AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಿಟ್ಟಿನ ಕೈಗೆ ಬುದ್ಧಿಕೊಟ್ಟ ಅಣ್ಣ, ಹೆಣವಾದ ತಮ್ಮ

ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ಭಯಾನಕ ಘಟನೆ ನಡೆದಿದೆ. ಅಣ್ಣನಿಂದಲೇ ತಮ್ಮನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪ್ರತಿದಿನ ಕುಡಿದು ಬಂದು ತಾಯಿಗೆ ಕಿರುಕುಳ ನೀಡುತ್ತಿದ್ದ ತಮ್ಮನೊಂದಿಗೆ ಜಗಳವಾಡಿದಾಗ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ತಮ್ಮ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಪೊಲೀಸರು ಆರೋಪಿ ಅಣ್ಣನನ್ನು ಬಂಧಿಸಿದ್ದಾರೆ.

ಬೆಂಗಳೂರು: ಸಿಟ್ಟಿನ ಕೈಗೆ ಬುದ್ಧಿಕೊಟ್ಟ ಅಣ್ಣ, ಹೆಣವಾದ ತಮ್ಮ
ಬೆಂಗಳೂರು: ಸಿಟ್ಟಿನ ಕೈಗೆ ಬುದ್ಧಿಕೊಟ್ಟ ಅಣ್ಣ, ಹೆಣವಾದ ತಮ್ಮ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 10, 2025 | 5:56 PM

Share

ಬೆಂಗಳೂರು, ಜನವರಿ 10: ಅಣ್ಣನಿಂದಲೇ ತಮ್ಮನ ಬರ್ಬರ ಕೊಲೆ (kill) ಮಾಡಿರುವಂತಹ ಘಟನೆ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಅನ್ವರ್​ ಲೇಔಟ್​ನಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.  ಅಕ್ರಂ ಬೇಗ್(28) ಹತ್ಯೆಗೈದ ಸೋದರ ಅಕ್ಬರ್ ಬೇಗ್. ಘಟನೆ ಕುರಿತು ಅಕ್ರಂ ಬೇಗ್ ತಾಯಿ ನೀಡಿದ್ದ ದೂರು ಸಂಬಂಧ ಆರೋಪಿ ಅಕ್ಬರ್ ಬೇಗ್​ನನ್ನು ಕೆಜಿ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ತಾಯಿ ಅಮ್ರಿಜ್ ಬೇಗ್​​ಗೆ ಮೂವರು‌ ಮಕ್ಕಳು. ಹಿರಿಯ ಪುತ್ರ ಅಕ್ಬರ್ ಮತ್ತು ಮಗಳು ಬೇರೆ ಕಡೆ ವಾಸವಿದ್ದರು. ತಾಯಿಯ ಜೊತೆ ಕಿರಿಯ ಪುತ್ರ ಅಕ್ರಂ ಬೇಗ್ ಒಬ್ಬನೇ ವಾಸವಿದ್ದ. ಅಕ್ರಂ ಪ್ರತಿದಿನ ಕುಡಿದು ಬಂದು ತಾಯಿಗೆ ಹಿಂಸೆ ನೀಡುತ್ತಿದ್ದ. ಮೊನ್ನೆ ರಾತ್ರಿಯೂ ಕುಡಿದು ಬಂದು ತಾಯಿ ಜತೆ ಜಗಳ ಮಾಡಿದ್ದಾನೆ.

ಇದನ್ನೂ ಓದಿ: ಹುಬ್ಬಳ್ಳಿ: 2 ಎಕರೆ ಆಸ್ತಿಗಾಗಿ ತಂದೆ, ಮಲತಾಯಿ ಕೊಚ್ಚಿ ಕೊಲೆಗೈದ ಪುತ್ರ

ಇದೇ ವೇಳೆ ಹಿರಿಯ ಪುತ್ರ ಅಕ್ಬರ್ ಮನೆಗೆ ಬಂದಿದ್ದ. ಸಹೋದರನ ಜಗಳದಿಂದ‌ ಬೇಸತ್ತು ಅಡುಗೆ ಮನೆಯಲ್ಲಿದ್ದ ಚಾಕು ತಂದು ಅಕ್ರಂ ಮೇಲೆ ಹಲ್ಲೆ ಮಾಡಿದ್ದಾರೆ. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಅಕ್ರಂ ಮೃತಪಟ್ಟಿದ್ದಾರೆ.

ಕಾಡಾನೆ ದಾಳಿಗೆ ವೃದ್ಧೆ ಬಲಿ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ ಸಮೀಪದ ರಾಜ್ಯದ ಗಡಿ ಕೆಲಮಂಗಲಂ ಬಳಿ ಕಾಡಾನೆ ದಾಳಿಗೆ ವೃದ್ಧೆ ಬಲಿಯಾಗಿರುವಂತಹ ಘಟನೆ ನಡೆದಿದೆ. ನಾಗಮ್ಮ(60) ಮೃತ ವೃದ್ಧೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.  ಈ ವೇಳೆ ಅರಣ್ಯ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಮೃತ ನಾಗಮ್ಮ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಟ್ರ್ಯಾಕ್ಟರ್​ ಡಿಕ್ಕಿ: ಬೈಕ್​ನಲ್ಲಿದ್ದ ಮಹಿಳೆ ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬೈಕ್​ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ದೇವಗೊಂಡನಹಳ್ಳಿ ಗ್ರಾಮದ ಸಾವಿತ್ರಮ್ಮ (55) ಮೃತ ದುರ್ದೈವಿ.

ಇದನ್ನೂ ಓದಿ: ಸಾಲ ಮರುಪಾವತಿಸದ ಹಿನ್ನಲೆ ಹಲ್ಲೆ ಆರೋಪ: ಮಾಜಿ ಶಾಸಕ ಚರಂತಿಮಠ ಸೇರಿ ನಾಲ್ವರ ವಿರುದ್ಧ ದೂರು

ಸಾವಿತ್ರಮ್ಮ ಪುತ್ರ ರಾಕೇಶ್​ಗೆ ಗಂಭೀರ ಗಾಯಗಳಾಗಿವೆ. ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ತಾಯಿ ಮಗ ಬೈಕ್​​ನಲ್ಲಿ ಹೋಗುತ್ತಿದ್ದಾಗ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್​ ಬಳಿ ಅವಘಡ ಸಂಭವಿಸಿದೆ. ರಾಕೇಶ್ ಎಂಬಿಬಿಎಸ್​​ ಮುಗಿಸಿ ಬೆಂಗಳೂರಲ್ಲಿ ಎಂ.ಡಿ ಮಾಡುತ್ತಿದ್ದಾರೆ.

ಮಹಿಳೆ ಕೊಲೆ: ಚೀಲದಲ್ಲಿ ಶವ ತುಂಬಿ ದುಷ್ಕರ್ಮಿಗಳು ಪರಾರಿ

ಕೋಲಾರ ತಾಲೂಕಿನ ಕೋರಗೊಂಡನಹಳ್ಳಿ ಬಳಿ ಮಹಿಳೆ ಕೊಲೆಗೈದು ಶವ ಚೀಲದಲ್ಲಿ ತುಂಬಿ ದುಷ್ಕರ್ಮಿಗಳು ಪರಾರಿ ಆಗಿರುವಂತಹ ಘಟನೆ ನಡೆದಿದೆ. ಅಪರಿಚಿತ ಮಹಿಳೆ ಮುಖದ ಭಾಗವನ್ನು ಬೀದಿನಾಯಿಗಳು ಕಚ್ಚಿ ತಿಂದಿವೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ