ಬೆಂಗಳೂರು: ಇಡೀ ರಾಜ್ಯ ರಾಜಕೀಯವೇ ಕುತೂಹಲದಿಂದ ಕಾಯುತ್ತಿದ್ದ ಗೊಂದಲದ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಎರಡು ವರ್ಷ ಪೂರೈಸಿದ ಸಂಭ್ರಮಕ್ಕೆ ಇಂದು ಬಿಜೆಪಿ ಸಾಧನಾ ಸಮಾವೇಶ ಏರ್ಪಡಿಸಿದ್ದು ಸಿಎಂ ಬಿ.ಎಸ್. ಯಡಿಯೂರಪ್ಪ ಭಾವುಕರಾಗಿ ತಮ್ಮ ವಿಧಾಯ ಭಾಷಣ ಮಾಡಿದ್ದಾರೆ. ಈ ವೇಳೆ ತಾವು ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಸದ್ಯ ವಿಧಾನಸೌಧದಿಂದ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ.
ಕಾರಿನ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜಭವನಕ್ಕೆ ತೆರಳಿದ್ದಾರೆ. ಮಾಧುಸ್ವಾಮಿ, ಬಸವರಾಜ ಬೊಮ್ಮಾಯಿ, ಸಚಿವ ಲಕ್ಷ್ಮಣ ಸವದಿ, ಕೆ. ಸುಧಾಕರ್ ರಾಜಭವನಕ್ಕೆ ಆಗಮಿಸಿದ್ದಾರೆ.
ಈ ಹಿಂದೆ ವಿ.ಆರ್.ವಾಲಾ ರಾಜ್ಯಪಾಲರಾಗಿದ್ದಾಗ ಬಿ.ಎಸ್. ಯಡಿಯೂರಪ್ಪ ಜುಲೈ 26ರ ಸಂಜೆ 6 ಗಂಟೆಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ರಾಜ್ಯಪಾಲ ಗೆಹ್ಲೋಟ್‌ಗೆ ಪ್ರಮಾಣವಚನ ಸ್ವೀಕರಿಸಿದ ದಿನದಂದೇ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ.
ಇದನ್ನೂ ಓದಿ: ಬಿ ಎಸ್ ಯಡಿಯೂರಪ್ಪ ರಾಜೀನಾಮೆ: ಬಿಜೆಪಿ ಸಂಸದೀಯ ಮಂಡಳಿ ಮುಂದಿನ ನಡೆ ಏನು? ನಾಳೆಯೇ ಮುಂದಿನ ಸಿಎಂ ಆಯ್ಕೆ?
Published On - 12:34 pm, Mon, 26 July 21