BS Yediyurappa: ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ; ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಮನ್ಸ್ ಜಾರಿ
ಲೋಕಾಯುಕ್ತ ಡಿವೈಎಸ್‌ಪಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ಹೆಚ್ಚುವರಿ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿ ಮಾಡಲಾಗಿದೆ. ಏಪ್ರಿಲ್ 19 ರಂದು ಖುದ್ದು ಹಾಜರಾಗುವಂತೆ ಬಿಎಸ್‌ವೈಗೆ ಸಮನ್ಸ್ ನೀಡಲಾಗಿದೆ. ವಿಶೇಷ ಕೋರ್ಟ್‌ನ ನ್ಯಾ.ಬಿ. ಜಯಂತ್ ಕುಮಾರ್ ಈ ಬಗ್ಗೆ ಆದೇಶ ನೀಡಿದ್ದಾರೆ.
ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಸಮನ್ಸ್ ಜಾರಿಗೆ ಆದೇಶ ನೀಡಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈ ಬಗ್ಗೆ ಆದೇಶ ಹೊರಡಿಸಿದೆ. ಏಪ್ರಿಲ್ 19 ರಂದು ಖುದ್ದು ಹಾಜರಾಗುವಂತೆ ಬಿಎಸ್ ಯಡಿಯೂರಪ್ಪಗೆ ಸಮನ್ಸ್ ನೀಡಲಾಗಿದೆ. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ಅನ್ನು ಕೋರ್ಟ್ ತಿರಸ್ಕರಿಸಿದೆ. ಈ ಬಗ್ಗೆ ವಾಸುದೇವರೆಡ್ಡಿ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. 2000-01 ರಲ್ಲಿ ಐಟಿ ಪಾರ್ಕ್‌ಗೆಂದು ಕೆಐಎಡಿಬಿ ಭೂಸ್ವಾಧೀನ ಪ್ರಕರಣದಲ್ಲಿ, ಬೆಳ್ಳಂದೂರು, ದೇವರಬೀಸನಹಳ್ಳಿಯಲ್ಲಿ ಭೂಸ್ವಾಧೀನ ಕೇಸ್ ಬಗ್ಗೆ ದೂರು ಸಲ್ಲಿಸಲಾಗಿತ್ತು.
ಬಿ.ಎಸ್ ಯಡಿಯೂರಪ್ಪ ಡಿಸಿಎಂ ಆಗಿದ್ದಾಗ 4.30 ಎಕರೆ ಡಿನೋಟಿಫೈ ಮಾಡಿಸಲಾಗಿದೆ ಎಂದು 2013 ರಲ್ಲಿ ವಾಸುದೇವರೆಡ್ಡಿ ಖಾಸಗಿ ದೂರು ಸಲ್ಲಿಸಿದ್ದರು. 2015 ರಲ್ಲಿ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿತ್ತು. ಆರೋಪದಲ್ಲಿ ಹುರುಳಿಲ್ಲವೆಂದು ಜನವರಿ 2021 ರಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಆದರೆ, ಬಿ ರಿಪೋರ್ಟ್ ತಿರಸ್ಕರಿಸಿ ತನಿಖೆ ನಡೆಸಲು ಆದೇಶಿಸಿತ್ತು. ಮತ್ತೆ ಲೋಕಾಯುಕ್ತ ಡಿವೈಎಸ್‌ಪಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ಹೆಚ್ಚುವರಿ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿ ಮಾಡಲಾಗಿದೆ. ಏಪ್ರಿಲ್ 19 ರಂದು ಖುದ್ದು ಹಾಜರಾಗುವಂತೆ ಬಿಎಸ್‌ವೈಗೆ ಸಮನ್ಸ್ ನೀಡಲಾಗಿದೆ. ವಿಶೇಷ ಕೋರ್ಟ್‌ನ ನ್ಯಾ.ಬಿ. ಜಯಂತ್ ಕುಮಾರ್ ಈ ಬಗ್ಗೆ ಆದೇಶ ನೀಡಿದ್ದಾರೆ.
ಬೆಂಗಳೂರಿನ ಪೀಣ್ಯ ಫ್ಲೈಓವರ್ ಮೇಲೆ ಸರಣಿ ಅಪಘಾತ
ಬೆಂಗಳೂರಿನ ಪೀಣ್ಯ ಫ್ಲೈಓವರ್ ಮೇಲೆ ಸರಣಿ ಅಪಘಾತವಾದ ಘಟನೆ ನಡೆದಿದೆ. ಡಿವೈಡರ್ಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಡಿವೈಡರ್ಗೆ ಡಿಕ್ಕಿಯಾಗಿ ಬಳಿಕ ಕಾರು 3 ವಾಹನಗಳಿಗೆ ಡಿಕ್ಕಿಯಾಗಿದೆ. ಜಾಲಹಳ್ಳಿ ಕ್ರಾಸ್ ಸಮೀಪ ಸಂಭವಿಸಿರುವ ಸರಣಿ ಅಪಘಾತದಿಂದಾಗಿ ಫ್ಲೈಓವರ್ ಮೇಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೀಣ್ಯ ಪೊಲೀಸ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಅಪಾರ್ಟ್ಮೆಂಟ್ ಬಳಿ ನಿಲ್ಲಿಸಿದ್ದ 80 ಸಾವಿರ ಮೌಲ್ಯದ ಬೈಕ್ ಕಳ್ಳತನ
ಬೆಂಗಳೂರು ಗ್ರಾಮಾಂತರದ ದಾಸರಹಳ್ಳಿಯಲ್ಲಿ ಸತ್ವ ಅಪಾರ್ಟ್ಮೆಂಟ್ ಬಳಿ ನಿಲ್ಲಿಸಿದ್ದ ಮನೋಜ್ ಎಂಬುವವರ 80 ಸಾವಿರ ಮೌಲ್ಯದ ಬೈಕ್ ಕಳ್ಳತನವಾಗಿದೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ; ಸಚಿವ ವಿ.ಸೋಮಣ್ಣ ವಿರುದ್ಧ ಸಮನ್ಸ್ ಜಾರಿ
ಇದನ್ನೂ ಓದಿ: ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್; ಪಾಸ್‌ಪೋರ್ಟ್ ನವೀಕರಣ, ದುಬೈಗೆ ತೆರಳಲು ಕೋರ್ಟ್ ಅನುಮತಿ- ಆದರೆ ಒಂದು ಷರತ್ತು
Published On - 10:53 pm, Sat, 26 March 22