ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳಿಗೆ ಲಂಚ ಪಡೆಯುವುದು ನಿಯಮವಾಗಿ ಹೋಗಿದೆ. ಇದು ಕ್ಯಾನ್ಸರ್‌ಗಿಂತ ಗಂಭೀರವಾಗಿದೆ ಎಂದು ಹೈಕೋರ್ಟ್ (High Court) ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಜಾಮೀನು ಕೋರಿ ಹಿಂದಿನ ಡಿಸಿ ಜೆ. ಮಂಜುನಾಥ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ತೀರ್ಪಿನಲ್ಲಿ ಈ ಅಂಶಗಳನ್ನು ನ್ಯಾಯಮೂರ್ತಿ ಕೆ.ನಟರಾಜನ್ ಉಲ್ಲೇಖಿಸಿದ್ದಾರೆ. ಲಂಚವಿಲ್ಲದೆ ಫೈಲ್ ಮುಂದೆ ಹೋಗಲ್ಲ. ಕಂದಾಯ ಇಲಾಖೆಯಲ್ಲಿ ಮೇಲಿನ ಶ್ರೇಣಿಯಿಂದ ಕೆಳ ಹಂತದವರೆಗೂ ಭ್ರಷ್ಟಾಚಾರವಿದೆ. ಸರ್ಕಾರಿ ಕಚೇರಿಗಳಲ್ಲಿನ ಅಧಿಕೃತ ಕೆಲಸಗಳಿಗೂ ಲಂಚ ನಿಯಮವಾಗಿದೆ. ಮೊದಲಿಗೆ ಅರ್ಜಿದಾರ ಮಂಜುನಾಥ್ ವಿರುದ್ಧ ಕ್ರಮ ಕೈಗೊಳ್ಳದೆ ಸರ್ಕಾರ ವರ್ಗಾಯಿಸಿದೆ. ಸದ್ಯ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ.
ಇದನ್ನೂ ಓದಿ: KR Ramesh Kumar: ನಾಲಿಗೆ ಜಾರಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಸಿಟ್ಟಿಗೆದ್ದ ಹೆಚ್.ಡಿ. ಕುಮಾರಸ್ವಾಮಿ
ನ್ಯಾಯಮೂರ್ತಿ ಸಂದೇಶ್ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್ ತಡೆ
ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ (Seemanth Kumar Singh) ಮತ್ತು ಐಎಎಸ್ ಅಧಿಕಾರಿ ಜೆ. ಮಂಜುನಾಥ್ (J Manjunath) ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರನ್ನು ‘ಕಳಂಕಿತ ಅಧಿಕಾರಿ’ ಮತ್ತು ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ‘ವಸೂಲಿ ಕೇಂದ್ರ’ ಎಂದು ಹೇಳಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ (NV Ramana) ಇತ್ತೀಚೆಗೆ ವಿಚಾರಣೆ ನಡೆಸಿದ್ದರು.
ತಮ್ಮ ವಿರುದ್ಧ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಬಳಸಿದ್ದ ಕಟುವಾದ ಅಭಿಪ್ರಾಯವನ್ನು ಪ್ರಶ್ನಿಸಿ ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ. ಮಂಜುನಾಥ್ ಪ್ರತ್ಯೇಕವಾಗಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ, ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಯ ನಡವಳಿಕೆಗೂ ವಿಚಾರಣೆಯಲ್ಲಿರುವ ಪ್ರಕರಣಕ್ಕೂ ಸಂಬಂಧವಿಲ್ಲ. ಜಾಮೀನು ಅರ್ಜಿಯನ್ನು ಪರಿಗಣಿಸುವ ಬದಲು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂಬಂಧವಿಲ್ಲದ ಮತ್ತು ವ್ಯಾಪ್ತಿಯ ಹೊರಗಿನ ಇತರ ವಿಷಯಗಳ ಬಗ್ಗೆ ಗಮನಹರಿಸಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:06 am, Sun, 7 August 22