ಸರಳವಾಗಿ ಹುಟ್ಟುಹಬ್ಬ ಆಚರಣೆ; ಹಾರ, ತುರಾಯಿ, ಉಡುಗೊರೆ ತರಬೇಡಿ: ಬಿಎಸ್ ಯಡಿಯೂರಪ್ಪ ಮನವಿ
ಫೆಬ್ರವರಿ 27 ರಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ, ಈ ಬಾರಿ ಕೊರೊನಾ ಹಿನ್ನೆಲೆ ವಿಶೇಷ ರೀತಿಯಲ್ಲಿ ಬರ್ತ್‌ಡೇ ಆಚರಿಸಿಕೊಳ್ತಿಲ್ಲ ಎಂದು ಟ್ವೀಟ್ ಮೂಲಕ ಜನರಿಗೆ ತಿಳಿಸಿದ್ದಾರೆ.
ಬೆಂಗಳೂರು: ನನ್ನ ಹುಟ್ಟಿದ ದಿನವನ್ನು ನಾಳೆ (ಫೆಬ್ರವರಿ 27) ವಿಶೇಷ ರೀತಿಯಲ್ಲಿ ಆಚರಿಸಿಕೊಳ್ತಿಲ್ಲ. ಯಾರೂ ಹಾರ, ತುರಾಯಿ, ಉಡುಗೊರೆ ಇತ್ಯಾದಿ ತರಬೇಡಿ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. ಫೆಬ್ರವರಿ 27 ರಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ, ಈ ಬಾರಿ ಕೊರೊನಾ ಹಿನ್ನೆಲೆ ವಿಶೇಷ ರೀತಿಯಲ್ಲಿ ಬರ್ತ್‌ಡೇ ಆಚರಿಸಿಕೊಳ್ತಿಲ್ಲ ಎಂದು ಟ್ವೀಟ್ ಮೂಲಕ ಜನರಿಗೆ ತಿಳಿಸಿದ್ದಾರೆ. ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.
ನೀವು ಇರುವ ಕಡೆಯೇ ಹುಟ್ಟುಹಬ್ಬದ ಶುಭಾಶಯ ಕೋರಿ. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಆಶೀರ್ವಾದಗಳೇ ನನಗೆ ಶ್ರೀರಕ್ಷೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ನಾಳೆ ಮಾಜಿ ಸಿಎಂ ಯಡಿಯೂರಪ್ಪ ಹುಟ್ಟು ಹಬ್ಬ ಹಿನ್ನೆಲೆ, ಸಿದ್ದಗಂಗಾ ಶ್ರೀ ಉಪಸ್ಥಿತಿಯಲ್ಲಿ ರೈತರಿಗೆ ಉಚಿತ ಟ್ರ್ಯಾಕ್ಟರ್ ವಿತರಣೆ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಅಭಿಮಾನಿಗಳ ಬಳಗದಿಂದ ಉಚಿತ ಟ್ರ್ಯಾಕ್ಟರ್ ವಿತರಣೆ ಕಾರ್ಯ ನಡೆಯಲಿದೆ.
ಆತ್ಮೀಯರೇ, ಹಿತೈಷಿಗಳೇ, ಕೊರೋನಾ ಸಂಕಷ್ಟಗಳ ಹಿನ್ನಲೆಯಲ್ಲಿ, ನಾಳೆ ನನ್ನ ಹುಟ್ಟಿದ ದಿನವನ್ನು ಯಾವುದೇ ವಿಶೇಷ ರೀತಿಯಲ್ಲಿ ನಾನು ಆಚರಿಸಿಕೊಳ್ಳುತ್ತಿಲ್ಲ. ಆದ್ದರಿಂದ ಯಾರೂ ಕೂಡ ಹಾರ, ತುರಾಯಿ, ಉಡುಗೊರೆ ಇತ್ಯಾದಿ ತರಬೇಡಿ ಎಂದು ಕೋರುತ್ತೇನೆ. ನೀವು ಇದ್ದಲ್ಲಿಂದಲೇ ಹಾರೈಸಿ. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಆಶೀರ್ವಾದಗಳೇ ನನಗೆ ಶ್ರೀರಕ್ಷೆ.
— B.S. Yediyurappa (@BSYBJP) February 26, 2022
ಇದನ್ನೂ ಓದಿ: ಸಿನಿಮಾದಲ್ಲಿ ನಟಿಸಿದ ಬಿಎಸ್ ಯಡಿಯೂರಪ್ಪ; ಮಾಜಿ ಮುಖ್ಯಮಂತ್ರಿ ಒಪ್ಪಿಕೊಂಡ ಆ ಕಥೆ ಯಾವುದು?
ಇದನ್ನೂ ಓದಿ: ಈಶ್ವರಪ್ಪ ಹೇಳಿಕೆ ಸೃಷ್ಟಿಸಿರುವ ವಿವಾದದ ಬಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಲಿಲ್ಲ
Published On - 6:33 pm, Sat, 26 February 22