ಸರ್ಕಾರಿ ಕಚೇರಿಗಳಲ್ಲಿ ಲಂಚದ ಪಿಡುಗು: ಇದು ಕ್ಯಾನ್ಸರ್‌ಗಿಂತ ಗಂಭೀರ ಕಾಯಿಲೆ ಎಂದ ಹೈಕೋರ್ಟ್

ಹಿಂದಿನ ಡಿಸಿ ಜೆ. ಮಂಜುನಾಥ್‌ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ತೀರ್ಪಿನಲ್ಲಿ ಈ ಅಂಶಗಳನ್ನು ನ್ಯಾ. ಕೆ.ನಟರಾಜನ್ ಉಲ್ಲೇಖಿಸಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಲಂಚದ ಪಿಡುಗು: ಇದು ಕ್ಯಾನ್ಸರ್‌ಗಿಂತ ಗಂಭೀರ ಕಾಯಿಲೆ ಎಂದ ಹೈಕೋರ್ಟ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 07, 2022 | 7:32 AM

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳಿಗೆ ಲಂಚ ಪಡೆಯುವುದು ನಿಯಮವಾಗಿ ಹೋಗಿದೆ. ಇದು ಕ್ಯಾನ್ಸರ್‌ಗಿಂತ ಗಂಭೀರವಾಗಿದೆ ಎಂದು ಹೈಕೋರ್ಟ್ (High Court) ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಜಾಮೀನು ಕೋರಿ ಹಿಂದಿನ ಡಿಸಿ ಜೆ. ಮಂಜುನಾಥ್‌ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ತೀರ್ಪಿನಲ್ಲಿ ಈ ಅಂಶಗಳನ್ನು ನ್ಯಾಯಮೂರ್ತಿ ಕೆ.ನಟರಾಜನ್ ಉಲ್ಲೇಖಿಸಿದ್ದಾರೆ. ಲಂಚವಿಲ್ಲದೆ ಫೈಲ್‌ ಮುಂದೆ ಹೋಗಲ್ಲ. ಕಂದಾಯ ಇಲಾಖೆಯಲ್ಲಿ ಮೇಲಿನ ಶ್ರೇಣಿಯಿಂದ ಕೆಳ ಹಂತದವರೆಗೂ ಭ್ರಷ್ಟಾಚಾರವಿದೆ. ಸರ್ಕಾರಿ ಕಚೇರಿಗಳಲ್ಲಿನ ಅಧಿಕೃತ ಕೆಲಸಗಳಿಗೂ ಲಂಚ ನಿಯಮವಾಗಿದೆ. ಮೊದಲಿಗೆ ಅರ್ಜಿದಾರ ಮಂಜುನಾಥ್‌ ವಿರುದ್ಧ ಕ್ರಮ ಕೈಗೊಳ್ಳದೆ ಸರ್ಕಾರ ವರ್ಗಾಯಿಸಿದೆ. ಸದ್ಯ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ.

ಇದನ್ನೂ ಓದಿ:  KR Ramesh Kumar: ನಾಲಿಗೆ ಜಾರಿದ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ಧ ಸಿಟ್ಟಿಗೆದ್ದ ಹೆಚ್‌.ಡಿ. ಕುಮಾರಸ್ವಾಮಿ

ನ್ಯಾಯಮೂರ್ತಿ ಸಂದೇಶ್ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್​ ತಡೆ

ಕರ್ನಾಟಕದ ಹಿರಿಯ ಐಪಿಎಸ್​ ಅಧಿಕಾರಿ ಸೀಮಂತ್‌ ಕುಮಾರ್‌ ಸಿಂಗ್‌ (Seemanth Kumar Singh) ಮತ್ತು ಐಎಎಸ್​ ಅಧಿಕಾರಿ ಜೆ. ಮಂಜುನಾಥ್‌ (J Manjunath) ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರನ್ನು ‘ಕಳಂಕಿತ ಅಧಿಕಾರಿ’ ಮತ್ತು ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ‘ವಸೂಲಿ ಕೇಂದ್ರ’ ಎಂದು ಹೇಳಿದ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಹೆಚ್​​.ಪಿ. ಸಂದೇಶ್ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ ರಮಣ (NV Ramana) ಇತ್ತೀಚೆಗೆ ವಿಚಾರಣೆ ನಡೆಸಿದ್ದರು.

ತಮ್ಮ ವಿರುದ್ಧ ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿ ಬಳಸಿದ್ದ ಕಟುವಾದ ಅಭಿಪ್ರಾಯವನ್ನು ಪ್ರಶ್ನಿಸಿ ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ. ಮಂಜುನಾಥ್ ಪ್ರತ್ಯೇಕವಾಗಿ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: BBMP: ಚಾಮರಾಜಪೇಟೆಯ ಮೈದಾನ ವಿವಾದ ಅಂತ್ಯ, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ- ಬಿಬಿಎಂಪಿ ಆದೇಶ

ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ, ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಯ ನಡವಳಿಕೆಗೂ ವಿಚಾರಣೆಯಲ್ಲಿರುವ ಪ್ರಕರಣಕ್ಕೂ ಸಂಬಂಧವಿಲ್ಲ. ಜಾಮೀನು ಅರ್ಜಿಯನ್ನು ಪರಿಗಣಿಸುವ ಬದಲು ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿ ಸಂಬಂಧವಿಲ್ಲದ ಮತ್ತು ವ್ಯಾಪ್ತಿಯ ಹೊರಗಿನ ಇತರ ವಿಷಯಗಳ ಬಗ್ಗೆ ಗಮನಹರಿಸಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:06 am, Sun, 7 August 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ