AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್ ​ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ಕೋರ್ಟ್​ಗೆ ಆರೋಪ ಪಟ್ಟಿ ಸಲ್ಲಿಕೆ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಾಗಿದೆ.

ಬಿಎಸ್ ​ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ಕೋರ್ಟ್​ಗೆ ಆರೋಪ ಪಟ್ಟಿ ಸಲ್ಲಿಕೆ
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ
Ramesha M
| Edited By: |

Updated on:Jun 27, 2024 | 5:31 PM

Share

ಬೆಂಗಳೂರು, (ಜೂನ್ 27): ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಬಿಎಸ್​ವೈ ಬಂಧನ ಭೀತಿಯಲ್ಲಿದ್ದ ಪಾರಾಗಿದ್ದಾರೆ. ಇದೀಗ ಈ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿಯನ್ನು (ಚಾರ್ಜ್​ಶೀಟ್) ನ್ಯಾಯಾಲಕ್ಕೆ ಸಲ್ಲಿಸಲಾಗಿದೆ. ಇಂದು(ಜೂನ್ 27) ಪೊಲೀಸರು, ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದರು.

ಆರೋಪ ಪಟ್ಟಿಯಲ್ಲೇನಿದೆ?

ಬಾಲಕಿ ದಾಖಲಿಸಿದ್ದ ಹಳೇ ಕೇಸ್ ಬಗ್ಗೆ ವಿಚಾರಿಸುತ್ತಾ ರೂಮಿಗೆ ಕರೆದೊಯ್ದು ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಆರೋಪಪಟ್ಟಿಯಲ್ಲಿ ಉಲ್ಲೇಖವಾಗಿದೆ. ಬಾಲಕಿ ಪ್ರತಿಭಟಿಸಿದಾಗ ಹಣ ನೀಡಿ ಕಳುಹಿಸಿರುವುದಾಗಿ ಆರೋಪಿಸಲಾಗಿದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖವಾಗಿದೆ.

ನಂತರ ಬಾಲಕಿಯ ತಾಯಿ ಇದನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ಪೋಸ್ಟ್ ಆಗಿದ್ದ ವಿಡಿಯೋ ಡಿಲೀಟ್​ ಮಾಡಿಸಲು ಮೂವರು ಪ್ರಯತ್ನಿಸಿದ್ದಾರೆ. ವೈ.ಎಂ. ಅರುಣ್, ಎಂ.ರುದ್ರೇಶ್, ಜಿ.ಮರಿಸ್ವಾಮಿ ಎನ್ನುವರು ಮಹಿಳೆಯನ್ನು ಕರೆತಂದು ವಿಡಿಯೋ ಪೋಸ್ಟ್ ಡಿಲೀಟ್ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ನಾಲ್ವರ ವಿರುದ್ದವೂ ದ ಪೊಲೀಸರು, ಆರೋಪಪಟ್ಟಿ ದಾಖಲಿಸಿದ್ದಾರೆ.

ಇದನ್ನೂ ಓದಿ: ಪೋಕ್ಸೋ ಕೇಸ್‌: ಸತತ 3 ಗಂಟೆ ಸಿಐಡಿ ವಿಚಾರಣೆ ಎದುರಿಸಿದ ಬಿಎಸ್‌ ಯಡಿಯೂರಪ್ಪ

ತನ್ನ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿ ತಾಯಿ ಸದಾಶಿವನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಿಎಸ್‌ ಯಡಿಯೂರಪ್ಪ ಅವರ ಮೇಲಿತ್ತು. ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಆದ್ರೆ, ಹಲವು ಬಾರಿ ನೋಟಿಸ್‌ ನೀಡಿದರು ಆರೋಪಿ ಹಾಜರಾಗುತ್ತಿಲ್ಲವೆಂದು ಸಿಐಡಿ ಕೋರ್ಟ್‌ ಮೊರೆ ಹೋಗಿತ್ತು. ಗುರುವಾರ ಬೆಂಗಳೂರು ವಿಶೇಷ ನ್ಯಾಯಾಲಯವು ಬಂಧನಕ್ಕೆ ವಾರೆಂಟ್‌ ಜಾರಿ ಮಾಡಲು ಆದೇಶಿಸಿತ್ತು. ಆದರೆ, ಹೈಕೋರ್ಟ್‌ನಲ್ಲಿ ಬಂಧನ ಮಾಡದಂತೆ ಬಿಎಸ್‌ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಬಂಧನ ಮಾಡದಂತೆ ಹಾಗೂ ಜೂನ್‌ 17ಕ್ಕೆ ತಪ್ಪದೆ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಅದರಂತೆ ಬಿಎಸ್​ವೈ ಜೂನ್ 17ರಂದು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ಪ್ರಕರಣದ ಹಿನ್ನೆಲೆ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಮಾರ್ಚ್‌ 14ರ ರಾತ್ರಿ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿಂದೆ, ತಮ್ಮ 17 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಲಾಗಿತ್ತು. ಆದರೆ, ಯಾವುದೇ ಕ್ರಮ ಜರುಗಿರಲಿಲ್ಲ. ಫೆ. 2ರಂದು ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಿದ್ದರು. ನೀಡಲಾಗಿತ್ತು. ಆ ಹಿನ್ನೆಲೆಯಲ್ಲಿ, ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಪ್ರಾಸಿಕ್ಯೂಷನ್ ಪರವಾಗಿ ವಕಾಲತ್ತು ವಹಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಅಶೋಕ್ ಎನ್.ನಾಯಕ್ ಅವರನ್ನು ನೇಮಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:17 pm, Thu, 27 June 24