AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಪಿಎಲ್ ಬಳಕೆದಾರರಿಗೆ ಹೊಸ ಸಂಕಷ್ಟ; ನಿಮ್ಮ ಕಾರ್ಡ್​ನ ಮುಖ್ಯಸ್ಥರು ಪುರುಷರಾಗಿದ್ದರೆ ನಿಮಗೆ ಸಿಗಲ್ಲ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಲಾಭ

ಬಿಪಿಎಲ್ ಕಾರ್ಡ್​ಗಳ ಹೆಡ್ ಆಫ್ ದಿ ಪ್ಯಾಮಿಲಿ ಪುರುಷರೇ ಆಗಿದ್ದರೇ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಸ್ಕೀಮ್ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ. ಸಧ್ಯ ಕಾರ್ಡ್ ನಲ್ಲಿ 18 ವರ್ಷದ ಒಳಗಿದ್ದ ಬಾಲಕಿಯರು ಇದ್ರೆ ತೊಂದರೆ ಇಲ್ಲ. ಆದರೆ  ವಯಸ್ಕ ಮಹಿಳೆ ಇದ್ದೂ ಕಾರ್ಡ್ ಮುಖ್ಯಸ್ಥ ಗಂಡಸರಾಗಿದ್ದರೆ ಅನ್ನಭಾಗ್ಯ ಸ್ಕೀಂ ಸಿಗುವುದಿಲ್ವಂತೆ. ಗೃಹಲಕ್ಷ್ಮಿ ಅರ್ಜಿ ಸಲ್ಲಿಸಲು ಬಿಪಿಎಲ್, ಎಪಿಎಲ್ ಕಾರ್ಡ್ ಮನೆಯೊಡತಿಯೇ ಇರಬೇಕು.

ಬಿಪಿಎಲ್ ಬಳಕೆದಾರರಿಗೆ ಹೊಸ ಸಂಕಷ್ಟ; ನಿಮ್ಮ ಕಾರ್ಡ್​ನ ಮುಖ್ಯಸ್ಥರು ಪುರುಷರಾಗಿದ್ದರೆ ನಿಮಗೆ ಸಿಗಲ್ಲ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಲಾಭ
ಸಾಂದರ್ಭಿಕ ಚಿತ್ರ
Poornima Agali Nagaraj
| Updated By: ಆಯೇಷಾ ಬಾನು|

Updated on: Sep 02, 2023 | 7:03 AM

Share

ಬೆಂಗಳೂರು, ಸೆ.02: ಕಾಂಗ್ರೆಸ್ ಸರ್ಕಾರದ(Congress Government) ಮಹತ್ವದ ಯೋಜನೆಗಳಲ್ಲಿ ನಾಲ್ಕು ಯೋಜನೆಗಳು ಜಾರಿಯಾಗಿದ್ದು, ಫಲಾನುಭವಿಗಳು ಕೂಡ ಅದರ ಉಪಯೋಗವನ್ನ ಪಡೆದುಕೊಳ್ಳುತ್ತಿದ್ದಾರೆ. ಆದರೆ ಈ ಮಧ್ಯೆ ಬಿಪಿಎಲ್ ಫಲಾನುಭವಿಗಳಿಗೆ ಹೊಸ ಸಮಸ್ಯೆ ಎದುರಾಗಿದೆ. ಬಿಪಿಎಲ್​ ಕಾರ್ಡ್​ನಲ್ಲಿ(BPL Card) ಮುಖ್ಯಸ್ಥರು ಪುರುಷರಾಗಿದ್ದರೆ ಅನ್ನಭಾಗ್ಯ(Anna Bhagya), ಗೃಹಲಕ್ಷ್ಮಿ ಸ್ಕೀಂ(Gruha Lakshmi Scheme) ಲಾಭಪಡೆಯಲಾಗಲ್ಲ. ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಸ್ಕೀಮ್​ಗಳ ಪೈಕಿ ಈಗಾಗಲೇ ನಾಲ್ಕು ಸ್ಕೀಮ್​ಗಳಿಗೆ ಚಾಲನೆ ಸಿಕ್ಕಿದೆ. ಜನರು ಕೂಡ ಅವುಗಳ ಲಾಭ ಪಡೆಯುತ್ತಿದ್ದಾರೆ. ಆದರೆ ಮೊನ್ನೆಯಷ್ಟೇ ಜಾರಿಯಾದ ಗೃಹಲಕ್ಷ್ಮಿ ಯೋಜನೆಗೆ ಇದೀಗಾ ಹೊಸ ಸಂಕಷ್ಟ ಎದುರಾಗಿದೆ. ಹೌದು, ಬಿಪಿಎಲ್ ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಿದ್ದವರಿಗೆ ಗೃಹ ಲಕ್ಷ್ಮಿ ಸ್ಕೀಮ್ ಹಾಗೂ ಅನ್ನಭಾಗ್ಯ ಯೋಜನೆಯ ಲಾಭ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ.

ಹೌದು, ಬಿಪಿಎಲ್ ಕಾರ್ಡ್​ಗಳ ಹೆಡ್ ಆಫ್ ದಿ ಪ್ಯಾಮಿಲಿ ಪುರುಷರೇ ಆಗಿದ್ದರೇ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಸ್ಕೀಮ್ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ. ಸಧ್ಯ ಕಾರ್ಡ್ ನಲ್ಲಿ 18 ವರ್ಷದ ಒಳಗಿದ್ದ ಬಾಲಕಿಯರು ಇದ್ರೆ ತೊಂದರೆ ಇಲ್ಲ. ಆದರೆ  ವಯಸ್ಕ ಮಹಿಳೆ ಇದ್ದೂ ಕಾರ್ಡ್ ಮುಖ್ಯಸ್ಥ ಗಂಡಸರಾಗಿದ್ದರೆ ಅನ್ನಭಾಗ್ಯ ಸ್ಕೀಂ ಸಿಗುವುದಿಲ್ವಂತೆ. ಗೃಹಲಕ್ಷ್ಮಿ ಅರ್ಜಿ ಸಲ್ಲಿಸಲು ಬಿಪಿಎಲ್, ಎಪಿಎಲ್ ಕಾರ್ಡ್ ಮನೆಯೊಡತಿಯೇ ಇರಬೇಕು. ಇಲ್ಲದಿದ್ದರೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಎರಡೂ ಸ್ಕೀಂಗೂ ಅನರ್ಹರಾಗಿರುತ್ತಾರಂತೆ. ಯಾಕಂದ್ತೆ ಈ ಎರಡು ಯೋಜನೆಗಳು ಮಹಿಳೆಯರಿಗೆ ಹೆಚ್ಚು ಪ್ರಧಾನ್ಯತೆಯನ್ನ ನೀಡುತ್ತಿರುವುದುರಿಂದ ಜೊತೆಗೆ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮಾಹಿತಿಯನ್ನ ಆಧಾರಿಸಿ ಈ ನಿಯಮವನ್ನ ಕಡ್ಡಾಯ ಮಾಡಲಾಗಿದೆ. ಸಧ್ಯ ಆಹಾರ ಇಲಾಖೆಯ ಪ್ರಕಾರ ಈಗಿರುವ ಬಿಸಿಎಲ್ ಕಾರ್ಡ್ ದಾರರ ಪೈಕಿ ಆರು ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇರುವುದು ಕಂಡುಬಂದಿದೆ.

ಬಿಪಿಎಲ್​ ಕಾರ್ಡ್​ನಲ್ಲಿ ಮನೆಯೊಡತಿ ಹೆಸರು ಬದಲಾಯಿಸಲು 10 ದಿನ ಅವಕಾಶ

ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ವಯಸ್ಕ ಮಹಿಳೆ ಇದ್ದೂ ಪುರುಷ ಮುಖ್ಯಸ್ಥ ಇರೋ ಕಾರ್ಡ್ ನಿಂದ ಅರ್ಜಿ ಸಲ್ಲಿಸಿದ್ರೆ ಅರ್ಜಿ ಸ್ವೀಕಾರವಾಗುತ್ತಿಲ್ಲ. ಜೊತೆಗೆ ಆಂತಹ ಬಿಪಿಎಲ್ ಕಾರ್ಡ್ ದಾರರಿಗೆ ಗೃಹಲಕ್ಷ್ಮಿಯ ಎರಡು ಸಾವಿರ ದುಡ್ಡು ಕೂಡ ಸಿಗೋದಿಲ್ಲ. ಹೀಗಾಗಿ ಈ ಸಮಸ್ಯೆಗೆ ಪರಿಹಾರ ನೀಡಲು ಆಹಾರ ಇಲಾಖೆ ಸಮಯ ನಿಗದಿ ಮಾಡಿದೆ. ಮನೆಯೊಡತಿ ಹೆಸರು ಬದಲಾವಣೆಗೆ ಸೆ. 1ರಿಂದ 10ರವರೆಗೆ ಅವಕಾಶ ನೀಡಿದ್ದು, ಈ ಹತ್ತು ದಿನದಲ್ಲಿ ಹೆಸರು ಬದಲಾವಣೆ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ವಾಟ್ಸ್​​ಆ್ಯಪ್ ಚಾಟ್​ಬಾಟ್; ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ

ಇನ್ನು, ಆಹಾರ ಇಲಾಖೆಯ ಪ್ರಕಾರ 94 % ರಷ್ಟು ಮಹಿಳೆಯರು ಬಿಪಿಎಲ್ ಕಾರ್ಡ್ ಗಳ ಮುಖ್ಯಸ್ಥರಾಗಿದ್ದಾರೆ. ಇನ್ನು 5 % ರಷ್ಟು ಕಾರ್ಡ್ ಗಳಲ್ಲಿ ಪುರುಷರು ಮುಖ್ಯಸ್ಥರಾಗಿದ್ದಾರೆ. ಹೀಗಾಗಿ ಈಗಾಗಲೆ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಕೆ ಮಾಡಿದ 1.28 ಕೋಟಿ ಫಲಾನುಭವಿಗಳ ಪೈಕಿ ಸಧ್ಯ 1.11 ಕೋಟಿಯಷ್ಟು ಅರ್ಜಿಸಲ್ಲಿಕೆಯಾಗಿದ್ದು, ಇನ್ನು 18 ಲಕ್ಷದಷ್ಟು ಮಹಿಳೆಯರು ಅರ್ಜಿ ಸಲ್ಲಿಸುವುದು ಬಾಕಿ ಇದೆ.‌ ಇದರಲ್ಲಿ ಆರು ಲಕ್ಷದಷ್ಟು ಕಾರ್ಡ್ ಗಳು ಬಿಪಿಎಲ್ ಕಾರ್ಡ್ ಗಳಲ್ಲಿ ಮುಖ್ಯಸ್ಥೆಯರು ಅಲ್ಲದೇ ಇರುವುದು ಕಂಡುಬಂದಿರುವುದೇ ಅರ್ಜಿ ಸಲ್ಲಿಕೆಗೆ ಸಮಸ್ಯೆಯಾಗುತ್ತಿದೆ ಎನ್ನಲಾಗುತ್ತಿದೆ. ಆದಷ್ಟು ಬೇಗ ಮಹಿಳೆಯರು ಬೆಂಗಳೂರು ಒನ್ ಕೇಂದ್ರಗಳಲ್ಲಿ, ಗ್ರಾಮ ಒನ್ ಸೆಂಟರ್, ಕರ್ನಾಟಕ ಒನ್ ಸೆಂಟರ್ ಗಳಲ್ಲಿ ತಮ್ಮ ಹೆಸರುಗಳನ್ನ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

ಒಟ್ನಲ್ಲಿ ಮಹಿಳೆಯರು ಆರ್ಥಿಕವಾಗಿ ಸದೃಡತೆಯನ್ನಾಗಿ ಮಾಡುವ ಸಲುವಾಗಿ ಈ ಯೋಜನೆಗಳು ಜಾರಿಯಾಗಿವೆ. ಆದರೆ ಅರ್ಜಿಗಳ ಈ ನಿಯಮಗಳಿಂದಾಗಿ ಜನರು ಸೈಬರ್ ಸೆಂಟರ್ ಗಳನ್ನ ಸುತ್ತಿ ಸುಸ್ತಾಗುತ್ತಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ