುಸೇನ್‌ನನ್ನು ದೂಡಿ ಸಾಯಿಸಿದ್ದಾರೆ ಎಂದು ಮೃತನ ಕುಟುಂಬ ಸದಸ್ಯರು ಗಂಭೀರ ಆರೋಪ ಮಾಡಿದ್ದಾರೆ. ಅಪರಾಧ ಪ್ರಕರಣದಲ್ಲಿ ಹುಸೇನ್‌ನನ್ನು ವಶಕ್ಕೆ ಪಡೆಯಲು ಮನೆಗೆ ಬಂದ ಪೊಲೀಸರು, ಬಳಿಕ ಆತನನ್ನು ಅರೆಬೆತ್ತಲೆಗೊಳಿಸಿ ಮನೋಸೋಇಚ್ಛೆ ಹೊಡೆದು ಕ್ರೌರ್ಯ ಮೆರೆದಿದ್ದಾರೆ. ಈ ದೌರ್ಜನ್ಯ ಎಸಗಿದ ಬಳಿಕ ಹುಸೇನ್‌ನನ್ನು ಹಿಡಿದು ಮೂರನೇ ಮಹಡಿಯಿಂದ ಕೆಳಗೆ ದೂಡಿದ್ದಾರೆ ಎಂದು ಕುಟುಂಬ ಸದಸ್ಯರು ಆಪಾದನೆಯಾಗಿದೆ.

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’