AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬ್ರೆಜಿಲ್ ಮಾಡೆಲ್​ಗೆ ಲೈಂಗಿಕ ಕಿರುಕುಳ: ಡೆಲಿವರಿ ಏಜೆಂಟ್ ಬಂಧನ

ಬ್ಲಿಂಕಿಟ್ ಡೆಲಿವರಿ ಏಜೆಂಟೊಬ್ಬನನ್ನು ಬ್ರೆಜಿಲ್​ನ ಮಾಡೆಲ್​ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಂಗಳೂರಿನ ಆರ್‌ಟಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು, ಆಹಾರ ವಿತರಣೆ ಸಮಯದಲ್ಲಿ ಸಂತ್ರಸ್ತೆಯ ಜತೆ ಅನುಚಿತವಾಗಿ ವರ್ತಿಸಿದ್ದಲ್ಲದೆ, ಆಕೆಯನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರಿನಲ್ಲಿ ಬ್ರೆಜಿಲ್ ಮಾಡೆಲ್​ಗೆ ಲೈಂಗಿಕ ಕಿರುಕುಳ: ಡೆಲಿವರಿ ಏಜೆಂಟ್ ಬಂಧನ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Oct 28, 2025 | 9:57 AM

Share

ಬೆಂಗಳೂರು, ಅಕ್ಟೋಬರ್​ 28: ಬೆಂಗಳೂರಿನ (Bengaluru) ಆರ್‌ಟಿ ನಗರ ಪ್ರದೇಶದಲ್ಲಿ ಬ್ರೆಜಿಲ್​ನ ಮಾಡೆಲ್​ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬ್ಲಿಂಕಿಟ್ ಡೆಲಿವರಿ ಏಜೆಂಟ್​ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಅಕ್ಟೋಬರ್ 17 ರಂದೇ ನಡೆದಿದ್ದು, ಇದೀಗ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿಯ ಬಂಧನವಾಗಿದೆ. ಸಂತ್ರಸ್ತೆಯ ಉದ್ಯೋಗದಾತ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅಪಾರ್ಟ್‌ಮೆಂಟೊಂದರಲ್ಲಿ ಘಟನೆ ನಡೆದಿದ್ದು, ಅಲ್ಲಿ ಸಂತ್ರಸ್ತೆಯು ಇತರ ಇಬ್ಬರು ಮಹಿಳೆಯರೊಂದಿಗೆ ವಾಸಿಸುತ್ತಿದ್ದಾರೆ.

ದೂರು ದಾಖಲಾದ ದಿನವೇ ಆರೋಪಿ ಕುಮಾರ್ ರಾವ್ ಪವಾರ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ ವಿಭಾಗ) ಬಾಬಾಸಾಬ್ ನೆಮಗೌಡ್ ದೃಢಪಡಿಸಿದ್ದಾರೆ. ಆರೋಪಿಯು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದು, ಬ್ಲಿಂಕಿಟ್‌ನಲ್ಲಿ ಅರೆಕಾಲಿಕ ವಿತರಣಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.

ಎಫ್‌ಐಆರ್ ಪ್ರಕಾರ, ಮಾಡೆಲ್ ಬ್ಲಿಂಕಿಟ್ ಆ್ಯಪ್ ಮೂಲಕ ಅಕ್ಟೋಬರ್ 17ರಂದು ಮಧ್ಯಾಹ್ನ 3.20 ರ ಸುಮಾರಿಗೆ ಆಹಾರ ಆರ್ಡರ್ ಮಾಡಿದ್ದರು. ಆಹಾರ ವಿತರಣೆಯ ಸಮಯದಲ್ಲಿ, ಆರೋಪಿಯು ಅನುಚಿತವಾಗಿ ವರ್ತಿಸಿದ್ದಾನೆ. ಅಷ್ಟೇ ಅಲ್ಲದೆ, ಸಂತ್ರಸ್ತೆಯ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಸ್ಪರ್ಶಿಸಿದ್ದಾನೆ. ಆಘಾತ ಮತ್ತು ಭಯದಿಂದ ಸಂತ್ರಸ್ತೆಯು ಮನೆಯೊಳಗೆ ಓಡಿಹೋಗಿದ್ದರು. ಆದರೆ ಭಯದಿಂದಾಗಿ ಘಟನೆ ಬಗ್ಗೆ ತಕ್ಷಣವೇ ದೂರು ನೀಡಿರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: UPSC ಆಕಾಂಕ್ಷಿಯಾಗಿದ್ದ ಪ್ರಿಯಕರನ ಕಥೆ ಮುಗಿಸಿದ ಪ್ರಿಯತಮೆ: ರಾಸಲೀಲೆ ವಿಡಿಯೋಕ್ಕಾಗಿ ನಡೆಯಿತು ಕೊಲೆ

ಕೆಲವು ದಿನಗಳ ನಂತರ ಸಂತ್ರಸ್ತೆಯು ರೂಮ್‌ಮೇಟ್‌ಗಳಿಗೆ ವಿಷಯ ತಿಳಿಸಿದ್ದಾರೆ. ನಂತರ ಅವರು ನಡೆದ ಘಟನೆಯ ಬಗ್ಗೆ ಉದ್ಯೋಗದಾತರಿಗೆ ಮಾಹಿತಿ ನೀಡಿದ್ದಾರೆ. ಉದ್ಯೋಗದಾತರು ಅಪಾರ್ಟ್‌ಮೆಂಟ್ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಅಕ್ಟೋಬರ್ 25 ರಂದು ಔಪಚಾರಿಕ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ತಕ್ಷಣವೇ ಬಂಧಿಸಿ ಭಾರತೀಯ ದಂಡ ಸಂಹಿತೆಯ (BNS) ಸಂಬಂಧಿತ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 am, Tue, 28 October 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!