ಬೆಂಗಳೂರು: ಫ್ರಿಡ್ಜ್, ಟಿವಿ ಇರುವ ಬಡವರಿಗೆ ಸರ್ಕಾರದಿಂದ ಬಿಗ್ ಶಾಕ್ ಸಿಕ್ಕಿದೆ. ಫ್ರಿಡ್ಜ್, ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ರದ್ದು ಗೊಳಿಸಲಾಗಿದೆ. 3 ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯ ₹1.28 ಲಕ್ಷವಿದ್ದರೆ BPL ಕಾರ್ಡ್ ರದ್ದು ಮಾಡಲಾಗುತ್ತಿತ್ತು. ಆದ್ರೀಗ ಬೈಕ್, ಫ್ರಿಡ್ಜ್, ಟಿವಿ ಇದ್ದರೂ BPL ಕಾರ್ಡ್ ರದ್ದು ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ನಡೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಬಡತನ ರೇಖೆಗಿಂತ ಕೆಳಗಿರುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್ ವಿತರಣೆ ಮಾಡುತ್ತೆ. ಬಿಪಿಎಲ್ ಪಡಿತರು ಮೂರು ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯವು 1.28 ಲಕ್ಷ ರೂ. ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿತ್ತು. ಆದ್ರೆ ಈಗ ಫ್ರಿಡ್ಜ್, ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ರದ್ದು ಗೊಳಿಸಲಾಗಿದೆ. ಅಲ್ಲದೆ ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದಲೂ ಕಾರ್ಡ್ ರದ್ದುಗೊಳಿಸಲಾಗುತ್ತಿದೆ.
ಈ ಹಿಂದೆ ಬೆಳಗಾವಿಯಲ್ಲಿ ಉಮೇಶ್ ಕತ್ತಿ, ಐದು ಎಕರೆಗಿಂತ ಹೆಚ್ಚಿನ ಜಮೀನು, ಮನೆಯಲ್ಲಿ ಟಿವಿ, ಬೈಕು, ಫ್ರಿಡ್ಜ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುತ್ತದೆ. ಇಂಥವರು ತಮ್ಮ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಮಾರ್ಚ್ ಅಂತ್ಯದ ವರೆಗೆ ಸಮಯ ಇದೆ ಎಂದು ಘೋಷಿಸಿದ್ದರು. ಸದ್ಯ ಈಗ ಕೆಲವರು ಕಾರ್ಡ್ ರದ್ದುಗೊಳಿಸುತ್ತಿದ್ದು ಜನ ಸಾಮಾನ್ಯರು ಚಿಂತೆ ಮಾಡುವಂತಾಗಿದೆ.
Published On - 8:09 am, Fri, 3 September 21