ಬ್ರ್ಯಾಂಡ್ ಬೆಂಗಳೂರು ಅಂದ್ರೆ ಕನ್ನಡ; ಇಂಗ್ಲೀಷ್ ಮಾತನಾಡಬೇಕು ಅಂತಾ ಕನ್ನಡ ಬಿಡಬೇಡಿ -ಸುಧಾಮೂರ್ತಿ ಕಿವಿಮಾತು
ಬ್ರ್ಯಾಂಡ್ ಬೆಂಗಳೂರು ಅಂದ್ರೆ ಕನ್ನಡ. ಇಂಗ್ಲೀಷ್ ಮಾತನಾಡಬೇಕು ಅಂತಾ ಕನ್ನಡ ಬಿಡಬೇಡಿ. ಮಕ್ಕಳ ಮನಸ್ಸು ಯಾವುದೇ ಪೂರ್ವಪೀಡಿತವಾಗಿರಲ್ಲ. ನಾನು ಮಕ್ಕಳ ಪುಸ್ತಕ ಬರೆದಾಗ ಮಕ್ಕಳನ್ನ ಕೇಳ್ತೀನಿ. ಬ್ರೈಟ್ ಐಡಿಯಾ ಬರೋದೇ ಮಕ್ಕಳಿಂದ ಎಂದು ಸುಧಾಮೂರ್ತಿ ಅವರು ತಿಳಿಸಿದರು.
ಬೆಂಗಳೂರು, ಜ.13: ಬ್ರ್ಯಾಂಡ್ ಬೆಂಗಳೂರು (Brand Bengaluru) ಯೋಜನೆಯ ಮೂಲಕ ಬೆಂಗಳೂರು ನಗರವನ್ನು ಸ್ವಚ್ಛ, ಹಸಿರು ಹಾಗೂ ಸುಸ್ಥಿರ ನಗರವಾಗಿ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಈ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ಯುವ ನಾಯಕತ್ವ ಸಮ್ಮೇಳನ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ ಇನ್ಪೋಸಿಸ್ (Infosys) ಮುಖ್ಯಸ್ಥೆ ಸುಧಾಮೂರ್ತಿ (Sudha Murthy) ಅವರು ಇಂಗ್ಲೀಷ್ ಮಾತನಾಡಬೇಕು ಅಂತಾ ಕನ್ನಡ ಬಿಡಬೇಡಿ ಎಂದು ಕಿವಿ ಮಾತು ಹೇಳಿದ್ದಾರೆ.
ಬ್ರ್ಯಾಂಡ್ ಬೆಂಗಳೂರು ಅಂದ್ರೆ ಕನ್ನಡ. ಇಂಗ್ಲೀಷ್ ಮಾತನಾಡಬೇಕು ಅಂತಾ ಕನ್ನಡ ಬಿಡಬೇಡಿ. ಮಕ್ಕಳ ಮನಸ್ಸು ಯಾವುದೇ ಪೂರ್ವಪೀಡಿತವಾಗಿರಲ್ಲ. ನಾನು ಮಕ್ಕಳ ಪುಸ್ತಕ ಬರೆದಾಗ ಮಕ್ಕಳನ್ನ ಕೇಳ್ತೀನಿ. ಏನಾದ್ರೂ ತಪ್ಪಿದ್ರೆ ಹೇಳಿ ಅಂತಾ. ಬ್ರೈಟ್ ಐಡಿಯಾ ಬರೋದೇ ಮಕ್ಕಳಿಂದ. ಎಲ್ಲಾ ನಗರಗಳಲ್ಲೂ ಸಮಸ್ಯೆ ಇರುತ್ತೆ. ಆದರೆ ಸಮಸ್ಯೆಗಳನ್ನ ಬಗೆಹರಿಸುವ ಪ್ರಯತ್ನ ಇರಬೇಕು ಎಂದು ಸುಧಾಮೂರ್ತಿ ಅವರು ತಿಳಿಸಿದರು.
ಬೆಂಗಳೂರು ಅನ್ನೋದು ಒಂದು ಫೀಲಿಂಗ್, ಎಮೋಶನ್
ಇನ್ನು ಇದೇ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಡಿ.ಕೆ.ಎಸ್ ಹೆಗ್ಡೆ, ಬೆಂಗಳೂರು ಅನ್ನೋದು ಒಂದು ಫೀಲಿಂಗ್, ಎಮೋಶನ್. ಬ್ರ್ಯಾಂಡ್ ಬೆಂಗಳೂರು ಅನ್ನೋದು ಒಂದು ಲೋಗೋ ಅಲ್ಲ. ಈ ಪರಿಕಲ್ಪನೆಗೆ ನಾವೆಲ್ಲರೂ ಅಂಬಾಸಿಡರ್. ಬ್ರ್ಯಾಂಡ್ ಬೆಂಗಳೂರಿನ ನಿರ್ಮಾಣಕ್ಕೆ ನಿಮ್ಮೆಲ್ಲರ ಐಡಿಯಾ ಬೇಕು. ಆಕ್ಟೀವ್ ಸಿಟಿಜನ್ ಆಗಿ ಎಲ್ಲರೂ ಸಹಕರಿಸಬೇಕು ಎಂದರು.
ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು: ನಾಗರಿಕರ ಸಮಸ್ಯೆ ಆಲಿಸಲು “ಸಹಾಯ ಹಸ್ತ” ವೆಬ್ಸೈಟ್
ಐಶ್ವರ್ಯ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇಂದು ಬೆಂಗಳೂರಲ್ಲಿ ಯುವ ನಾಯಕತ್ವ ಸಮ್ಮೇಳನ ಆಯೋಜಿಸಲಾಗಿದೆ. ಹಲಸೂರಿನ ಕಾನ್ರಾಡ್ ಹೋಟೆಲ್ ನಲ್ಲಿ ಬ್ರ್ಯಾಂಡ್ ಬೆಂಗಳೂರು ಕುರಿತು ಶಾಲಾ ಮಟ್ಟದ ಅಂತಿಮ ಸುತ್ತಿನ ಐಡಿಯಾಥಾನ್ ಆಯೋಜನೆ ಮಾಡಲಾಗಿದೆ. ವಿವಿಧ ಶಾಲೆಗಳಿಂದ ನೂರಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬ್ರ್ಯಾಂಡ್ ಬೆಂಗಳೂರು ಕುರಿತು ಉತ್ತಮ ಬೆಂಗಳೂರಿಗಾಗಿ ಐಡಿಯಾಗಳನ್ನ ಹಂಚಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸುಧಾಮೂರ್ತಿ, ನಟ ರಮೇಶ್ ಅರವಿಂದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಭಾಗಿಯಾಗಲಿದ್ದಾರೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ