AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆದುಳಿನ ಆರೋಗ್ಯ ಇಡೀ ದೇಹದ ಒಟ್ಟು ಆರೋಗ್ಯ ಕಾಪಾಡಲು ಅಗತ್ಯವಾಗಿದೆ: ಸಚಿವ ಕೆ ಸುಧಾಕರ್

ರಾಜ್ಯದಲ್ಲಿ ಸುಮಾರು 2 ಲಕ್ಷ ಮಂದಿ ವೈದ್ಯ ಶಿಕ್ಷಣ ಪಡೆಯುತ್ತಿದ್ದಾರೆ. ಇವರನ್ನು ಬಳಸಿಕೊಂಡು ಮಾನಸಿಕ ಅನಾರೋಗ್ಯಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಈ ಪ್ರಾಯೋಗಿಕ ಕಾರ್ಯಕ್ರಮವನ್ನು ಉತ್ತಮವಾಗಿ ಜಾರಿ ಮಾಡಿ ಸರ್ಕಾರಕ್ಕೆ ವರದಿ ನೀಡಬೇಕು. ನಂತರ ಮುಂದಿನ ಬಜೆಟ್​ನಲ್ಲಿ ಈ ಕಾರ್ಯಕ್ರಮಕ್ಕಾಗಿ ಹೆಚ್ಚು ಅನುದಾನ ಮೀಸಲಿಡಬಹುದು ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಮೆದುಳಿನ ಆರೋಗ್ಯ ಇಡೀ ದೇಹದ ಒಟ್ಟು ಆರೋಗ್ಯ ಕಾಪಾಡಲು ಅಗತ್ಯವಾಗಿದೆ: ಸಚಿವ ಕೆ ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ
TV9 Web
| Edited By: |

Updated on:Jan 25, 2022 | 6:56 PM

Share

ಬೆಂಗಳೂರು: ದೇಶದಲ್ಲೇ‌ ಮೊದಲ ಬಾರಿಗೆ ನಿಮ್ಹಾನ್ಸ್(NIMHANS) ಸಂಸ್ಥೆಯು ನೀತಿ ಆಯೋಗ ಹಾಗೂ ಆರೋಗ್ಯ ಇಲಾಖೆಯ ನೆರವಿನಲ್ಲಿ ಕರ್ನಾಟಕ ಮೆದುಳು(Brain) ಆರೋಗ್ಯ ಕಾರ್ಯಕ್ರಮ (Karnataka Brain Health Initiative) ಜಾರಿ ಮಾಡಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕಾರ್ಯಕ್ರಮಕ್ಕೆ ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಮ್ಹಾನ್ಸ್​ನಿಂದ ಈ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಜಾರಿ ಮಾಡಿದ್ದು, ಮಾನಸಿಕ ರೋಗಗಳ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುವ ಕುರಿತು ವೈದ್ಯರಿಗೆ ತರಬೇತಿ ನೀಡಲಾಗುತ್ತದೆ. ಜೊತೆಗೆ ರೋಗಿಗಳನ್ನು ಪತ್ತೆ ಮಾಡಿ ಚಿಕಿತ್ಸೆ ನೀಡಲಾಗುತ್ತದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೊವಿಡ್ ಸಂದರ್ಭದಲ್ಲಿ ನಿಮ್ಹಾನ್ಸ್ ನೇತೃತ್ವದಲ್ಲಿ, ಅನೇಕ ಕೊರೊನಾ ರೋಗಿ ಹಾಗೂ ಕುಟುಂಬದವರ ಮಾನಸಿಕ ಆರೋಗ್ಯ ನಿರ್ವಹಣೆಗೆ ಒತ್ತು ನೀಡಲಾಯಿತು. ಕೆಲ ಪ್ರಕರಣಗಳಲ್ಲಿ ಆತ್ಮಹತ್ಯೆಯ ಘಟನೆಯೂ ನಡೆಯಿತು. ಆ ವೇಳೆ ಅನೇಕರಿಗೆ ಮಾನಸಿಕ ಆರೋಗ್ಯ ಆಪ್ತ ಸಮಾಲೋಚನೆ ಸೇವೆ ನೀಡಲಾಯಿತು. ಇದನ್ನು ಇನ್ನಷ್ಟು ಮುಂದುವರಿಸಲಾಗುತ್ತಿದೆ. ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶ. ಮೆದುಳಿನ ಆರೋಗ್ಯ ಇಡೀ ದೇಹದ ಒಟ್ಟು ಆರೋಗ್ಯ ಕಾಪಾಡಲು ಅಗತ್ಯವಾಗಿದೆ. ನಿಮ್ಹಾನ್ಸ್ ಜನರ ಬಳಿಯೇ ಹೋಗಿ ಆರೋಗ್ಯ ಸೇವೆ ನೀಡುವಂತಹ ಪ್ರತಿಷ್ಠಿತ ಸಂಸ್ಥೆಯಾಗಿದೆ. ಸಾಮಾನ್ಯ ಫಿಸಿಶೀಯನ್ ಕೂಡ ಮಾನಸಿಕ ಆರೋಗ್ಯ ಸೇವೆ ನೀಡುವಂತೆ ನಿಮ್ಹಾನ್ಸ್ ತರಬೇತಿ ನೀಡಲಿದೆ ಎಂದು ತಿಳಿಸಿದ್ದಾರೆ.

ನವಜಾತ ಶಿಶುವಿಗೂ ಮಾನಸಿಕ ಆರೋಗ್ಯದ ತಪಾಸಣೆ ಮಾಡಿ ರೋಗ ಪತ್ತೆ ಮಾಡುವ ಅಗತ್ಯವಿದೆ. ಸಾಮಾಜಿಕ ಪರಿಸ್ಥಿತಿ, ಕೌಟುಂಬಿಕ ಸ್ಥಿತಿ ಮೊದಲಾದ ಕಾರಣಗಳಿಂದ ಅನೇಕರು ಮಾನಸಿಕ ಒತ್ತಡದಿಂದ ಬಳಲುತ್ತಾರೆ. ಇದು ಪ್ರತಿ ದಿನದ ಚಟುವಟಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಹೆಚ್ಚು ಮಾನಸಿಕ ಆರೋಗ್ಯ ತಜ್ಞರು ರಾಜ್ಯಕ್ಕೆ ಬೇಕಾಗಿದೆ. ರಾಜ್ಯದಲ್ಲಿ ಸುಮಾರು 2 ಲಕ್ಷ ಮಂದಿ ವೈದ್ಯ ಶಿಕ್ಷಣ ಪಡೆಯುತ್ತಿದ್ದಾರೆ. ಇವರನ್ನು ಬಳಸಿಕೊಂಡು ಮಾನಸಿಕ ಅನಾರೋಗ್ಯಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಈ ಪ್ರಾಯೋಗಿಕ ಕಾರ್ಯಕ್ರಮವನ್ನು ಉತ್ತಮವಾಗಿ ಜಾರಿ ಮಾಡಿ ಸರ್ಕಾರಕ್ಕೆ ವರದಿ ನೀಡಬೇಕು. ನಂತರ ಮುಂದಿನ ಬಜೆಟ್​ನಲ್ಲಿ ಈ ಕಾರ್ಯಕ್ರಮಕ್ಕಾಗಿ ಹೆಚ್ಚು ಅನುದಾನ ಮೀಸಲಿಡಬಹುದು ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಆಸ್ಪತ್ರೆ ದಾಖಲಾತಿ ಕಡಿಮೆ

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಳೆದ ವಾರ ಶೇ.22 ಇದ್ದು, ಈ ವಾರ ಶೇ.32 ಆಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 3,442, ಖಾಸಗಿ ಆಸ್ಪತ್ರೆಗಳಲ್ಲಿ 1,788 ಸೇರಿ ಒಟ್ಟು 5,230 ರೋಗಿಗಳು ದಾಖಲಾಗಿದ್ದಾರೆ. 3.62 ಲಕ್ಷ ಸಕ್ರಿಯ ಪ್ರಕರಣಗಳಲ್ಲಿ ಶೇ.2 ಗಿಂತ ಕಡಿಮೆ ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದ್ದರಿಂದ ಈ ರೋಗ ತೀವ್ರವಾಗಿ ಪರಿಣಾಮ ಬೀರಿಲ್ಲ. ಐದಾರು ದಿನಗಳೊಳಗೆ ಲಕ್ಷಣಗಳು ಕಡಿಮೆಯಾಗುತ್ತವೆ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಆದರೂ ಎಚ್ಚರಿಕೆ ಕ್ರಮಗಳನ್ನು ಅನುರಿಸಬೇಕು ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಫೆಬ್ರವರಿ ಎರಡು, ಮೂರನೇ ವಾರದಲ್ಲಿ ಮೂರನೇ ಅಲೆ ಕಡಿಮೆಯಾಗಲಿದೆ ಎಂದು ಐಸಿಎಂಆರ್ ಕೂಡ ಹೇಳಿದೆ ಹೆಚ್ಚು ಎಚ್ಚರ ವಹಿಸಿದರೆ ಮೂರನೇ ಅಲೆ ನಿಯಂತ್ರಣಕ್ಕೆ ತರಬಹುದು. ರಾಜ್ಯದಲ್ಲಿ ಮೊದಲ ಡೋಸ್ ಶೇ.100 ಹಾಗೂ ಎರಡನೇ ಡೋಸ್ ಶೇ.84 ಆಗಿದೆ. ಆದ್ದರಿಂದ ಜನರಲ್ಲಿ ಹೆಚ್ಚು ರೋಗ ನಿರೋಧಕ ಶಕ್ತಿ ಬೆಳೆದಿದೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.

ವಿಷನ್ ವರದಿ

ಆರೋಗ್ಯ ಇಲಾಖೆಯಿಂದ ವಿಷನ್ ವರದಿ ರೂಪಿಸಲಾಗುತ್ತಿದೆ. ಮುಂದಿನ 20 ವರ್ಷಗಳಲ್ಲಿ ಕರ್ನಾಟಕ ಹೇಗೆ ಸ್ವಾಸ್ಥ್ಯ ರಾಜ್ಯವಾಗಬೇಕು ಹಾಗೂ ಮೂರು ಹಂತಗಳ ಆರೋಗ್ಯ ವ್ಯವಸ್ಥೆಯ ಬಲವರ್ಧನೆ ಹೇಗಾಗಬೇಕೆಂದು ವರದಿ ರೂಪಿಸಲಾಗುತ್ತಿದೆ. ವರದಿ ರೂಪಿಸುವ ಸಮಿತಿಯಲ್ಲಿ 30 ಹಿರಿಯ ತಜ್ಞರಿದ್ದಾರೆ. ಕಳೆದೊಂದು ವರ್ಷದಲ್ಲಿ ಸುಮಾರು 750 ತಜ್ಞರು ಇದನ್ನು ರೂಪಿಸಲು ಭಾಗಿಯಾಗಿದ್ದಾರೆ. ಜನವರಿ 28ಕ್ಕೆ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಆರು ತಿಂಗಳಾಗುತ್ತದೆ. ಆ ವೇಳೆ ಅವರು ವರದಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್​ನ ಬಗ್ಗೆ ಜನರಿಗೆ ದೊಡ್ಡ ನಿರೀಕ್ಷೆ ಇದೆ. ದೇಶದ ಆರ್ಥಿಕತೆಯನ್ನು ಕೊವಿಡ್ ಪೂರ್ವ ಹಾಗೂ ಕೊವಿಡ್ ನಂತರದ ಕಾಲ ಎಂದು ವಿಂಗಡಿಸಬಹುದು. ಕೊವಿಡ್ ನಂತರದ ಈ ಕಾಲದಲ್ಲಿ ಸಮೃದ್ಧ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಉತ್ತಮ ಬಜೆಟ್ ನೀಡುವ ವಿಶ್ವಾಸವಿದೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಇದನ್ನೂ ಓದಿ: ಉಮೇಶ್ ಕತ್ತಿ ಮಾಸ್ಕ್​ ಹಾಕಲ್ಲವಂತೆ ಅನ್ನೋ ಉಡಾಫೆಗೆ ಆರೋಗ್ಯ ಸಚಿವ ಸುಧಾಕರ್​ ಹೇಳಿದ್ದೇನು?

ಗಾಳಿಯಲ್ಲಿ ಗುಂಡು ಹಾರಿಸುವುದೇ ಡಿಕೆಶಿ ಕೆಲಸ: ಸಚಿವ ಭೈರತಿ ಬಸವರಾಜ್ ವಾಗ್ದಾಳಿ

Published On - 6:47 pm, Tue, 25 January 22

Follow Us
TV9 Web
TV9 Web

TV9 Kannada

Read More
ಮಾದವಾರ ಟೋಲ್‌ನಲ್ಲಿ ನೈಸ್ ಸಂತ್ರಸ್ತ ರೈತರ ಅಹವಾಲು ಸ್ವೀಕರಿಸಿದ ಹೆಚ್​ಡಿಕೆ
ಮಾದವಾರ ಟೋಲ್‌ನಲ್ಲಿ ನೈಸ್ ಸಂತ್ರಸ್ತ ರೈತರ ಅಹವಾಲು ಸ್ವೀಕರಿಸಿದ ಹೆಚ್​ಡಿಕೆ
ಜಂತರ್ ಮಂತರ್‌ನಲ್ಲಿ ಎಎಪಿ ಪ್ರತಿಭಟನೆ
ಜಂತರ್ ಮಂತರ್‌ನಲ್ಲಿ ಎಎಪಿ ಪ್ರತಿಭಟನೆ
ವಿಶ್ವವಿಖ್ಯಾತ ಮೈಸೂರು ದಸರಾ: ರಾಜವಂಶಸ್ಥರಿಗೆ ಆಹ್ವಾನ ನೀಡಿದ ಜಿಲ್ಲಾಡಳಿತ
ವಿಶ್ವವಿಖ್ಯಾತ ಮೈಸೂರು ದಸರಾ: ರಾಜವಂಶಸ್ಥರಿಗೆ ಆಹ್ವಾನ ನೀಡಿದ ಜಿಲ್ಲಾಡಳಿತ
ಸಾಲ ತೀರಿಸಲು ಕಿಡ್ನ್ಯಾಪ್​ ನಾಟಕ: ತಂದೆಗೇ ವಂಚಿಸಲು ಯತ್ನಿಸಿ ತಗ್ಲಾಕೊಂಡ ಮಗ
ಸಾಲ ತೀರಿಸಲು ಕಿಡ್ನ್ಯಾಪ್​ ನಾಟಕ: ತಂದೆಗೇ ವಂಚಿಸಲು ಯತ್ನಿಸಿ ತಗ್ಲಾಕೊಂಡ ಮಗ
ಐಫೆಲ್ ಟವರ್ BAPS ವಿವಾದ: ತನಿಖೆಯಲ್ಲಿ ಸತ್ಯ ಬಯಲು, ಸಂಸ್ಥೆಗೆ ಕ್ಲೀನ್ ಚಿಟ್
ಐಫೆಲ್ ಟವರ್ BAPS ವಿವಾದ: ತನಿಖೆಯಲ್ಲಿ ಸತ್ಯ ಬಯಲು, ಸಂಸ್ಥೆಗೆ ಕ್ಲೀನ್ ಚಿಟ್
ಬೀದರ್​ನಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!
ಬೀದರ್​ನಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!
ಮೈಸೂರು-ರಜನಿಕಾಂತ್​​ ನಡುವಿದೆ ಅವಿನಾಭಾವ ನಂಟು: ಕಾರಣ ಇಲ್ಲಿದೆ
ಮೈಸೂರು-ರಜನಿಕಾಂತ್​​ ನಡುವಿದೆ ಅವಿನಾಭಾವ ನಂಟು: ಕಾರಣ ಇಲ್ಲಿದೆ
ದಾವಣಗೆರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಚನ್ನಗಿರಿಯಲ್ಲಿ ಪತ್ತೆ
ದಾವಣಗೆರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಚನ್ನಗಿರಿಯಲ್ಲಿ ಪತ್ತೆ
ವಚನ ನಾದ ಲೋಕಕ್ಕೆ ಸಾಕ್ಷಿಯಾದ ದೇವನಗರಿ ದಾವಣಗೆರೆ
ವಚನ ನಾದ ಲೋಕಕ್ಕೆ ಸಾಕ್ಷಿಯಾದ ದೇವನಗರಿ ದಾವಣಗೆರೆ
ಸೌಜನ್ಯ ಕೇಸ್​​: ಸಾಕ್ಷಿ, ಪ್ರಕರಣ ಸಂಬಂಧ ಸಿಬಿಐ-ಸಿಐಡಿಗೆ SIT ಪತ್ರ
ಸೌಜನ್ಯ ಕೇಸ್​​: ಸಾಕ್ಷಿ, ಪ್ರಕರಣ ಸಂಬಂಧ ಸಿಬಿಐ-ಸಿಐಡಿಗೆ SIT ಪತ್ರ