ಬಿಎಸ್​ ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆ ಪ್ರಕರಣ: ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವೇಲ್​ನಿಂದ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ನೇಣಿಗೆ ಬಳಸಿದ್ದ ವೇಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಟಿವಿ9ಗೆ ಪೊಲೀಸ್​ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಬಿಎಸ್​ ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆ ಪ್ರಕರಣ: ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸೌಂದರ್ಯ ಸೀಮಂತ ಕಾರ್ಯದಲ್ಲಿ ಸಿಎಂ ಯಡಿಯೂರಪ್ಪ ಭಾಗಿಯಾಗಿದ್ದರು
Edited By:

Updated on: Jan 28, 2022 | 4:17 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೊಮ್ಮಗಳು ಡಾ. ಸೌಂದರ್ಯ ನೇಣಿಗೆ ಶರಣಾದ ಪ್ರಕರಣ ಶುಕ್ರವಾರ (ಜನವರಿ 28) ನಡೆದಿದ್ದು, ಮೃತ ಸೌಂದರ್ಯ ಅಂತ್ಯಸಂಸ್ಕಾರಕ್ಕೆ ಪುರೋಹಿತರು ಆಗಮಿಸಿದ್ದಾರೆ. ಸೌಂದರ್ಯ ಪತಿ ನೀರಜ್​ ಮನೆಗೆ ಪುರೋಹಿತರು ಆಗಮಿಸಿದ್ದಾರೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಕ್ರಿಯಾ ಸಮಾಧಿ ನಡೆಸಲಾಗುತ್ತದೆ ಎಂದು ತಿಳಿಸಲಾಗಿದ್ದು ಅಂತಿಮ ವಿಧಿವಿಧಾನಕ್ಕೆ ಶಿವಗಂಗೆಯ ಹೊನ್ನಗವಿ ಮಠದ ರುದ್ರಮುನಿ ಸ್ವಾಮೀಜಿ ಸಮ್ಮುಖದಲ್ಲಿ ಸಿದ್ಧತೆ ನಡೆಸಲಾಗಿದೆ.

ಅಬ್ಬಿಗೆರೆಯ ಫಾರಂಹೌಸ್​ನಲ್ಲಿ ಸೌಂದರ್ಯ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಲಾಗಿದೆ. ಡಾ. ನೀರಜ್​ ನಿವಾಸದ ಬಳಿ ಪುರೋಹಿತ ಚೇತನ್​ ಆಗಮಿಸಿದ್ದಾರೆ. ಅಷ್ಟೇ ಅಲ್ಲದೆ, ಸ್ಥಳಕ್ಕೆ ಬಿ‌.ವೈ ಬಿಜಯೇಂದ್ರ ಸೇರಿದಂತೆ ಬಿಎಸ್‌ವೈ ಕುಟುಂಬಸ್ಥರ ಆಗಮಿಸಿದ್ದಾರೆ. ಸೌಂದರ್ಯ ಅಂತಿಮ ಸಂಸ್ಕಾರ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ ಎಂದು ತಿಳಿಸಲಾಗಿದೆ. ಡಾ.ನೀರಜ್​ ನಿವಾಸ ಕಲ್ಪವೃಕ್ಷದ ಬಳಿ ಪೊಲೀಸ್​ ಬಂದೋಬಸ್ತ್ ಒದಗಿಸಲಾಗಿದೆ.

ಆತ್ಮಹತ್ಯೆ ಪ್ರಕರಣ: ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು

ಬಿ.ಎಸ್. ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ನೇಣಿಗೆ ಶರಣಾದ ಘಟನೆಗೆ ಸಂಬಂಧಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಪತಿ ನೀರಜ್ ದೂರಿನ ಆಧಾರದ ಮೇಲೆ ಯುಡಿಆರ್ ಕೇಸ್ ದಾಖಲಿಸಲಾಗಿದೆ. ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಡಾ. ಸೌಂದರ್ಯ ಪತಿ ನೀರಜ್ ಬೆಳಗ್ಗೆ ಡ್ಯೂಟಿಗೆ ತೆರಳಿದ್ದರು. ಆದರೆ, ಡಾ. ನೀರಜ್​​ಗೆ ಬೆಳಗ್ಗೆ ಹತ್ತು ಗಂಟೆಗೆ ಫೋನ್​ ಕಾಲ್ ಬಂದಿದೆ. ಮೇಡಂ ರೂಂ ಬಾಗಿಲು ಓಪನ್ ಮಾಡ್ತಾ ಇಲ್ಲ ಎಂದು ಕರೆ ಬಂದಿದೆ. 10.30 ರ ಸುಮಾರಿಗೆ ಪತಿ ನೀರಜ್​​ ಮನೆಗೆ ಆಗಮಿಸಿದ್ದಾರೆ. ಬಾಗಿಲು ಮುರಿದು ಒಳ ಹೋದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಸೀಲಿಂಗ್ ಫ್ಯಾನ್​​ಗೆ ನೇಣು ಹಾಕಿಕೊಂಡಿರೋದು ಬೆಳಕಿಗೆ ಬಂದಿದೆ. ಇದೀಗ ನೀರಜ್ ದೂರಿನ ಮೇರೆಗೆ ಪೊಲೀಸರು ಯುಡಿಆರ್ ದಾಖಲಿಸಿದ್ದಾರೆ.

ಡಾ. ಸೌಂದರ್ಯ ಕುತ್ತಿಗೆಯ ಭಾಗದಲ್ಲಿ ಮಾತ್ರ ಮಾರ್ಕ್ ಇದೆ. ಕುತ್ತಿಗೆಯ ಭಾಗದಲ್ಲಿ ಬಿಟ್ಟರೆ ಬೇರೆ ಯಾವುದೇ ಮಾರ್ಕ್‌ ಇಲ್ಲ. ಡಾ. ಸೌಂದರ್ಯ ಮರಣೋತ್ತರ ಪರೀಕ್ಷೆ ವರದಿ ಸಿದ್ಧವಾಗಿದೆ. ಮರಣೋತ್ತರ ಪರೀಕ್ಷೆ ವರದಿ ಅಧಿಕಾರಿಗಳಿಗೆ ಹಸ್ತಾಂತರಿಸ್ತೇವೆ ಎಂದು ಮರಣೋತ್ತರ ಪರೀಕ್ಷೆ ಬಳಿಕ ವೈದ್ಯ ಸತೀಶ್ ಹೇಳಿಕೆ ನೀಡಿದ್ದಾರೆ. ಬೌರಿಂಗ್‌ ಆಸ್ಪತ್ರೆಯಲ್ಲಿ ನಡೆದಿದ್ದ ಮರಣೋತ್ತರ ಪರೀಕ್ಷೆಯನ್ನು ಮೂವರು ವೈದ್ಯರ ಸಮ್ಮುಖದಲ್ಲಿ ನಡೆಸಲಾಗಿದೆ. ತಹಶೀಲ್ದಾರ್‌ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಮರಣೋತ್ತರ ಪರೀಕ್ಷೆ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂದು ಹೇಳಿದ್ದಾರೆ.

ವೇಲ್​ನಿಂದ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ನೇಣಿಗೆ ಬಳಸಿದ್ದ ವೇಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಟಿವಿ9ಗೆ ಪೊಲೀಸ್​ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಹುಬ್ಬಳ್ಳಿಯಲ್ಲಿ ಮೃತ ಸೌಂದರ್ಯ ತಂದೆ ಮನೆ

ಮೃತ ಸೌಂದರ್ಯ ತಂದೆ ಮನೆ ಹುಬ್ಬಳ್ಳಿ ಮಧುರಾ ಎಸ್ಟೇಟ್‌ನಲ್ಲಿದೆ. ಹುಬ್ಬಳ್ಳಿಯ ನಿವಾಸಕ್ಕೆ ‘ಸೌಂದರ್ಯ’ ಅಂತಾ ತಂದೆ ಹೆಸರಿಟ್ಟಿದ್ದರು ಎಂದು ತಿಳಿದುಬಂದಿದೆ. ಮಾಜಿ ಸಿಎಂ ಯಡಿಯೂರಪ್ಪ ಅಳಿಯ ವಿ.ಬಿ.ಯಮಕನಮರಡಿ ಮೊದಲ ಮಗಳು ಸೌಂದರ್ಯ. ಹುಬ್ಬಳ್ಳಿಯ ನಿವಾಸದಲ್ಲಿ ಬಾಲ್ಯ ಜೀವನ ಕಳೆದಿದ್ದ ಸೌಂದರ್ಯ ತಂದೆಯ ಯಮಕನಮರಡಿ ನಿವೃತ್ತಿ ‌ಬಳಿಕ ಬೆಂಗಳೂರಲ್ಲಿ ನೆಲೆಸಿದ್ದರು. ಒಂದು ವರ್ಷದ ಹಿಂದೆ ಬೆಂಗಳೂರಿನ ನಿವಾಸಕ್ಕೆ ಕುಟುಂಬ ಶಿಫ್ಟ್‌ ಆಗಿತ್ತು ಎಂದು ಮಾಹಿತಿ ಲಭಿಸಿದೆ.

ಇದನ್ನೂ ಓದಿ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ, ಮೂರೂವರೆ ವರ್ಷದ ಹಿಂದಷ್ಟೇ ಮದುವೆಯಾಗಿದ್ದ ವೈದ್ಯೆ

ಇದನ್ನೂ ಓದಿ: ತಮಿಳುನಾಡಿನಲ್ಲಿ ಬಾಲಕಿಯ ಆತ್ಮಹತ್ಯೆ: ಹಾಸ್ಟೆಲ್​​​ನಲ್ಲಿ ಹೆಚ್ಚಿನ ಕೆಲಸ ಮಾಡಲು ಒತ್ತಾಯಿಸುತ್ತಿದ್ದರು ಎಂದು ಆರೋಪಿಸಿರುವ ವಿಡಿಯೊ ಬಹಿರಂಗ