AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚಾಕು ಇರಿದು ಪತಿಯಿಂದಲೇ ಪತ್ನಿಯ ಬರ್ಬರ ಕೊಲೆ

ಪ್ರತ್ಯೇಕವಾಗಿ ವಾಸವಿದ್ದ ಪತ್ನಿ ಕೌಸರ್ ಮುಬೀನ್ ಹಾಗೂ ಪತಿ, ಇಂದು (ಫೆ.13) ಕೌಸರ್‌ ಮನೆ ಬಾಗಿಲು ಬಳಿ ಬಂದು ಪತಿ ಜಗಳವಾಡಿದ್ದಾನೆ. ಈ ವೇಳೆ ಹೆಂಡತಿ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಿ ಪತಿ ಪರಾರಿಯಾಗಿದ್ದಾನೆ.

ಬೆಂಗಳೂರಿನಲ್ಲಿ ಚಾಕು ಇರಿದು ಪತಿಯಿಂದಲೇ ಪತ್ನಿಯ ಬರ್ಬರ ಕೊಲೆ
ಪತಿಯಿಂದಲೇ ಪತ್ನಿಯ ಬರ್ಬರ ಕೊಲೆ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 13, 2023 | 6:42 PM

ಬೆಂಗಳೂರು: ಪತಿಯೇ ಪತ್ನಿಯನ್ನ ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ನಂಜಪ್ಪ ಸರ್ಕಲ್ ಬಳಿಯ ಮನೆಯೊಂದರಲ್ಲಿ ನಡೆದಿದೆ. 34 ವರ್ಷದ ಕೌಸರ್ ಮುಬೀನ್ ಕೊಲೆಯಾಗಿರುವ ಮಹಿಳೆ. ಪ್ರತ್ಯೇಕವಾಗಿ ವಾಸವಿದ್ದ ಪತ್ನಿ ಕೌಸರ್ ಮುಬೀನ್ ಹಾಗೂ ಪತಿ, ಇಂದು(ಫೆ.13) ಕೌಸರ್‌ ಮನೆ ಬಾಗಿಲು ಬಳಿ ಬಂದು ಪತಿ ಜಗಳವಾಡಿದ್ದಾನೆ. ಈ ವೇಳೆ ಮನೆ ಬಾಗಿಲಲ್ಲೇ ಹೆಂಡತಿ ಕುತ್ತಿಗೆಗೆ ಚಾಕು ಇರಿದು ಪತಿ ಪರಾರಿಯಾಗಿದ್ದಾನೆ. ಪತ್ನಿ ಕೌಸರ್ ಮುಬೀನ್ ಮನೆ ಹೊಸ್ತಿಲಲ್ಲೇ ಒದ್ದಾಡಿ ಪ್ರಾಣಬಿಟ್ಟಿದ್ದಾರೆ. ಇನ್ನು ಇವರ ಜಗಳಕಂಡು ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನದಳ, FSL ತಂಡ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕೆಎಸ್​​ಆರ್​ಟಿಸಿ ಬಸ್​ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ, ಕಾರಿನಲ್ಲಿದ್ದ ಬಾಲಕ ಸ್ಥಳದಲ್ಲೇ ಸಾವು

ದಕ್ಷಿಣ ಕನ್ನಡ: ಕಾರು ಮತ್ತು ಕೆ.ಎಸ್.​​ಆರ್.​ಟಿ.ಸಿ ಬಸ್ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ 14 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಬ್ರಾಂತಿಕಟ್ಟೆ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯ ಧರ್ಮಸ್ಥಳ ನಡುವೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್, ಮರ್ಧಾಳ ಗ್ರಾಮದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು, ಮತ್ತೊಂದು ಕಾರು ಓವರ್​​ಟೇಕ್ ಮಾಡುವ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಕಾರಿನಲ್ಲಿದ್ದ ಇನ್ನುಳಿದ ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಣಿ ಅಪಘಾತದಲ್ಲಿ ಕಾರು ಚಾಲಕನ ದುರ್ಮರಣ

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೈಕೇರಿ ಗ್ರಾಮದ ಬಳಿ ಲಾರಿ, 2 ಕಾರು, ಕ್ಯಾಂಟರ್‌ ನಡುವೆ ಭೀಕರ ಸರಣಿ ಅಪಘಾತವಾಗಿದೆ. ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಚಾಲಕ ಬಿಟ್ಟಂಗಾಲ ನಿವಾಸಿ ಸದನ್ ಚಂಗಪ್ಪ(49) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದ ಉಳಿದ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಈ ಕುರಿತು ಗೋಣಿಕೊಪ್ಪಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Mon, 13 February 23

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ