AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಯುವತಿಗೆ ಮೆಸೇಜ್ ಮಾಡಿದಕ್ಕೆ ಸಹೋದರನಿಂದ ಯುವಕನ ಮೇಲೆ ಚಾಕು ಹಲ್ಲೆ

ನಡು ರಸ್ತೆಯಲ್ಲಿ ಸಿದ್ಧಾರ್ಥ್​​ನನ್ನು ನೆಲಕ್ಕೆ ಬೀಳಿಸಿ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Bengaluru News: ಯುವತಿಗೆ ಮೆಸೇಜ್ ಮಾಡಿದಕ್ಕೆ ಸಹೋದರನಿಂದ ಯುವಕನ ಮೇಲೆ ಚಾಕು ಹಲ್ಲೆ
ಯುವತಿ ಸಹೋದರನಿಂದ ಯುವಕನ ಮೇಲೆ ಹಲ್ಲೆ
TV9 Web
| Edited By: |

Updated on: Feb 08, 2023 | 8:18 AM

Share

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕನೊಬ್ಬ ಯುವತಿಗೆ ಮೆಸೇಜ್ ಮಾಡಿದ ಎಂಬ ಕಾರಣಕ್ಕೆ ಯುವತಿಯ ಮಾವ ಯುವಕನ್ನು ಅಪಹರಿಸಿ ಕೊಲೆ ಮಾಡಿದ್ದಾನೆ ಎನ್ನಲಾದ ಸುದ್ದಿ ಹರಿದಾಡುತ್ತಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ನಗರದಲ್ಲಿ ನಡೆದಿದೆ. ಯುವತಿಗೆ ಮೆಸೇಜ್ ಮಾಡಿದ ಎಂದು ಯುವತಿಯ ಸಹೋದರ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಗೋವಿಂದರಾಜನಗರದಲ್ಲಿ ಸಿದ್ಧಾರ್ಥ್ ಎಂಬ ಯುವಕನ ಮೇಲೆ ಚೇತನ್ ಮತ್ತು ಆತನ ಗೆಳೆಯರು ಹಲ್ಲೆ ನಡೆಸಿ ಕೃತ್ಯ ಎಸಗಿದ್ದಾರೆ. ನಡು ರಸ್ತೆಯಲ್ಲಿ ಸಿದ್ಧಾರ್ಥ್​​ನನ್ನು ನೆಲಕ್ಕೆ ಬೀಳಿಸಿ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿದ್ಧಾರ್ಥ್, ಕೀರ್ತಿ ಎಂಬ ಯುವತಿಯ ಜೊತೆ ಕಳೆದ ಒಂದು ವರ್ಷದಿಂದ ಇನ್ಸ್ಟಾಗ್ರಾಮ್​ನಲ್ಲಿ ಚಾಟ್ ಮಾಡ್ತಿದ್ದ. ಈ ವಿಚಾರ ತಿಳಿದ ಯುವತಿ ಅಣ್ಣ ಚೇತನ್, ಸಿದ್ಧಾರ್ಥ್​ಗೆ ಕರೆ ಮಾಡಿ ನಿಂದಿಸಿ ಮಾತನಾಡಬೇಕು ಸಿಗು ಎಂದಿದ್ದಾನೆ. ಅದರಂತೆ ಸಿದ್ಧಾರ್ಥ್ ಪಿಜಿ ಬಳಿ ಚೇತನ್ ಮತ್ತು ಆತನ ಗೆಳೆಯರು ಬಂದಿದ್ದಾರೆ. ಬಳಿಕ ಮಾತುಕತೆ ನಡೆದಿದ್ದು ಚೇತನ್ ಮತ್ತು ಆತನ ಸ್ನೇಹಿತರು ಹಲ್ಲೆ ಮಾಡಿ ಎಸ್ಕೆಪ್ ಆಗಿದ್ದಾರೆ. ಹಲ್ಲೆಗೊಳಗಾದ ಸಿದ್ಧಾರ್ಥ್​ ಗೋವಿಂದರಾಜ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಯುವತಿಗೆ ಮೆಸೇಜ್ ಮಾಡಿದ್ದೇ ಯುವಕನಿಗೆ ಕಂಟಕವಾಯ್ತಾ? ಯುವತಿಯ ಸೋದರ ಮಾವನಿಂದ ಕೊಲೆ ಆರೋಪ, ಯುವಕ ನಾಪತ್ತೆ

ಅಪಘಾತವಾಗಿ 11ದಿನದ ಬಳಿಕ ಕಾರು ಪತ್ತೆ, ಆರೋಪಿ ಅರೆಸ್ಟ್

ಕಳೆದ ತಿಂಗಳ 26ರಂದು ದೇವನಹಳ್ಳಿಯಿಂದ ಕೋರಮಂಗಲಕ್ಕೆ ತೆರಳುತಿದ್ದ ಫಾರ್ಚ್ಯನರ್ ಕಾರ್ ನಲ್ಲಿ ಬಂದ ಆರೋಪಿ ಅಪಘಾತ ಮಾಡಿ ಎಸ್ಕೇಪ್ ಆಗಿದ್ದ. ಈ ಅಪಘಾತದಲ್ಲಿ ವೆಂಕಟೇಶ್ ಎಂಬುವವರು ಮೃತಪಟ್ಟಿದ್ದರು. ಘಟನೆ ಸಂಬಂಧ ಸದಾಶಿವನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಸದ್ಯ ಈಗ ಆರೋಪಿಯನ್ನು ಬಂಧಿಸಿದ್ದಾರೆ.  ಅಪಘಾತವಾದ 11 ದಿನಗಳ ಬಳಿಕ ಕಾರು ಪತ್ತೆಯಾಗಿದೆ. ರವಿ ಬಂಧಿತ ಆರೋಪಿ. ಈತ ಉದ್ಯಮಿ ನಾಗಾರ್ಜುನ ಎಂಬುವವರಿಗೆ ಸೇರಿದ ಕಾರಿನ ಚಾಲಕ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್