ಕೆಂಗೇರಿ ಕೆರೆಗೆ ಬಿದ್ದಿದ್ದ ಅಣ್ಣ ತಂಗಿಯ ಮೃತ ದೇಹಗಳು ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಬೆಂಗಳೂರಿನ ಕೆಂಗೇರಿ (Kengeri) ಕೆರೆಯಲ್ಲಿ ಬಿದ್ದು ನಾಪತ್ತೆಯಾಗಿದ್ದ ಅಣ್ಣ ತಂಗಿಯ ಮೃತದೇಹಗಳು ಪತ್ತೆಯಾಗಿವೆ. ರಬ್ಬರ್ ಬೋಟ್ ಮೂಲಕ ಅಗ್ನಿಶಾಮಕ ದಳ, ಸಿವಿಲ್ ಡಿಫೆನ್ಸ್ ನಡೆಸಿದ ನಿರಂತರ ಶೋಧದ ಬಳಿಕ ಮೊದಲಿಗೆ ಅಣ್ಣನ ಮೃತದೇಹ ಪತ್ತೆಯಾಗಿದೆ. ಬಳಿಕ ಇದೀಗ ತಂಗಿಯ ಮೃತದೇಹ ಸಿಕ್ಕಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕೆಂಗೇರಿ ಕೆರೆಗೆ ಬಿದ್ದಿದ್ದ ಅಣ್ಣ ತಂಗಿಯ ಮೃತ ದೇಹಗಳು ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11)
Follow us
Kiran Surya
| Updated By: ರಮೇಶ್ ಬಿ. ಜವಳಗೇರಾ

Updated on: Oct 22, 2024 | 4:56 PM

ಬೆಂಗಳೂರು, (ಅಕ್ಟೋಬರ್ 22): ಕೆಂಗೇರಿ ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಅಣ್ಣ-ತಂಗಿಯ ಮೃತದೇಹಗಳು ಪತ್ತೆಯಾಗಿವೆ. ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳು ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆ ನೀರು ತರಲು ಹೋಗಿದ್ದರು. ಆ ವೇಳೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ಬಿದ್ದಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಇಂದು(ಅಕ್ಟೋಬರ್ 22) ಬೆಳಗ್ಗೆಯಿಂದಲೇ ರಬ್ಬರ್ ಬೋಟ್​ ಮೂಲಕ ಶೋಧ ಕಾರ್ಯ ನಡೆಸಿದ್ದು, ಮೊದಲಿಗೆ ಅಣ್ಣ ಶ್ರೀನಿವಾಸ್ ಮೃತದೇಹ ಸಿಕ್ಕಿದೆ. ಇದೀಗ ಮಹಾಲಕ್ಷ್ಮೀ ಮೃತದೇಹ ಪತ್ತೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳಾದ ಶ್ರೀನಿವಾಸ್ ಮತ್ತು ಲಕ್ಷ್ಮೀ ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆಗೆ (Lake) ನೀರು ತರಲು ಹೋಗಿದ್ದರು. ನೀರು ತರಲು ಹೋದವರು ಕೆರೆ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಾ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿತ್ತು. ಕೆರೆಯ ದಂಡೆ ಮೇಲೆ ಮಕ್ಕಳ ಬಟ್ಟೆ ಮತ್ತು ಬಿಂದಿಗೆ ಪತ್ತೆಯಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೋಲಿಸರು ದೌಡಾಯಿಸಿದ್ದು, ಶೋಧಕಾರ್ಯ ನಡೆಸಿದ್ದರು.

ಇದನ್ನೂ ಓದಿ: ಬೆಂಗಳೂರು: ಆಟವಾಡುತ್ತ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದ ಅಣ್ಣ-ತಂಗಿ?

ನಾಗಮ್ಮ ಬಿಬಿಎಂಪಿಯಲ್ಲಿ ಕಸ ವಿಂಗಡಣೆ ಕೆಲಸ ಮಾಡುತ್ತಿದ್ದಾರೆ. ನಾಗಮ್ಮ ತನ್ನ ಇಬ್ಬರು ಮಕ್ಕಳು ಮತ್ತು ಸಹೋದರಿ ಧನಲಕ್ಷ್ಮೀ ಜೊತೆಗೆ ವಾಸವಾಗಿದ್ದಾರೆ. ಇದೀಗ ತನ್ನಿಬ್ಬರು ಮಕ್ಕಳನ್ನು ಕಳೆದುಕೊಂಡಿರುವ ನಾಗಮ್ಮನ ರೋಧನೆ ಮುಗಿಲು ಮುಟ್ಟಿದ್ದು, , ನೆರೆದಿದ್ದ ಜನರ ಕಣ್ಣಾಲಿಗಳಲ್ಲಿ ನೀರು ತರಿಸಿತು.

ಜ್ಞಾನಭಾರತಿ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಕೆಂಗೇರಿ ಪೊಲೀಸ್ ಸಿಬ್ಬಂದಿ, ಸಿವಿಲ್ ಡಿಫೆನ್ಸ್​ ಸೇರಿದಂತೆ ಸುಮಾರು 15 ಜನರ ತಂಡ ಶೋಧ ಕಾರ್ಯ ನಡೆಸಿ ಎರಡು ಮೃತದೇಹಗಳನ್ನು ಪತ್ತೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ