AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka News Highlights: ನಮ್ಮ ಮೆಟ್ರೋ ಪಿಂಕ್ ಲೈನ್ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್, ನ.13ಕ್ಕೆ ಬೆಂಗಳೂರಿಗೆ ಮೋದಿ

Breaking News Today Live Updates: ರಾಜ್ಯ ರಾಜಕಾರಣದಲ್ಲಿ ತೀವ್ರ ಗದ್ದಲ ಹೆಚ್ಚಾಗಿದೆ. ಯಡಿಯೂರಪ್ಪ ನಿವಾಸದ ಗೋಡೆಗೆ ವಿಜಯೇಂದ್ರ ವಿರುದ್ಧ ಪೋಸ್ಟರ್ ಅಂಟಿಸಲಾಗಿದ್ದು, ರಾಜಕೀಯ ಚರ್ಚೆಗೆ ಕಾರಣವಾಗಿದೆ. ಇತ್ತ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿ ಮಾಡಿ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಇಂದಿನ ಪ್ರಮುಖ ಬೆಳವಣಿಗೆಗಳ ಲೈವ್ ಅಪ್ಡೇಟ್ಸ್‌ ಇಲ್ಲಿದೆ.

Karnataka News Highlights: ನಮ್ಮ ಮೆಟ್ರೋ ಪಿಂಕ್ ಲೈನ್ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್, ನ.13ಕ್ಕೆ ಬೆಂಗಳೂರಿಗೆ ಮೋದಿ
Narendra Modi
ಅಕ್ಷಯ್​ ಪಲ್ಲಮಜಲು​​
| Edited By: |

Updated on:Nov 03, 2026 | 9:41 PM

Share

Breaking News Today Live Updates in Kannada: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್, ಪ್ರತಿಭಟನೆ, ರಾಜಕೀಯ ಗದ್ದಲು ಹೆಚ್ಚಾಗಿದೆ. ನಾಯಕರು ದಿನಕ್ಕೊಂದು ಹೇಳಿಕೆಯನ್ನು ನೀಡುತ್ತಿದ್ದಾರೆ. ಇದೀಗ ಸ್ಟಿಂಗ್ ರಾಜಕೀಯ ಪಕ್ಷಗಳ ನಡುವೆ ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ನಡುವೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸದ ಕಾಂಪೌಂಡ್ ಗೋಡೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವ್ಯಂಗ್ಯಾತ್ಮಕ ಪೋಸ್ಟರ್‌ಗಳನ್ನು ಅಂಟಿಸಿರುವ ಘಟನೆ ಬೆಳಕಿಗೆ ಬಂದಿದೆ. ಇದರ ಜತೆಗೆ ಕಬ್ಬಿಗೆ ನ್ಯಾಯಯುತ ದರ ನಿಗದಿಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದ್ದು, ಇಂದು (ನ. 3) ಜಿಲ್ಲಾಡಳಿತದ ಮಟ್ಟದಲ್ಲಿ ಮಹತ್ವದ ಸಭೆ ನಡೆಯಲಿದೆ. ಮತ್ತೊಂದು ಕಡೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಅವರು ಸುಮಾರು 45 ನಿಮಿಷಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದು, ಪಕ್ಷ ಹಾಗೂ ಸರ್ಕಾರದ ಆಂತರಿಕ ನಡಾವಳಿಗಳ ಕುರಿತು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಸಿನಿಮಾ, ಕ್ರೀಡೆ, ದೇಶದಲ್ಲಿ ಏನೆಲ್ಲ ಸುದ್ದಿಗಳು ನಡೆಯುತ್ತಿದೆ ಎಂಬ ಬಗ್ಗೆ ವಿಸ್ತಾರವಾಗಿ ಇಲ್ಲಿ ಲೈವ್​​​ ಅಪ್ಡೇಟ್​​ ನೀಡಲಾಗುವುದು.

ಇಲ್ಲಿದೆ ನೋಡಿ ಲೈವ್ ವಿಡಿಯೋ:

LIVE NEWS & UPDATES

The liveblog has ended.
  • 03 Nov 2026 08:43 PM (IST)

    250 ರೂಪಾಯಿ ಮುಖಬೆಲೆಯ ನಾಣ್ಯ ಬಿಡುಗಡೆ

    ಯುಪಿಯ ವಾರಣಾಸಿ ಬನಾರಸ್ ಹಿಂದೂ ವಿವಿಯಲ್ಲಿ ಮುತ್ತುಸ್ವಾಮಿ ದೀಕ್ಷಿತ್​ರ 250ನೇ ಜನ್ಮದಿನ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ 250 ರೂಪಾಯಿ ಮುಖಬೆಲೆಯ ನಾಣ್ಯ ಬಿಡುಗಡೆಯಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುತ್ತುಸ್ವಾಮಿ ಜನ್ಮದಿನ ಸ್ಮರಣಾರ್ಥ 250 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಿದ್ದಾರೆ.

  • 03 Nov 2026 07:29 PM (IST)

    ನಮ್ಮ ಮೆಟ್ರೋ ಪಿಂಕ್ ಲೈನ್ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್

    ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ ಆಗಿದೆ.ಇದೇ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಮೆಟ್ರೋ ಪಿಂಕ್ ಲೈನ್ ಲೋಕಾರ್ಪಣೆ ಮಾಡಲಿದ್ದಾರೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಖಚಿತಪಡಿಸಿದ್ದಾರೆ.

  • 03 Nov 2026 06:48 PM (IST)

    ಛಲವಾದಿ‌ ನಾರಾಯಣಸ್ವಾಮಿ ವಿರುದ್ಧ ಭುಗಿಲೆದ್ದ ಆಕ್ರೋಶ

    ಕಾಂಗ್ರೆಸ್ ನಾಯಕರನ್ನ ಬಿಜೆಪಿಗರು ತುಂಡು ತುಂಡಾಗ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂಬ ಪರಿಷತ್ ವಿಪಕ್ಷ ನಾಯಕ ಛಲವಾದಿ‌ ನಾರಾಯಣಸ್ವಾಮಿ ಅವರ ಹೇಳಿಕೆ ವಿವಾದ ಸೃಷ್ಟಿಸಿದ್ದು, ಕಾಂಗ್ರೆಸ್ ಮುಖಂಡರು, ಸೆವೆನ್ ಮಿನಿಸ್ಟರ್ ಕ್ವಾಟರ್ಸ್ನ ನಾರಾಯಣಸ್ವಾಮಿಯವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ನೇತೃತ್ವದಲ್ಲಿ ಮುತ್ತಿಗೆ ಯತ್ನಿಸಿದ್ದು, ಕೂಡಲೇ ಪೊಲೀಸರು ಪ್ರತಿಭಟನೆಕಾರರನ್ನು ವಶಕ್ಕೆ ಪಡೆದುಕೊಂಡರು. ಛಲವಾದಿ ನಾರಾಯಣಸ್ವಾಮಿ ಮೇಲೆ ಕೊಲೆ ಪ್ರಚೋದನೆ ಕೇಸ್ ಹಾಕಿ ಅವರನ್ನು ಕೂಡಲೇ ಅವರನ್ನ ಬಂಧಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಕೆಲಸ ಮಾಡ್ತಾ ಇದ್ದಾರೆ . ಬಂಧಿಸದಿದ್ದರೆ ನಾವು ನಾಳೆ ಡಿಜಿ ಕಚೇರಿ ಎದುರು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

  • 03 Nov 2026 05:15 PM (IST)

    ಹಾಸನಾಂಬೆ ದರ್ಶನಕ್ಕೆ 5 ಲಕ್ಷ ನೀಡಿ 500 ಟಿಕೆಟ್ ಖರೀದಿಸಿದ ಸಚಿವ ಶಿವಲಿಂಗೇಗೌಡ

    ಹಾಸನಾಂಬೆ ದರ್ಶನ ಮಾಡಲು ಸಚಿವ ಶಿವಲಿಂಗೇಗೌಡ ತಮ್ಮ ಆಪ್ತರಿಗಾಗಿ 5 ಲಕ್ಷ ರೂಪಾಯಿ ನೀಡಿ 500 ಟಿಕೆಟ್ ಖರೀದಿಸಿದ್ದಾರೆ. ಶಿವಲಿಂಗೇಗೌಡ ಅವರು ಖುದ್ದು ತಾವೇ ಕೌಂಟರ್​ಗೆ ತೆರಳಿ 1 ಸಾವಿರ ರೂ. ಮೌಲ್ಯದ 500 ಟಿಕೆಟ್ ಖರೀದಿಸಿದ್ದು, ಬಳಿಕ ಟಿಕೆಟ್ ಗಳನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಅವರಿಗೆ ಹಸ್ತಾಂತರಿಸಿದರು.

  • 03 Nov 2026 03:46 PM (IST)

    ಶಿವಮೊಗ್ಗ ಜೈಲಿಗೆ ನಿಷೇಧಿತ ವಸ್ತು ಎಸೆಯಲು ಯತ್ನ

    ಶಿವಮೊಗ್ಗದ ಸೊಗಾನೆ ಕೇಂದ್ರ ಕಾರಾಗೃಹದೊಳಗೆ ನಿಷೇಧಿತ ವಸ್ತು ಎಸೆಯಲು ಯತ್ನಿಸಿರುವ ಘಟನೆ ನಡೆದಿದೆ. ಕಪ್ಪು ಕವರ್​ ಸಮೇತ ಓಡಿ ಹೋಗುತ್ತಿದ್ದ ವ್ಯಕ್ತಿಯನ್ನ ಜೈಲು ಸಿಬ್ಬಂದಿ ಬೆನ್ನಟ್ಟಿ ಹಿಡಿದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಿರಿಯೂರು ರಸ್ತೆಯಲ್ಲಿ ಸಿಕ್ಕಿಬಿದ್ದ ಹೊನ್ನೇಶನನ್ನು ಪೊಲೀಸರು ವಿಚಾರಣೆ ನಡೆಸಿದಾಗ ಕರೀಂ ಹಾಗೂ ಪುನೀತ್ ಜೊತೆಗೆ ಬೈಕ್​​ನಲ್ಲಿ ಬಂದು ನಿಷೇಧಿತ ವಸ್ತು ಎಸೆಯಲು ಯತ್ನಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಇತರೆ ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.

  • 03 Nov 2026 03:25 PM (IST)

    ನಾರಾಯಣಸ್ವಾಮಿ ವಿವಾದಾತ್ಮಕ ಹೇಳಿಕೆ

    ಕೋಲಾರದಲ್ಲಿ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿವಾದಿತ ಹೇಳಿಕೆ ನೀಡಿದ್ದಾರೆ. ಇಡೀ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ. ಕಾಂಗ್ರೆಸ್ ಅರಾಜಕತೆ ಸೃಷ್ಠಿ ಮಾಡಿದ್ದೇ ಆದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರುಗಳು ಕಾಂಗ್ರೆಸ್ ನಾಯಕರನ್ನು ತುಂಡು ತುಂಡು ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಚ್ಚರ ಎಂದಿದ್ದಾರೆ.

  • 03 Nov 2026 02:40 PM (IST)

    ಪತಿ ದರ್ಶನ್‌ಗಾಗಿ ಮತ್ತೆ ದೇವರ ಮೊರೆ ಹೋದ ವಿಜಯಲಕ್ಷ್ಮಿ

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೀವ್ರ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬೆನ್ನಲ್ಲೇ, ಪತಿ ಶೀಘ್ರವೇ ಬಿಡುಗಡೆಯಾಗಲಿ ಹಾಗೂ ಆರೋಗ್ಯ ಸುಧಾರಿಸಲಿ ಎಂದು ಪ್ರಾರ್ಥಿಸಿ ಪತ್ನಿ ವಿಜಯಲಕ್ಷ್ಮಿ ಅವರು ಮತ್ತೆ ದೇವಸ್ಥಾನಗಳ ಅಲೆದಾಟ ಆರಂಭಿಸಿದ್ದಾರೆ.

  • 03 Nov 2026 02:36 PM (IST)

    ಪತಿ ದರ್ಶನ್‌ಗಾಗಿ ಮತ್ತೆ ದೇವರ ಮೊರೆ ಹೋದ ವಿಜಯಲಕ್ಷ್ಮಿ

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೀವ್ರ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬೆನ್ನಲ್ಲೇ, ಪತಿ ಶೀಘ್ರವೇ ಬಿಡುಗಡೆಯಾಗಲಿ ಹಾಗೂ ಆರೋಗ್ಯ ಸುಧಾರಿಸಲಿ ಎಂದು ಪ್ರಾರ್ಥಿಸಿ ಪತ್ನಿ ವಿಜಯಲಕ್ಷ್ಮಿ ಅವರು ಮತ್ತೆ ದೇವಸ್ಥಾನಗಳ ಅಲೆದಾಟ ಆರಂಭಿಸಿದ್ದಾರೆ.

  • 03 Nov 2026 01:08 PM (IST)

    ರಾಜ್ಯ ರಾಜಕಾರಣದ ಸ್ಟಿಂಗ್‌ಗೆ ಹೊಸ ಟ್ವಿಸ್ಟ್: 2023ರಲ್ಲಿ ಸಂತ್ರಸ್ತೆಯ ವೀಡಿಯೋ ರೆಕಾರ್ಡ್ ಮಾಡಿದ್ದ ಕೃಪಾ ಆಳ್ವಾ

    ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಚಕ ಹಾಗೂ ಗಂಭೀರ ತಿರುವು ಸಿಕ್ಕಿದೆ. ಲೈಂಗಿಕ ಕಿರುಕುಳಕ್ಕೊಳಗಾಗಿ ದೂರು ನೀಡಿದ್ದ ಸಂತ್ರಸ್ತೆಯ ದೂರನ್ನು ಕಾನೂನುಬದ್ಧವಾಗಿ ತನಿಖೆಗೆ ಒಳಪಡಿಸದೆ, ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ನಾಯಕಿ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವಾ ಯತ್ನಿಸಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.

  • 03 Nov 2026 12:45 PM (IST)

    ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಗಣವೇಷಧಾರಿ ಮುಸ್ಲಿಂ ಮುಖಂಡ

    ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನ ಕಾರ್ಯಕ್ರಮವು ಕೋಮು ಸೌಹಾರ್ದತೆ ಮತ್ತು ವೈವಿಧ್ಯಮಯ ಪ್ರಾತಿನಿಧ್ಯಕ್ಕೆ ಸಾಕ್ಷಿಯಾಗಿದೆ. ನಿನ್ನೆ (ಸೋಮವಾರ) ಕುಷ್ಟಗಿಯಲ್ಲಿ ಆಯೋಜಿಸಲಾಗಿದ್ದ ಈ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಮುಸ್ಲಿಂ ಮುಖಂಡ ಲಾಡ್ ಸಾಬ್ ಕೊಳ್ಳಿ ಅವರು ಸಂಘದ ಪೂರ್ಣ ಗಣವೇಷ (ಖಾಕಿ ಪ್ಯಾಂಟ್, ಬಿಳಿ ಶರ್ಟ್) ಧರಿಸಿ ಭಾಗವಹಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಇಲ್ಲಿದೆ ನೋಡಿ ಸ್ಟೋರಿ

  • 03 Nov 2026 12:16 PM (IST)

    ಕೋಟಿ ಮೌಲ್ಯದ ಕಲಬೆರಕೆ ಆಹಾರ ಜಪ್ತಿ

    ಹಬ್ಬದ ಸಸಂಭ್ರಮದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುತ್ತಿದ್ದ ಕಲಬೆರಕೆ ಆಹಾರ ಮಾಫಿಯಾ ವಿರುದ್ಧ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆ ಸಮರ ಸಾರಿದೆ. ರಾಜ್ಯಾದ್ಯಂತ ಏಕಕಾಲದಲ್ಲಿ ಭಾರಿ ಬೃಹತ್ ದಾಳಿ ನಡೆಸಿರುವ ಅಧಿಕಾರಿಗಳು ಬರೋಬ್ಬರಿ ₹9.01 ಕೋಟಿ ರೂಪಾಯಿ ಮೌಲ್ಯದ 3.53 ಲಕ್ಷ ಕೆಜಿ ಕಲಬೆರಕೆ ಆಹಾರ ಪದಾರ್ಥಗಳನ್ನು ಜಪ್ತಿ ಮಾಡಿದ್ದಾರೆ.

  • 03 Nov 2026 11:29 AM (IST)

    ಹಿರಿಯೂರು ಉಪಚುನಾವಣೆ ಅಖಾಡಕ್ಕೆ ಬಿಜೆಪಿ ಭಾರಿ ಸಿದ್ಧತೆ: ಕಾರಜೋಳ, ಶ್ರೀರಾಮುಲು, ಸಿ.ಟಿ. ರವಿ ಹೆಗಲಿಗೆ ಉಸ್ತುವಾರಿ ಹೊಣೆ

    ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಣಕ್ಕಿಳಿಯಲು ಬಿಜೆಪಿ ಭಾರಿ ರಣತಂತ್ರ ರೂಪಿಸಿದ್ದು, ಚುನಾವಣಾ ಉಸ್ತುವಾರಿಗಳ ಪಡೆಯನ್ನೇ ಅಧಿಕೃತವಾಗಿ ನೇಮಕ ಮಾಡಿದೆ. ಕ್ಷೇತ್ರದಲ್ಲಿ ಕಮಲ ಅರಳಿಸಲು ಬಿಜೆಪಿ ರಾಜ್ಯಾಧ್ಯಕ್ಷರ ನಿರ್ದೇಶನದಂತೆ ಪ್ರಭಾವಿ ನಾಯಕರು, ಸಂಸದರು, ಶಾಸಕರು ಹಾಗೂ ಮಾಜಿ ಸಚಿವರನ್ನು ಒಳಗೊಂಡ ಬೃಹತ್ ನಾಯಕರ ತಂಡಕ್ಕೆ ಚುನಾವಣಾ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ.

  • 03 Nov 2026 11:27 AM (IST)

    ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಹೆರಿಗೆ ವೇಳೆ ತಾಯಿ-ಮಗು ದಾರುಣ ಸಾವು

    ಮೈಸೂರು ಜಿಲ್ಲೆಯ ಕೃಷ್ಣರಾಜನಗರ (ಕೆ.ಆರ್.ನಗರ) ಪಟ್ಟಣದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿಬಂದಿದ್ದು, ಹೆರಿಗೆ ಸಂದರ್ಭದಲ್ಲಿ ತಾಯಿ ಹಾಗೂ ಮಗು ಇಬ್ಬರೂ ದಾರುಣವಾಗಿ ಮೃತಪಟ್ಟ ದುರಂತ ಘಟನೆ ಸಂಭವಿಸಿದೆ.

  • 03 Nov 2026 11:01 AM (IST)

    ದೀಪಾವಳಿಗೆ ಯೋಗಿ ಸರ್ಕಾರದಿಂದ ಭರ್ಜರಿ ಗಿಫ್ಟ್

    ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ರಾಜ್ಯದ ಬಡ ಹಾಗೂ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಭಾರಿ ಬಂಪರ್ ಕೊಡುಗೆ ಪ್ರಕಟಿಸಿದೆ.

  • 03 Nov 2026 10:19 AM (IST)

    ಲ್ಯಾಂಡಿಂಗ್ ವೇಳೆ ಎರಡು ಹೆಲಿಕಾಪ್ಟರ್‌ಗಳ ಡಿಕ್ಕಿ; ಭಾರತೀಯ ಪ್ರಯಾಣಿಕ ದಾರುಣ ಸಾವು

    ನೇಪಾಳದ ವಿಶ್ವಪ್ರಸಿದ್ಧ ಮೌಂಟ್ ಎವರೆಸ್ಟ್ ಪ್ರದೇಶದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ ಸಂಭವಿಸಿದೆ. ಲ್ಯಾಂಡಿಂಗ್ ಆಗುವ ವೇಳೆ ಎರಡು ಹೆಲಿಕಾಪ್ಟರ್‌ಗಳು ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಪರಿಣಾಮ ಹೆಲಿಕಾಪ್ಟರ್‌ನಲ್ಲಿದ್ದ ಓರ್ವ ಭಾರತೀಯ ಪ್ರಯಾಣಿಕ ದಾರುಣವಾಗಿ ಮೃತಪಟ್ಟಿದ್ದಾರೆ. ಇಲ್ಲಿದೆ ನೋಡಿ ಸ್ಟೋರಿ 

  • 03 Nov 2026 10:17 AM (IST)

    ಟೈರ್ ಬ್ಲಾಸ್ಟ್ ಆಗಿ ಟಾಟಾ ಏಸ್ ವಾಹನ ಪಲ್ಟಿ; ಪಾವಗಡದ ತಂದೆ-ಮಗ ದಾರುಣ ಸಾವು

    ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಸಂತೋಷದಿಂದ ಮನೆಗೆ ವಾಪಸಾಗುತ್ತಿದ್ದ ಕುಟುಂಬಕ್ಕೆ ಹಾದಿಯಲ್ಲೇ ಭೀಕರ ದುರಂತ ಎದುರಾಗಿದೆ. ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ಕದಿರಿ ಬಳಿ ಟಾಟಾ ಏಸ್ ವಾಹನದ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಪರಿಣಾಮ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಂದೆ ಮತ್ತು ಮಗ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

  • 03 Nov 2026 09:41 AM (IST)

    6. ‘ಮುರಸು’ ಚಂಡಮಾರುತ ಆರ್ಭಟ: ರಾಜ್ಯದಲ್ಲಿ ಮುಂದಿನ ೫ ದಿನ ಭಾರಿ ಮಳೆ ಮುನ್ಸೂಚನೆ

    ಆಂಧ್ರಪ್ರದೇಶದ ಕರಾವಳಿಯಲ್ಲಿ ಗಂಟೆಗೆ 110 ಕಿ.ಮೀ ವೇಗದಲ್ಲಿ ಅಪ್ಪಳಿಸಿರುವ ‘ಮುರಸು’ ಚಂಡಮಾರುತದ ಪ್ರಭಾವದಿಂದ ಕರ್ನಾಟಕದಲ್ಲೂ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

  • 03 Nov 2026 09:40 AM (IST)

    ಝೈದ್ ಖಾನ್‌ಗೆ ನಿಂದನೆ ಆರೋಪ: ನೋಟಿಸ್‌ಗೂ ಡೋಂಟ್ ಕೇರ್ ಎಂದ ನಟ ಧನ್ವೀರ್

    ನಟ ಝೈದ್ ಖಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ನಟ ಧನ್ವೀರ್, ಪೋಲಿಸರ ವಿಚಾರಣೆಗೆ ಗೈರುಹಾಜರಾಗುವ ಮೂಲಕ ನೋಟಿಸ್ ಕಡೆಗಣಿಸಿದ್ದಾರೆ.

  • 03 Nov 2026 09:40 AM (IST)

    ಕೋಲಾರದಲ್ಲಿ ಇಂದು ಬಿಜೆಪಿಯಿಂದ 3 ಕಿ.ಮೀ ಬೃಹತ್ ಪಾದಯಾತ್ರೆ

    ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಘೋಷವಾಕ್ಯದೊಂದಿಗೆ ಕೋಲಾರ ನಗರದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿಯಿಂದ ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ.

  • 03 Nov 2026 09:39 AM (IST)

    ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ

    ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಅವರು ಸುಮಾರು 45 ನಿಮಿಷಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದು, ಪಕ್ಷ ಹಾಗೂ ಸರ್ಕಾರದ ಆಂತರಿಕ ನಡಾವಳಿಗಳ ಕುರಿತು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

  • 03 Nov 2026 09:39 AM (IST)

    BSY ನಿವಾಸದ ಕಾಂಪೌಂಡ್‌ಗೆ ವಿಜಯೇಂದ್ರ ವಿರುದ್ಧದ ಪೋಸ್ಟರ್‌

    ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸದ ಕಾಂಪೌಂಡ್ ಗೋಡೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವ್ಯಂಗ್ಯಾತ್ಮಕ ಪೋಸ್ಟರ್‌ಗಳನ್ನು ಅಂಟಿಸಿರುವ ಘಟನೆ ಬೆಳಕಿಗೆ ಬಂದಿದೆ.

  • 03 Nov 2026 09:38 AM (IST)

    ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ‘ಜೈಲ್ ಭರೋ’ ಪಾದಯಾತ್ರೆ

    ಕಬ್ಬಿಗೆ ನ್ಯಾಯಯುತ ದರ ನಿಗದಿಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದ್ದು, ಇಂದು (ನ. 3) ಜಿಲ್ಲಾಡಳಿತದ ಮಟ್ಟದಲ್ಲಿ ಮಹತ್ವದ ಸಭೆ ನಡೆಯಲಿದೆ.

Published On - Nov 03,2026 9:37 AM

Follow Us
ತಾಲೂಕು, ಜಿಲ್ಲಾ ಪಂಚಾಯ್ತಿ ಎಲೆಕ್ಷನ್: ಗೊಂದಲಕ್ಕೆ ಸಿಲುಕಿದ ರಾಜ್ಯ ಸರ್ಕಾರ!
ತಾಲೂಕು, ಜಿಲ್ಲಾ ಪಂಚಾಯ್ತಿ ಎಲೆಕ್ಷನ್: ಗೊಂದಲಕ್ಕೆ ಸಿಲುಕಿದ ರಾಜ್ಯ ಸರ್ಕಾರ!
ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟ ವಾಪಸ್: 3,600 ದರಕ್ಕೆ ತೃಪ್ತಿಪಟ್ಟ ರೈತರು
ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟ ವಾಪಸ್: 3,600 ದರಕ್ಕೆ ತೃಪ್ತಿಪಟ್ಟ ರೈತರು
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ