ಜೈಲಿನೊಳಗೂ ಗೂಂಡಾಗಿರಿ: ಖೈದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲೂ ಗೂಂಡಾಗಿರಿ ಶುರುವಾಗಿದೆ. ಖೈದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಭೀಕರವಾಗಿ ಹಲ್ಲೆಗೊಳಗಾದ ಖೈದಿ ಪರಪ್ಪನ ಅಗ್ರಹಾರದ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭರತ್ ಮತ್ತು ಅವನ ಗ್ಯಾಂಗ್ ಹಲ್ಲೆ ಮಾಡಿದೆ. 8 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು, ಆಗಸ್ಟ್ 24: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ (Bengaluru Central Jail) ಭರತ್ ಮತ್ತು ಈತನ ಗ್ಯಾಂಗ್ ಖೈದಿ ಅನಿಲ್ ಕುಮಾರ್ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದೆ. ಆಗಸ್ಟ್ 2ರ ಮಧ್ಯಾಹ್ನ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖೈದಿ ಅನಿಲ್ ಕುಮಾರ್ ಪ್ರಕರಣವೊಂದರ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಕೊಠಡಿಗೆ ತೆರಳುತ್ತಿದ್ದರು. ಈ ವೇಳೆ ಭರತ್ ಮತ್ತು ಈತನ ಗ್ಯಾಂಗ್ ಕ್ವಾರಂಟೈನ್ ಜೈಲಿನ ಬ್ಯಾರಕ್-2ರ ಹಿಂಭಾಗದ ಕೊಠಡಿ 6ರಲ್ಲಿ ನಮ್ಮನ್ನು ನೋಡಿ ಉಗಿತಿಯಾ ಅಂತ ಮಾರಕ ಆಯುಧದಿಂದ ಅನಿಲ್ ಕುಮಾರ್ ಮೇಲೆ ಹಲ್ಲೆ ಮಾಡಿದೆ.
ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಖೈದಿ ಅನಿಲ್ ಕುಮಾರ್ ಅವರನ್ನು ಪರಪ್ಪನ ಅಗ್ರಹಾರ ಜೈಲು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಭರತ್ ಮತ್ತು ಗ್ಯಾಂಗ್ ಸೇರಿದಂತೆ 8 ಮಂದಿ ವಿರುದ್ಧ ಬಿಎನ್ಎಸ್ ಸೆಕ್ಷನ್ 118(1), 3(5)ಅಡಿಯಲ್ಲಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖೈದಿ ಅನೀಲ್ ಕುಮಾರ್ ಕೊಲೆ ಪ್ರಕರಣದಲ್ಲಿ 2023ರಲ್ಲಿ ಜೈಲು ಸೇರಿದ್ದಾನೆ. ಭರತ್ ಮತ್ತು ಈತನ ಗ್ಯಾಂಗ್ 2025ರಲ್ಲಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:05 pm, Sun, 24 August 25



