ಬೆಂಗಳೂರು, ಜನವರಿ 10: ಅಣ್ಣನಿಂದಲೇ ತಮ್ಮನ ಬರ್ಬರ ಕೊಲೆ (kill) ಮಾಡಿರುವಂತಹ ಘಟನೆ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಅನ್ವರ್ ಲೇಔಟ್ನಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಕ್ರಂ ಬೇಗ್(28) ಹತ್ಯೆಗೈದ ಸೋದರ ಅಕ್ಬರ್ ಬೇಗ್. ಘಟನೆ ಕುರಿತು ಅಕ್ರಂ ಬೇಗ್ ತಾಯಿ ನೀಡಿದ್ದ ದೂರು ಸಂಬಂಧ ಆರೋಪಿ ಅಕ್ಬರ್ ಬೇಗ್ನನ್ನು ಕೆಜಿ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ತಾಯಿ ಅಮ್ರಿಜ್ ಬೇಗ್ಗೆ ಮೂವರು ಮಕ್ಕಳು. ಹಿರಿಯ ಪುತ್ರ ಅಕ್ಬರ್ ಮತ್ತು ಮಗಳು ಬೇರೆ ಕಡೆ ವಾಸವಿದ್ದರು. ತಾಯಿಯ ಜೊತೆ ಕಿರಿಯ ಪುತ್ರ ಅಕ್ರಂ ಬೇಗ್ ಒಬ್ಬನೇ ವಾಸವಿದ್ದ. ಅಕ್ರಂ ಪ್ರತಿದಿನ ಕುಡಿದು ಬಂದು ತಾಯಿಗೆ ಹಿಂಸೆ ನೀಡುತ್ತಿದ್ದ. ಮೊನ್ನೆ ರಾತ್ರಿಯೂ ಕುಡಿದು ಬಂದು ತಾಯಿ ಜತೆ ಜಗಳ ಮಾಡಿದ್ದಾನೆ.
ಇದನ್ನೂ ಓದಿ: ಹುಬ್ಬಳ್ಳಿ: 2 ಎಕರೆ ಆಸ್ತಿಗಾಗಿ ತಂದೆ, ಮಲತಾಯಿ ಕೊಚ್ಚಿ ಕೊಲೆಗೈದ ಪುತ್ರ
ಇದೇ ವೇಳೆ ಹಿರಿಯ ಪುತ್ರ ಅಕ್ಬರ್ ಮನೆಗೆ ಬಂದಿದ್ದ. ಸಹೋದರನ ಜಗಳದಿಂದ ಬೇಸತ್ತು ಅಡುಗೆ ಮನೆಯಲ್ಲಿದ್ದ ಚಾಕು ತಂದು ಅಕ್ರಂ ಮೇಲೆ ಹಲ್ಲೆ ಮಾಡಿದ್ದಾರೆ. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಅಕ್ರಂ ಮೃತಪಟ್ಟಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಸಮೀಪದ ರಾಜ್ಯದ ಗಡಿ ಕೆಲಮಂಗಲಂ ಬಳಿ ಕಾಡಾನೆ ದಾಳಿಗೆ ವೃದ್ಧೆ ಬಲಿಯಾಗಿರುವಂತಹ ಘಟನೆ ನಡೆದಿದೆ. ನಾಗಮ್ಮ(60) ಮೃತ ವೃದ್ಧೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಅರಣ್ಯ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಮೃತ ನಾಗಮ್ಮ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ದೇವಗೊಂಡನಹಳ್ಳಿ ಗ್ರಾಮದ ಸಾವಿತ್ರಮ್ಮ (55) ಮೃತ ದುರ್ದೈವಿ.
ಇದನ್ನೂ ಓದಿ: ಸಾಲ ಮರುಪಾವತಿಸದ ಹಿನ್ನಲೆ ಹಲ್ಲೆ ಆರೋಪ: ಮಾಜಿ ಶಾಸಕ ಚರಂತಿಮಠ ಸೇರಿ ನಾಲ್ವರ ವಿರುದ್ಧ ದೂರು
ಸಾವಿತ್ರಮ್ಮ ಪುತ್ರ ರಾಕೇಶ್ಗೆ ಗಂಭೀರ ಗಾಯಗಳಾಗಿವೆ. ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ತಾಯಿ ಮಗ ಬೈಕ್ನಲ್ಲಿ ಹೋಗುತ್ತಿದ್ದಾಗ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಅವಘಡ ಸಂಭವಿಸಿದೆ. ರಾಕೇಶ್ ಎಂಬಿಬಿಎಸ್ ಮುಗಿಸಿ ಬೆಂಗಳೂರಲ್ಲಿ ಎಂ.ಡಿ ಮಾಡುತ್ತಿದ್ದಾರೆ.
ಕೋಲಾರ ತಾಲೂಕಿನ ಕೋರಗೊಂಡನಹಳ್ಳಿ ಬಳಿ ಮಹಿಳೆ ಕೊಲೆಗೈದು ಶವ ಚೀಲದಲ್ಲಿ ತುಂಬಿ ದುಷ್ಕರ್ಮಿಗಳು ಪರಾರಿ ಆಗಿರುವಂತಹ ಘಟನೆ ನಡೆದಿದೆ. ಅಪರಿಚಿತ ಮಹಿಳೆ ಮುಖದ ಭಾಗವನ್ನು ಬೀದಿನಾಯಿಗಳು ಕಚ್ಚಿ ತಿಂದಿವೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.