ಮಾಲ್ಡೀವ್ಸ್ ಪ್ರವಾಸದಿಂದ ಹಿಂದಿರುಗಿದ ಬಿಎಸ್ ಯಡಿಯೂರಪ್ಪ; 20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ

BS Yediyurappa: 20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪ್ರತಿ ಜಿಲ್ಲೆಗೂ ಒಂದೊಂದು ದಿನ ಭೇಟಿ ಕೊಡುತ್ತೇನೆ. ಜಿಲ್ಲಾವಾರು ಬಿಜೆಪಿ ಕಾರ್ಯಕರ್ತರ ಸಭೆ ನಡೆಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಮಾಲ್ಡೀವ್ಸ್ ಪ್ರವಾಸದಿಂದ ಹಿಂದಿರುಗಿದ ಬಿಎಸ್ ಯಡಿಯೂರಪ್ಪ; 20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us
| Updated By: ganapathi bhat

Updated on:Aug 23, 2021 | 10:31 PM

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ತೆಗೆದುಕೊಂಡ ಬಳಿಕ ಬಿ.ಎಸ್. ಯಡಿಯೂರಪ್ಪ ನಿರಾಳರಾಗಿದ್ದರು. ಕುಟುಂಬದೊಂದಿಗೆ ಸಮಯ ಕಳೆಯುವ ಯೋಚನೆಯಲ್ಲಿದ್ದರು. ಐದಾರು ದಿನಗಳ ಹಿಂದೆ ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದರು. ಇದೀಗ, ಮಾಲ್ಡೀವ್ಸ್ ಪ್ರವಾಸದಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಕ್ಕೆ ಹಿಂತಿರುಗಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ್ದಾರೆ.

20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪ್ರತಿ ಜಿಲ್ಲೆಗೂ ಒಂದೊಂದು ದಿನ ಭೇಟಿ ಕೊಡುತ್ತೇನೆ. ಜಿಲ್ಲಾವಾರು ಬಿಜೆಪಿ ಕಾರ್ಯಕರ್ತರ ಸಭೆ ನಡೆಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಹಳ ವರ್ಷಗಳ ನಂತರ ವಿದೇಶ ಪ್ರವಾಸ ಮಾಡಿದ್ದೇನೆ. ಸ್ನೇಹಿತರು, ಕುಟುಂಬಸ್ಥರ ಒತ್ತಾಯದ ಮೇರೆಗೆ ಪ್ರವಾಸ ಕೈಗೊಂಡಿದ್ದೇನೆ. ಮಾಲ್ಡೀವ್ಸ್ ಒಳ್ಳೆಯ ಸ್ಥಳ, ನಾನು ಕೂಡ ಖುಷಿ ಪಟ್ಟಿದ್ದೇನೆ ಎಂದು ಮಾಲ್ಡೀವ್ಸ್ ಪ್ರವಾಸದ ನಂತರ ಯಡಿಯೂರಪ್ಪ ತಿಳಿಸಿದ್ದಾರೆ.

ಆಗಸ್ಟ್ 25 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಮಂಡ್ಯದಲ್ಲಿ ಆಗಸ್ಟ್ 25 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಸಭೆಯನ್ನು ಉದ್ಘಾಟನೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು, ಕೊವಿಡ್ 3ನೇ ಅಲೆಯ ಕುರಿತಾಗಿ ನಡೆದಿರುವ ತಯಾರಿ, ಪಕ್ಷದ ಸಂಘಟನೆ, ಬೆಳಗಾವಿ, ಕಲಬುರ್ಗಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ ಚುನಾವಣೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳ ಬಗ್ಗೆ, ಮುಂದಿನ ಕಾರ್ಯಯೋಜನೆ, ವರದಿಗಳು ಹಾಗೂ ಮೋರ್ಚಾಗಳ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೊಂಡ ಯೋಜನೆ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

Naga Panchami 2021: ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಭೇಟಿ, ನಾಗರಪಂಚಮಿ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಕೆ

Published On - 10:30 pm, Mon, 23 August 21

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ